ವಿಶ್ರಾಂತ ನ್ಯಾಯಮೂರ್ತಿ ಡಿ ವಿ ಶೈಲೇಂದ್ರ ಕುಮಾರ್ ನಿಧನ, ಸಿಎಂ ಸಂತಾಪ

By Gowthami KFirst Published Mar 3, 2023, 9:15 PM IST
Highlights

ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಡಿ ವಿ ಶೈಲೇಂದ್ರ ಕುಮಾರ್ (72) ರವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ.

ಬೆಂಗಳೂರು (ಮಾ.3): ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಡಿ ವಿ ಶೈಲೇಂದ್ರ ಕುಮಾರ್ (72) ರವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಅಕ್ರಮ ಗಣಿಗಾರಿಕೆ ವಿರುದ್ಧದ ಹೋರಾಟದಲ್ಲಿ ನಿವೃತ್ತ ನ್ಯಾ. ಡಿ.ವಿ.ಶೈಲೇಂದ್ರ ಕುಮಾರ್ ಗಮನ ಸೆಳೆದ ವ್ಯಕ್ತಿಯಾಗಿದ್ದರು. ಗಣಿಗಾರಿಕೆ ವಿರುದ್ಧ ಸಮರವನ್ನೇ ಸಾರಿದ್ದರು. ಅಷ್ಟೇ ಅಲ್ಲದೆ ಅವರು ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಆಗಿ ಸೇವೆ ಸಲ್ಲಿಸುತ್ತಿದ್ದಾಗ ಅನೇಕ ಮಹತ್ವದ ತೀರ್ಪುಗಳನ್ನು ನೀಡಿದ್ದರು.

ಪಕ್ಷ ಸೇರ್ಪಡೆ ಮುನ್ನವೇ ಬಿಜೆಪಿ ಸಭೆಯಲ್ಲಿ ಕಾಣಿಸಿಕೊಂಡ ಸುಮಲತಾ, ಮೋದಿ

Latest Videos

ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಡಿ ವಿ ಶೈಲೇಂದ್ರ ಕುಮಾರ್ ರವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪಾರದರ್ಶಕತೆಗೆ ಹೆಚ್ಚು ಮಹತ್ವ ನೀಡುತ್ತಿದ್ದ ಶ್ರೀಯುತರು ತಮ್ಮ ಆಸ್ತಿ ವಿವರವನ್ನು ಬಹಿರಂಗವಾಗಿ ಘೋಷಿಸಿಕೊಂಡಿದ್ದ ಮೊದಲ ನ್ಯಾಯಾಧೀಶ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತೇನೆ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿಃ

ಕಾರವಾರದಲ್ಲಿ ಹಾಲಿ-ಮಾಜಿ ಶಾಸಕರ ಜಟಾಪಟಿ, ರೂಪಾಲಿ ವಿರುದ್ಧ ಸತೀಶ್ ಸೈಲ್ ಹಲ್ಲೆ

ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಡಿ ವಿ ಶೈಲೇಂದ್ರ ಕುಮಾರ್ ರವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪಾರದರ್ಶಕತೆಗೆ ಹೆಚ್ಚು ಮಹತ್ವ ನೀಡುತ್ತಿದ್ದ ಶ್ರೀಯುತರು ತಮ್ಮ ಆಸ್ತಿ ವಿವರವನ್ನು ಬಹಿರಂಗವಾಗಿ ಘೋಷಿಸಿಕೊಂಡಿದ್ದ ಮೊದಲ ನ್ಯಾಯಾಧೀಶ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
1/2 pic.twitter.com/ntrKKJoAiM

— Basavaraj S Bommai (@BSBommai)
click me!