ನಿಖಿಲ್ ವಿವಾಹ ವರದಿ ಸಲ್ಲಿಸಲು ಸರ್ಕಾರಕ್ಕೆ ಆದೇಶ: ಕುಮಾರಸ್ವಾಮಿಗೆ ಸಂಕಷ್ಟ!

By Kannadaprabha NewsFirst Published Apr 22, 2020, 9:30 AM IST
Highlights

ನಿಖಿಲ್‌ ಮದುವೆ ವರದಿ ಕೊಡಿ: ಹೈಕೋರ್ಟ್| - ಸಾಮಾಜಿಕ ಅಂತರ ಕಾದುಕೊಳ್ಳಲಾಗಿತ್ತೇ?| ಪರಿಶೀಲಿಸಲು ರಾಜ್ಯ ಸರ್ಕಾರಕ್ಕೆ ಸೂಚನೆ

ಬೆಂಗಳೂರು(ಏ.22): ಲಾಕ್‌ಡೌನ್‌ ಅವಧಿ ನಡುವೆಯೂ ರಾಮನಗರ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಅವರ ವಿವಾಹ ಸಮಾರಂಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿತ್ತೇ ಎಂಬ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.

ಕೊರೊನಾ ವೈರಸ್‌ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರದ ಮುಂಜಾಗ್ರತ ಕ್ರಮ ಕೈಗೊಳ್ಳುವ ಮತ್ತು ಲಾಕ್‌ಡೌನ್‌ ಹಿನ್ನೆಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಅನನುಕೂಲತೆಗಳ ವಿಚಾರವಾಗಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠವು ಮಂಗಳವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಸಿತು.

ಲಾಕ್‌ಡೌನ್ ಉಲ್ಲಂಘನೆ ಆರೋಪ: ವಚನದ ಮೂಲಕ ವಿರೋಧಿಗಳಿಗೆ HDK ಟಾಂಗ್

ಈ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ ಮದುವೆ ವಿಚಾರವನ್ನು ಮುಖ್ಯ ನ್ಯಾಯಮೂರ್ತಿ ಓಕ ಅವರು ಪ್ರಸ್ತಾಪಿಸಿದರು.

ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಪುತ್ರನ ವಿವಾಹ ನಡೆದಿದ್ದು, ಮದುವೆಯಲ್ಲಿ ಎಷ್ಟು ಜನ ಭಾಗವಹಿಸಿದ್ದರು, ಅಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುತ್ತೇ ಎಂಬ ಬಗ್ಗೆ ಪರಿಶೀಲನೆ ನಡೆಸಿ ವರದಿಯನ್ನು ಸಲ್ಲಿಸಬೇಕು ಎಂದು ಸರ್ಕಾರಿ ವಕೀಲರಿಗೆ ಸೂಚಿಸಿತು.

ಅಲ್ಲದೇ ಶಾಸಕರು, ಸಂಸದರು ಹಾಗೂ ಸಚಿವರು ಸೇರಿದಂತೆ ಜನಪ್ರತಿನಿಧಿಗಳು ಜನರಿಗೆ ಆಹಾರ, ದಿನಸಿ ಹಾಗೂ ಇತರೆ ಜೀವನಾವಶ್ಯಕ ವಸ್ತುಗಳನ್ನು ವಿತರಣೆ ಮಾಡಿದ ಬಹುತೇಕ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡಿಲ್ಲ ಎಂದು ಮುಖ್ಯ ನ್ಯಾಯಮೂರ್ತಿಗಳು ಬೇಸರ ವ್ಯಕ್ತಪಡಿಸಿದರು.

ಲಾಕ್‌ಡೌನ್ ಉಲ್ಲಂಘನೆ ಆರೋಪ: ವಚನದ ಮೂಲಕ ವಿರೋಧಿಗಳಿಗೆ HDK ಟಾಂಗ್

ಇಂತಹ ಘಟನೆಗಳ ಬಗ್ಗೆ ಮಾಧ್ಯಮಗಳಲ್ಲಿ ವರದಿ ಕೂಡ ಪ್ರಕಟಗೊಂಡಿವೆ. ಏಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ? ಜನಪ್ರತಿನಿಧಿಗಳು ಭಾಗವಹಿಸಿದ ಕಾರ್ಯಕ್ರಮಗಳ ಪರಿಸ್ಥಿತಿಯೇ ಹೀಗಾದರೆ ಏನು ಮಾಡಲು ಸಾಧ್ಯ? ಈ ಸಂಬಂಧ ಜನಪ್ರತಿನಿಧಿಗಳಿಗೆ ಯಾವ ಸೂಚನೆಗಳನ್ನು ನೀಡಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಯಾವ ರೀತಿ ಕ್ರಮಗಳನ್ನು ಕೈಗೊಂಡಿದೆ ಎಂದು ವರದಿ ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಓಕ ಅವರು ಸರ್ಕಾರಿ ವಕೀಲರಿಗೆ ಸೂಚಿಸಿದರು.

"

click me!