ಮದುವೆ ಪತ್ರಿಕೆಯಲ್ಲಿ ಮೋದಿ ಪರ ಮತಯಾಚನೆ ಕೇಸ್‌ಗೆ ತಡೆ

By Kannadaprabha News  |  First Published Nov 12, 2024, 12:15 PM IST

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಮದುಮಗ ಶಿವಪ್ರಸಾದ್‌ ವಿರುದ್ಧ ಚುನಾವಣಾಧಿಕಾರಿ ಹೂಡಿದ್ದ ಪ್ರಕರಣಕ್ಕೆ ತಡೆ ನೀಡಿದ ಹೈಕೋರ್ಟ್


ಬೆಂಗಳೂರು(ನ.12):  ಕಳೆದ ಲೋಕಸಭೆ ಚುನಾವಣೆಯ ವೇಳೆ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪ್ರಧಾನಿ ಮೋದಿ ಪರ ಮತ ಕೇಳಿದ್ದ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಮದುಮಗ ಶಿವಪ್ರಸಾದ್‌ ವಿರುದ್ಧ ಚುನಾವಣಾಧಿಕಾರಿ ಹೂಡಿದ್ದ ಪ್ರಕರಣಕ್ಕೆ ಹೈಕೋರ್ಟ್ ಸೋಮವಾರ ತಡೆ ನೀಡಿದೆ. 

ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ದೂರು ಮತ್ತು ಅದಕ್ಕೆ ಸಂಬಂಧಿಸಿ ಅಧೀನ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಶಿವಪ್ರಸಾದ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುವ ಮುನ್ನವೇ ಆಹ್ವಾನ ಪತ್ರಿಕೆ ಮುದ್ರಣವಾಗಿದೆ. 

Tap to resize

Latest Videos

undefined

ವಿದ್ಯುತ್‌ ತಂತಿ ಸ್ಪರ್ಶಿಸಿ ಬಾಲಕ ಗಾಯಗೊಂಡ ಕೇಸ್‌: ಬೆಸ್ಕಾಂ ಅಧಿಕಾರಿಗಳ ವಿರುದ್ಧ ಹೈಕೋರ್ಟ್‌ ಚಾಟಿ

ಹಾಗಾಗಿ, ಅರ್ಜಿ ದಾರರ ವಿರುದ್ಧ ಪುತ್ತೂರು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡಲಾಗುತ್ತಿದೆ ಎಂದು ಆದೇಶಿಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಾದಮಂಡಿಸಿದವಕೀಲ ಎಂ.ವಿನೋದ್ ಕುಮಾ‌ರ್ ಇದು ಕಾನೂನು ಬಾಹಿರವಾಗಿರುವ ಕಾರಣ ಅರ್ಜಿದಾರರ ವಿರುದ್ದದ ಪ್ರಕರಣ ರದ್ದುಗೊಳಿಸಬೇಕು ಎಂದು ನ್ಯಾಯಾಲಯವನ್ನು ಕೋರಿದರು. 

click me!