ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧದ ಗೂಂಡಾ ಕಾಯ್ದೆ ರದ್ದು! ಜೈಲಿನಿಂದ ಬಿಡುಗಡೆ

By Sathish Kumar KH  |  First Published Sep 17, 2023, 2:10 PM IST

ಹಿಂದೂ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯನ್ನು ರದ್ದುಗೊಳಿಸಿದ ಸರ್ಕಾರ, ಅವರನ್ನು ಜೈಲಿನಿಂದ ಬಿಡುಗಡೆ ಮಾಡಿದೆ.


ಬೆಂಗಳೂರು (ಸೆ.17): ರಾಜ್ಯದಲ್ಲಿ ಹಿಂದೂಪರ ಹೋರಾಟಗಾರ ಹಾಗೂ ಗೋರಕ್ಷಕ ಎಂದು ವಿವಿಧ ಹೋರಾಟಗಳ ಮೂಲಕ ಹಲ್ಲೆ ಹಾಗೂ ವಿವಿಧ ಪ್ರಕರಣಗಳಡಿ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್‌ ದಾಖಲಿಸಿ ಜೈಲಿಗಟ್ಟಿದ್ದರು. ಆದರೆ, ಗಣೇಶ ಹಬ್ಬಕ್ಕೆ ಒಂದು ದಿನ ಮುಂಚಿತವಾಗಿ ರಾಷ್ಟ್ರ ರಕ್ಷಣಾ ಪಡೆಯ ಪುನೀತ್‌ಕುಮಾರ್‌ ಅಲಿಯಾಸ್‌ ಪುನೀತ್‌ ಕೆರೆಹಳ್ಳಿಗೆ ಗುಡ್‌ ನ್ಯೂಸ್‌ ನೀಡಿರುವ ಸರ್ಕಾರ, ಅವರ ವಿರುದ್ಧ ದಾಖಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಗೊಳಿಸಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಪೊಲೀಸ್‌ ಆಯುಕ್ತರು, ಬೆಂಗಳೂರು ನಗರ ಇವರು ಕರ್ನಾಟಕ ಕಳ್ಳ ಭಟ್ಟಿ ವ್ಯಾಪಾರಿಗಳ, ಮಾದಕ ವಸ್ತು ಅಪರಾಧಿಗಳ, ಜೂಜುಕೋರರ, ಗೂಂಡಾಗಳ, ಅನೈತಿಕ ವ್ಯವಹಾರ ಅಪರಾಧಿಗಳ, ಕೊಳಚೆ ಪ್ರದೇಶಗಳನ್ನು ಕಬಳಿಸುವವರ, ವಿಡಿಯೋ ಅಥವಾ ಆಡಿಯೋ ಪೈರೇಟ್ ಚಟುವಟಿಕೆಗಳ ತಡೆ ಅಧಿನಿಯಮ, 1985ರಡಿಯಲ್ಲಿ ಪುನೀತ್ ಕುಮಾರ್ ಅಲಿಯಾಸ್‌ ಪುನೀತ್ ಕೆರೆಹಳ್ಳಿ (32 ವರ್ಷ) ವಿರುದ್ಧ ಆ.11ರಂದು ಹೊರಡಿಸಿರುವ ಬಂಧನ ಆದೇಶವನ್ನು ಆ.17ರಂದು ಅನುಮೋದಿಸಲಾಗಿತ್ತು. ಆದರೆ, ಸಲಹಾ ಮಂಡಳಿಯು 'ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ' ಎಂದು ಸೆ.13ರ ವರದಿಯಲ್ಲಿ ಅಭಿಪ್ರಾಯಪಟ್ಟಿರುತ್ತದೆ.

Tap to resize

Latest Videos

10 ವರ್ಷಗಳಲ್ಲಿ ಲೆಕ್ಕವಿಲ್ಲದಷ್ಟು ಅಪರಾಧ, ಗೂಂಡಾ ಕಾಯ್ದೆಯಡಿ ಹಿಂದೂ ಕಾರ್ಯಕರ್ತ ಪುನಿತ್‌ ಕೆರೆಹಳ್ಳಿ ಬಂಧನ

