ಬೆಂಗಳೂರು(ಫೆ.19): ಗಾಂಧಿ ಕೊಂದ ಗೋಡ್ಸೆ ಸಂತತಿಯ ಬಿಜೆಪಿಯವರು ಜನರ ದಾರಿ ತಪ್ಪಿಸಿ ಹಿಂದುತ್ವದ ಅಮಲು ತುಂಬುತ್ತಿದ್ದಾರೆ. ಕೋಮುವಾದ ಸೃಷ್ಟಿಸುತ್ತಿದ್ದಾರೆ. ಇದು ಸಮಾಜಕ್ಕೆ ಬಹಳ ಅಪಾಯಕಾರಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದ ಪುಟ್ಟಣ್ಣ ಚೆಟ್ಟಿಪುರಭವನದಲ್ಲಿ ಗುರುವಾರ ಆಯೋಜಿಸಿದ್ದ ರಾಜ್ಯ ವಿಧಾನ ಪರಿಷತ್‌ನ ನೂತನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
undefined
ಎಬಿವಿಪಿ, ಆರೆಸ್ಸೆಸ್, ಸಂಘ ಪರಿವಾರ ಮೊದಲೂ ಇದ್ದವು. ಈಗಲೂ ಇವೆ. ಆದರೆ, ಮೂಲಭೂತವಾದಿಗಳಿಂದಾಗಿ ಇಂದಿನ ರಾಜಕಾರಣದಲ್ಲಿ ಮೌಲ್ಯ ಕುಸಿಯುತ್ತಿದೆ. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಸಂಪೂರ್ಣ ಕೋಮುವಾದ ಸೃಷ್ಟಿಸುತ್ತಿದ್ದಾರೆ. ಹಿಂದುತ್ವದ ಹೆಸರಲ್ಲಿ ಜನರ ನೈಜ ಸಮಸ್ಯೆಗಳನ್ನು ಬದಿಗೊತ್ತಿ ಜನರಿಗೆ ಬರೀ ಸುಳ್ಳುಗಳನ್ನು ಹೇಳಿ, ದಾರಿ ತಪ್ಪಿಸಿ ಹಿಂದುತ್ವದ ಅಮಲು ತುಂಬುತ್ತಿದ್ದಾರೆ. ಇದು ಸಮಾಜಕ್ಕೆ ಬಹಳ ಅಪಾಯಕಾರಿ ಎಂದರು.
Flag Row ರಾಷ್ಟ್ರಧ್ವಜ ಬದಲಿಸುವುದು ಕಾಂಗ್ರೆಸ್ ಅಜೆಂಡಾ, ಸಾಕ್ಷಿ ಕೊಟ್ಟ ಬಿಜೆಪಿ
ಹಿಜಾಬ್ ವಿಚಾರವನ್ನೇ ನೋಡಿ. ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬನ್ನು ಹೊಸದಾಗಿ ಧರಿಸುತ್ತಿದ್ದಾರಾ? ಇಲ್ಲ. ನಾವು ಕೇಸರಿ ಶಾಲು ಹಾಕಿಕೊಳ್ಳುತ್ತಿದ್ವಾ? ಇಲ್ಲ. ಶಾಲಾ ಮಕ್ಕಳಿಗೆ ಕೇಸರಿ ಶಾಲು ಪೇಟ ಕೊಟ್ಟು ಕೋಮುಭಾವನೆ ಸೃಷ್ಟಿಸುತ್ತಿದ್ದಾರೆ. ಇದೆಲ್ಲವನ್ನೂ ಮಾಡುತ್ತಿರುವುದರ ಉದ್ದೇಶ ಬೇರೇನೂ ಇಲ್ಲ. ಬಿಜೆಪಿಯವರು ಕೇಂದ್ರ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ದೇಶ, ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ. .52 ಲಕ್ಷ ಕೋಟಿ ಇದ್ದ ಭಾರತದ ಸಾಲ ಕಳೆದ ಎಂಟು ವರ್ಷದಲ್ಲಿ .152 ಲಕ್ಷ ಕೋಟಿಗೆ ಏರಿದೆ. ಶೇ.60ರಷ್ಟುಸಣ್ಣ ಕೈಗಾರಿಕೆಗಳು ಮುಚ್ಚಿ ಹೋಗಿವೆ. ಶೇ.50ರಷ್ಟುಉದ್ಯೋಗ ಕಡಿತವಾಗಿದೆ. ಇದೆಲ್ಲವನ್ನೂ ಮರೆಮಾಚಲು ಹಿಂದುತ್ವದ ಹೆಸರಲ್ಲಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.
