ತಾಕತ್ತು ಇದ್ರೆ ಹಿಂದೂ ರಾಷ್ಟ್ರವಾಗೋದನ್ನು ತಡೆಯಲಿ: ಸಿಎಂ ಸಿದ್ದರಾಮಯ್ಯಗೆ ಸಂಸದ ಅನಂತಕುಮಾರ ಹೆಗಡೆ ಸವಾಲು!

By Ravi Janekal  |  First Published Dec 24, 2023, 4:49 PM IST

ಕಾಂಗ್ರೆಸ್ ಸರ್ಕಾರ ಹುಚ್ಚು ಮಹಮದ್ ಸರ್ಕಾರ. ಹಿಜಾಬಿನ ಹಿಂದೆ ತಿರುಗುವ ಈ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ. ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಸಂಸದ ಅನಂತಕುಮಾರ್ ಹೆಗಡೆ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


ಕಾರವಾರ, ಉತ್ತರಕನ್ನಡ (ಡಿ.24): ಕಾಂಗ್ರೆಸ್ ಸರ್ಕಾರ ಹುಚ್ಚು ಮಹಮದ್ ಸರ್ಕಾರ. ಹಿಜಾಬಿನ ಹಿಂದೆ ತಿರುಗುವ ಈ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ. ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಸಂಸದ ಅನಂತಕುಮಾರ್ ಹೆಗಡೆ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ದೇಶ ಹಿಂದು ರಾಷ್ಟ್ರವಾಗಲು ಬಿಡೊಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಸಂಬಂಧ ಇಂದು ಶಿರಸಿಯಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂಸದರು, ಸಿದ್ದರಾಮಯ್ಯನವರಿಗೆ ಧಮ್ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನು ತಡೆಯಲಿ ಎಂದು ಸವಾಲು ಹಾಕಿದರು.

Latest Videos

undefined

ಅಯೋಧ್ಯೆ ರೀತಿ ಅಂಜನಾದ್ರಿ ಅಭಿವೃದ್ಧಿಪಡಿಸುವೆ; ಶಾಸಕ ಜನಾರ್ದನ ರೆಡ್ಡಿ ಭರವಸೆ

ಅಲ್ಪಸಂಖ್ಯಾತರ ವೋಟುಗಳು ಇಲ್ಲದೇ ಕಾಂಗ್ರೆಸ್ ಬದುಕಲು  ಸಾಧ್ಯವಿಲ್ಲ. ಯಾವತ್ತೂ ಕಾಂಗ್ರೆಸ್ ಬಹುಸಂಖ್ಯಾತರ ರಾಜಕಾರಣ ಮಾಡಿಲ್ಲ. ಮನಸ್ಸಿಗೆ ಬಂದಂತೆ ರಾಜಕಾರಣ ಮಾಡುತ್ತಿದ್ದಾರೆ. ಈ ರಾಜ್ಯವನ್ನು ಸಾಂಸ್ಕೃತಿಕವಾಗಿ ,ಸಾಮಾಜಿಕವಾಗಿ ತೊಂದರೆಗೀಡು ಮಾಡಿದ ವ್ಯಕ್ತಿ. ಅವನ ಹೆಸರನ್ನೇ ತೆಗದುಕೊಂಡು ಕಾಂಗ್ರೆಸ್ ರಾಜಕಾರಣ ಮಾಡುತ್ತೆ ಎಂದರೇ ಕಾಂಗ್ರೆಸ್ ಗೆ ಮುಂದಿನ ದಿನ ಜನತೆ ಹೇಗೆ ಉತ್ತರ ಕೊಡುತ್ತೆ ಎಂಬುದನ್ನು ಯೋಚನೆ ಮಾಡಬೇಕು ಎಂದು ಎಚ್ಚರಿಕೆ ನೀಡಿದರು. 