ಆದ್ದರಿಂದ ಕರ್ನಾಟಕ ಸರ್ಕಾರವು ಸದರಿ ಅಧಿನಿಯಮದ 12ನೇ ಪುಕರಣದ 2ನೇ ಉಪ ಪುಕರಣದಡಿ ಪುದತ್ತವಾದ ಅಧಿಕಾರವನ್ನು ಚಲಾಯಿಸಿ, ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಇವರು, ಪುನೀತ್ ಕುಮಾರ್ ಅಲಿಯಾಸ್‌ ಪುನೀತ್ ಕೆರೆಹಳ್ಳಿ ವಿರುದ್ಧ ಹೊರಡಿಸಿರುವ ಬಂಧನ ಆದೇಶವನ್ನು ಹಿಂಪಡೆದು, ಈ ಪುಕರಣಕ್ಕೆ ಅನ್ವಯವಾಗುವಂತೆ ಮಾತ್ರ ತಕ್ಷಣದಿಂದ ಜಾರಿಗೆ ಬರುವಂತೆ ಬಂಧಮುಕ್ತಗೊಳಿಸಿ ಆದೇಶಿಸಿದೆ.

ಗೂಂಡಾ ಕಾಯ್ದೆ ಜಾರಿ ಬಗ್ಗೆ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಿದ್ದ ಹೈಕೋರ್ಟ್‌: ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್‌ಕುಮಾರ್‌ ಅಲಿಯಾಸ್‌ ಪುನೀತ್‌ ಕೆರೆಹಳ್ಳಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿರುವ ಸಂಬಂಧ ರಾಜ್ಯ ಸರ್ಕಾರ, ನಗರ ಪೊಲೀಸ್‌ ಆಯುಕ್ತರು ಮತ್ತು ಸಿಸಿಬಿ ಪೊಲೀಸರಿಗೆ ಹೈಕೋರ್ಟ್‌ನಿಂದ ಆ.24ರಂದು ನೋಟಿಸ್‌ ಜಾರಿ ಮಾಡಿತ್ತು. ಗೂಂಡಾ ಕಾಯ್ದೆಯಡಿ ತಮ್ಮನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿ ಪುನೀತ್‌ ಕೆರೆಹಳ್ಳಿ (Puneeth kerehalli) ಸಲ್ಲಿಸಿರುವ ಹೇಬಿಯಸ್‌ ಕಾರ್ಪಸ್‌ ಅರ್ಜಿ (Habeas Corpus Petition) ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್‌.ದಿನೇಶ್‌ ಕುಮಾರ್‌ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿತ್ತು.

ಇದ್ರೀಶ್ ಪಾಷಾ ಸಾವು ಪ್ರಕರಣ: ಹಿಂದೂ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿಗೆ ಜಾಮೀನು

ಸಮಾಜ ಸೇವಕ ಪುನೀತ್‌ ಕೆರೆಹಳ್ಳಿ ಎಂದು ವಾದ ಮಂಡನೆ: ಇನ್ನು ಈ ಅರ್ಜಿಯ ಕುರಿತು ವಿಚಾರಣೆ ವೇಳೆ ಪುನೀತ್‌ ಪರ ಹಿರಿಯ ವಕೀಲ ಅರುಣ್‌ ಶ್ಯಾಮ್‌ (Arun shyam) ವಾದ ಮಂಡಿಸಿ, ಅರ್ಜಿದಾರರು ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಅರ್ಜಿದಾರರು 'ರಾಷ್ಟ್ರ ರಕ್ಷಣಾ ಪಡೆ' ಸಂಘಟನೆ ಕಟ್ಟಿದೇಶಕ್ಕಾಗಿ ಹೋರಾಡುವ ಸಮಾನ ಮನಸ್ಕರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ದುರುದ್ದೇಶಪೂರ್ವಕವಾಗಿ ಹಲವು ಪ್ರಕರಣ ಹೂಡಿ ಮತ್ತು ರಾಜಕೀಯ ದ್ವೇಷದ ಕಾರಣಕ್ಕೆ ಅರ್ಜಿದಾರರನ್ನು ಆ.11ರಂದು ಗೂಂಡಾ ಕಾಯ್ದೆಯಡಿ ಅಕ್ರಮವಾಗಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರ ಪೊಲೀಸ್‌ ಆಯುಕ್ತರು ಯಾವುದೇ ವಿವೇಚನೆ ಬಳಸದೆ ಏಕಾಏಕಿ ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಿದ್ದಾರೆ. ಇದು ಏಕಪಕ್ಷೀಯ ನಡೆಯಾಗಿದ್ದು, ಆ ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದರು.

click me!