ಬೆಂಗಳೂರಲ್ಲಿ ಎಂಟು ವರ್ಷದ ಗರಿಷ್ಠ ಉಷ್ಣಾಂಶ: ಉರಿ ಉರಿ ತಾಪ

By Kannadaprabha News  |  First Published Apr 7, 2024, 6:59 AM IST

ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಗರಿಷ್ಠ ಉಷ್ಣಾಂಶ 37.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದು, ಇದು ಕಳೆದ ಎಂಟು ವರ್ಷದಲ್ಲಿ ಏಪ್ರಿಲ್‌ನಲ್ಲಿ ದಾಖಲಾದ ಅತಿ ಹೆಚ್ಚು ಗರಿಷ್ಠ ಉಷ್ಣಾಂಶವಾಗಿದೆ. 
 


ಬೆಂಗಳೂರು (ಏ.07): ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಗರಿಷ್ಠ ಉಷ್ಣಾಂಶ 37.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದು, ಇದು ಕಳೆದ ಎಂಟು ವರ್ಷದಲ್ಲಿ ಏಪ್ರಿಲ್‌ನಲ್ಲಿ ದಾಖಲಾದ ಅತಿ ಹೆಚ್ಚು ಗರಿಷ್ಠ ಉಷ್ಣಾಂಶವಾಗಿದೆ. ನಗರದಲ್ಲಿ ಕಳೆದೊಂದು ವಾರದಿಂದ ನಗರದಲ್ಲಿ ಉಷ್ಣಾಂಶದಲ್ಲಿ ಏರಿಕೆಯಾಗುತ್ತಿದೆ. ಶನಿವಾರ 37.6 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದ್ದು, ಇದು ವಾಡಿಕೆ ಪ್ರಮಾಣಕ್ಕಿಂತ 3.6 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಿದೆ. ಏಪ್ರಿಲ್‌ನ ವಾಡಿಕೆ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್‌ ಆಗಿದೆ.

2016ರಲ್ಲಿ 39.2 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ಸಾರ್ವಕಾಲಿಕ ದಾಖಲೆಯಾಗಿತ್ತು. ಆ ಬಳಿಕ 2017ರಲ್ಲಿ 37.0, 2018ರಲ್ಲಿ 34.9, 2019ರಲ್ಲಿ 37.0, 2020ರಲ್ಲಿ 36.4, ಹಾಗೂ 2021ರಲ್ಲಿ 37.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ 37.8 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ, ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ 37.0 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

Tap to resize

Latest Videos

ಬೆಲೆ ಏರಿಕೆ ಬಿಸಿ ತಗ್ಗಿಸಿದ ಗ್ಯಾರಂಟಿ ಯೋಜನೆಗಳು: ಸಿಎಂ ಸಿದ್ದರಾಮಯ್ಯ

ಕಳೆದ ಆರು ದಿನಗಳ ನಗರದ ಗರಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ದಿನ ಗರಿಷ್ಠ ಉಷ್ಣಾಂಶ
ಏ.1 - 35.1
ಏ.2 - 37.2
ಏ.3 - 36.6
ಏ.4 - 37
ಏ.5 - 37
ಏ.6 - 37.6

click me!