ಇನ್ನು ಶಾಲೆಗೆ ಯಾರು ಬೇಕಾದ್ರು ಏನು ಬೇಕಾದ್ರು ಡ್ರೆಸ್ ಹಾಕಿಕೊಂಡು ಹೋಗಬಹುದು ಎಂಬ ಸಿದ್ದರಾಮಯ್ಯರ ಹೇಳಿಕೆಗೆ ಕಿಡಿಕಾರಿದ ಅವರು, ಇವರ ಹೇಳಿಕೆ ಮುಂದಿನ ದಿನ ಆತಂಕಕಾರಿ ಬೆಳವಣಿಗೆಗೆ ಕಾರಣ ಆಗುತ್ತೆ. ನಮ್ಮವರು ಕೇಸರಿ ಶಾಲು ಹಾಕಿಕೊಂಡು ಹೋಗ್ತಾರೆ , ಅವರು ಹಿಜಾಬ್  ಹಾಕಿಕೊಂಡು ಹೋಗ್ತಾರೆ. ಸರ್ಕಾರಕ್ಕೆ ಒಂದು ಚೌಕಟ್ಟಿನ ಕಲ್ಪನೆ ಇಲ್ಲಾ ಎಂದಾದರೇ ಸರ್ಕಾರ ಇದೆ ಎಂದು ಅನಿಸುವುದಿಲ್ಲ. ಸಿದ್ದರಾಮಯ್ಯನ ದುರಂಹಕಾರಿ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದರು.

ಗ್ಯಾರಂಟಿ ಯೋಜನೆ ವಿರುದ್ಧ ಕಿಡಿ:

ಆರ್ಥಿಕ ಸುಭದ್ರತೆಯ ಕಲ್ಪನೆಯೇ ಇಲ್ಲದಂಥ ಕೆಲವರು ಮಾಡಿದಂತಹ ಉಪದ್ರವ ಇದು. ಜನರಿಗೂ ಸಹ ಇದು ಬೇಕಾಗಿಲ್ಲ. ಇದರ ಪರಿಣಾಮ ಅಭಿವೃದ್ಧಿಗೆ ಹಣವಿಲ್ಲ. ಸಾಲ ತಂದು ಈ ಸರ್ಕಾರ ಫ್ರೀ ಬಸ್ ಕೊಟ್ಟಿರುವುದು ಹುಚ್ಚು ಮಹಮದ್ ತುಘಲಕ್  ಸರ್ಕಾರದಂತೆ ಸಿದ್ದರಾಮಯ್ಯ ಆಡಳಿತ ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. 

ಏಷ್ಯಾ ಮಾಲ್‌ಗೆ ನುಗ್ಗಿ ಗಲಾಟೆ ಆರೋಪ; ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಎಫ್‌ಐಆರ್!

ರಾಮಮಂದಿರ ನಿರ್ಮಾಣ ಹಿಂದು ಸಮಾಜದ ವಿಜಯ:

ರಾಮಮಂದಿರ ನಿರ್ಮಾಣವಾಗಿ ಉದ್ಘಾಟನೆಯಾಗ್ತಿರೋದು ಇದು ಹಿಂದೂ ಸಮಾಜದ ನಿರ್ಮಾಣದ ಮೊದಲ ಹೆಜ್ಜೆಯ ಗುರುತು ಎಂದು ಅಭಿಪ್ರಾಯಪಟ್ಟರು. ವೈಯಕ್ತಿ ಕಾರಣದಿಂದ ರಾಜಕೀಯದಿಂದ ದೂರವಿದ್ದೆ. ಚುನಾವಣೆ ರಾಜಕಾರಣ, ಪಕ್ಷದ ರಾಜಕಾರಣದಿಂದ ಆರೋಗ್ಯದ ಸಮಸ್ಯೆ ಯಿಂದಾಗಿ  ದೂರವಿದ್ದೆ. ಚುನಾವಣೆಗೆ ನಿಲ್ಲಬೇಕು ಎಂದು ಕಾರ್ಯಕರ್ತರಿಂದ ಬೇಡಿಕೆ ಬರುತ್ತಿದೆ ಒತ್ತಡ ಬರುತ್ತಿದೆ. 

click me!