ಈಶ್ವರಪ್ಪ ಒಬ್ಬ ಮತಾಂಧ: ಸಚಿವ ಕೆ.ಎಸ್.ಈಶ್ವರಪ್ಪ ಒಬ್ಬ ಮತಾಂಧ. ರಾಷ್ಟ್ರಧ್ವಜಕ್ಕೆ ಅಗೌರವ ತೋರಿ ದೇಶ್ರೋಹದ ಕೆಲಸ ಮಾಡಿದ್ದಾನೆ ಎಂದು ಇದೇ ವೇಳೆ ಸಿದ್ದರಾಮಯ್ಯ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.
ಗಾಂಧಿ ಕೊಂದ ಗೋಡ್ಸೆ ಸಂತತಿಯವರು ಬಿಜೆಪಿಯಲ್ಲಿ ತರಬೇತಿಗೊಂಡ ಈಶ್ವರಪ್ಪ ಒಬ್ಬ ಮತಾಂಧ, ಶಿವಮೊಗ್ಗದಲ್ಲಿ ಕೇಸರಿ ಧ್ವಜ ಹಾರಿಸಿದ್ದನ್ನು ಸಮರ್ಥಿಸಿಕೊಂಡಿದ್ದಲ್ಲದೆ ಮುಂದೆ ಎಂದಾದರೂ ದೆಹಲಿಯ ಕೆಂಪುಕೋಟೆಯ ಮೇಲೂ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾನೆ. ಇದಕ್ಕಿಂತ ದೇಶದ್ರೋದ ಕೆಲಸ ಮತ್ತೊಂದಿಲ್ಲ. ಬಿಜೆಪಿಯವರಿಗೆ ಸಂವಿಧಾನ, ರಾಷ್ಟ್ರಧ್ವಜದ ಮೇಲೆ ಗೌರವ ಇಲ್ಲ. ಇಂತಹವರು ಸಚಿವರಾಗಿರಲು, ಅಧಿಕಾರದಲ್ಲಿರಲು ಅರ್ಹರಲ್ಲ ಎಂದರು.
Hijab Row: ಬಿಜೆಪಿ ರಾಜಕೀಯ ಲಾಭಕ್ಕೆ ಹಿಜಾಬ್ ವಿವಾದ ಸೃಷ್ಟಿ: ಮುನಿಯಪ್ಪ
ಕಾರ್ಯಕ್ರಮದಲ್ಲಿ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್ ಮತ್ತಿತರರಿದ್ದರು.
ಕಾಂಗ್ರೆಸ್ ಧರಣಿ:
ಸಚಿವ ಕೆ.ಎಸ್. ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದು, ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಇಲ್ಲಿಯ ಅಂಚೆ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ, ಇತ್ತೀಚಿನ ದಿನಗಳಲ್ಲಿ ಬಿಜೆಪಿ ಅಟ್ಟಹಾಸ ಹೆಚ್ಚಾಗಿದೆ. ರಾಜಕಾರಣದಲ್ಲಿ ಪರ-ವಿರೋಧ ಸಹಜ. ಆದರೆ ಸದನದಲ್ಲಿ ಅಭಿವೃದ್ಧಿ ಮೇಲೆ ಚರ್ಚೆ ಆಗಲಿ. ಮಾತಿನ ಮೇಲೆ ಹಿಡಿತ ಇಲ್ಲದ ಈಶ್ವರಪ್ಪ ರಾಜಕೀಯ ನಿವೃತ್ತಿ ಪಡೆಯುವುದು ಉತ್ತಮ. ರಾಷ್ಟ್ರಧ್ವಜವನ್ನೇ ಅವರು ಅಪಮಾನ ಮಾಡಿದ್ದಾರೆ. ವಿಧಾನಸೌಧದಲ್ಲಿ ಡಿ.ಕೆ. ಶಿವಕುಮಾರ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.
ಯೂಥ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ ಶೆಟ್ಟಿಮಾತನಾಡಿ, ಈಶ್ವರಪ್ಪ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆ. ಸಿದ್ದರಾಮಯ್ಯ ಬಗ್ಗೆ ಏಕ ವಚನದಲ್ಲಿ ಮಾತನಾಡಿದ್ದಾರೆ. ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಈಶ್ವರಪ್ಪ ಮೇಲೆ ಕ್ರಮಕೈಗೊಳ್ಳದಿದ್ದರೆ ಪ್ರತಿ ಬ್ಲಾಕ್ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.