
ಕಲಬುರಗಿ (ಜುಲೈ.8): ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ತಕ್ಷಣ ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ರದ್ದುಗೊಳಿಸಿ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಸರ್ಕಾರದ ಈ ಕ್ರಮ ಪ್ರಶ್ನಿಸಿ, ಕಲಬುರಗಿ ಹೈಕೋರ್ಟ್ ಪೀಠದಲ್ಲಿ 16 ಅರ್ಜಿಗಳು ಸಲ್ಲಿಕೆಯಾಗಿದ್ದವು. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಪೀಠ, ಮುಂದಿನ ವಿಚಾರಣೆವರೆಗೂ ಜನೌಷಧ ಕೇಂದ್ರ ಸ್ಥಗಿತ ಬೇಡ ಎಂದು ಮಧ್ಯಂತರ ಆದೇಶ ನೀಡಿದೆ.
ಈ ಕೇಂದ್ರಗಳು ರೋಗಿಗಳಿಗೆ ರಿಯಾಯಿತಿ ದರದಲ್ಲಿ ಔಷಧಗಳನ್ನು ಒದಗಿಸುತ್ತಿವೆ. ಇದರಿಂದ ಬಡ ರೋಗಿಗಳಿಗೆ ತುಂಬಾ ಅನುಕೂಲವಾಗಿದೆ. ರಾಜ್ಯ ಸರ್ಕಾರದ ಈ ನಿರ್ಧಾರ, ಸಾರ್ವಜನಿಕ ಆರೋಗ್ಯ ಸೇವೆಯ ಹಕ್ಕನ್ನು ಉಲ್ಲಂಘಿಸುತ್ತದೆ. ಇವುಗಳನ್ನು ಮುಚ್ಚಿದರೆ ರೋಗಿಗಳು ಮಾರುಕಟ್ಟೆಯಲ್ಲಿ ದುಬಾರಿ ಬೆಲೆ ತೆತ್ತು ಔಷಧ ಕೊಂಡುಕೊಳ್ಳಬೇಕಾಗುತ್ತದೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು. ಅರ್ಜಿದಾರರ ಪರ ವಾದ ಆಲಿಸಿದ ನ್ಯಾಯಪೀಠ, ಈ ಕುರಿತು ಮಧ್ಯಂತರ ಆದೇಶ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