ಹಿಂದೂ ಪದ ವಿವಾದಾತ್ಮಕ ಹೇಳಿಕೆ: ಕೊನೆಗೂ ವಿಷಾದ ವ್ಯಕ್ತಪಡಿಸಿದ ಜಾರಕಿಹೊಳಿ!

By Ravi Janekal  |  First Published Nov 10, 2022, 3:03 PM IST

'ಹಿಂದು ಅಶ್ಲೀಲ ಪದ ಎಂಬ ವಿವಾದಾತ್ಮಕ ಹೇಳಿಕೆ ವಿಚಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕೊನೆಗೂ ವಿಷಾದ ವ್ಯಕ್ತಪಡಿಸಿದ್ದಾರೆ. ಈ ವಿಷಾದದ ಹಿಂದೆ ಕಾಂಗ್ರೆಸ್ ಹೈಕಮಾಂಡ್ ನಿಂದಲೇ ಒತ್ತಡವಿತ್ತು ಎಂದು ಉನ್ನತ ಮೂಲಗಳು ತಿಳಿಸಿವೆ.


ಬೆಂಗಳೂರು (ನ.10) : 'ಹಿಂದು ಅಶ್ಲೀಲ ಪದ ಎಂಬ ವಿವಾದಾತ್ಮಕ ಹೇಳಿಕೆ ವಿಚಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕೊನೆಗೂ ವಿಷಾದ ವ್ಯಕ್ತಪಡಿಸಿದ್ದಾರೆ. ಈ ವಿಷಾದದ ಹಿಂದೆ ಕಾಂಗ್ರೆಸ್ ಹೈಕಮಾಂಡ್ ನಿಂದಲೇ ಒತ್ತಡವಿತ್ತು ಎಂದು ಉನ್ನತ ಮೂಲಗಳು ತಿಳಿಸಿವೆ.

ನೋವಾಗಿದ್ದರೆ ವಿಷಾದ, ಹೇಳಿಕೆ ವಾಪಸ್ ಪಡೆದು ತನಿಖೆಗೆ ಆಗ್ರಹಿಸಿ ಸತೀಶ್ ಜಾರಕಿಹೊಳಿ!

Tap to resize

Latest Videos

ಹಿಂದು ಪದ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಜಾರಕಿಹೊಳಿ, ನೈಜತೆ ಬಿಟ್ಟು ಆ ವಿಚಾರವನ್ನು ತಿರುಚಿ ಅಪಪ್ರವಾರ ಮಾಡಿ ಗೊಂದಲ ಸೃಷ್ಟಿಸಲಾಗಿದೆ. ಹೇಳಿಕೆಯಲ್ಲಿ ಯಾವುದೇ ವಿವಾದ ಇಲ್ಲ. ಕಾಂಗ್ರೆಸ್‌ ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗಲ್ಲ. ನನ್ನ ಹೇಳಿಕೆಗೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ಜಾರಕಿಹೊಳಿ ತಿಳಿಸಿದರು.

ಇದು ಇಲ್ಲಿಗೆ ಮುಗಿಯುವುದಿಲ್ಲ. ನಾನು ಯಾವುದೇ ಚರ್ಚೆಗೆ ಸಿದ್ಧನಿದ್ದೇನೆ. ನನ್ನ ಹೇಳಿಕೆ ಅರಿವಾಗಲು ಬಹಳ ಸಮಯ ಬೇಕು. ನಾನು ದುಡುಕಿಲ್ಲ. ಅಧ್ಯಯನ ಮಾಡಿಯೇ ಹೇಳಿಕೆ ನೀಡಿದ್ದೇನೆ. ಆದರೆ ಹೇಳಿಕೆಯನ್ನುಅರ್ಥೈಸಿಕೊಳ್ಳದೆ ಮಾಧ್ಯಮಗಳ ಮೂಲಕ ಗೊಂದಲ ಮೂಡಿಸಲಾಯಿತು ಎಂದು ವಿಷಾದ ವ್ಯಕ್ತಪಡಿಸಿದರು.

ನನ್ನ ನಿಲುವಿನಿಂದ ಹಿಂದೆ ಸರಿಯಲ್ಲ. ಮನವರಿಕೆ ಮಾಡಲು ಪ್ರಯತ್ನ ಮಾಡುತ್ತೇನೆ. ಚರ್ಚೆಯಲ್ಲಿ ಭಾಗವಹಿಸಿದವರನ್ನು ಸಂಪರ್ಕ ಮಾಡುತ್ತೇನೆ. ಹಿಂದು ಪದದ ಹಿನ್ನೆಲೆ ಸಂಬಂಧಿಸಿದಂತೆ ಸಾಕಷ್ಟು ದಾಖಲೆಯೊಂದಿಗೆ ಹೇಳುತ್ತೇನೆ. ಸಾರ್ವಜನಿಕವಾಗಿ ಮನವರಿಕೆ  ಮಾಡಿಕೊಡುತ್ತೇನೆ. ಈ ವಿಚಾರ ಮುಕ್ತವಾಗಿ ಚರ್ಚೆಯಾಗಲೇಬೇಕು. ನಾನು ಯಾವುದೇ ರೀತಿಯಲ್ಲೂ ವಿವಾದಾತ್ಮಕ ಹೇಳಿಕೆ ನೀಡಿಲ್ಲ. ಆದರೆ ಹೇಳಿಕೆಯನ್ನು ತಿರುಚಿ ವಿನಾಕಾರಣ ಗೊಂದಲ ಮೂಡಿಸಲಾಗಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ತನಿಖೆಗೆ  ಒತ್ತಾಯ ಮಾಡಿದ್ದೇನೆ ಎಂದು ತಿಳಿಸಿದರು.

ಹಿಂದು ಹೇಳಿಕೆ: ಸತೀಶ್‌ ಜಾರಕಿಹೊಳಿ ವಿರುದ್ಧ ಕೋರ್ಟ್‌ಗೆ ದೂರು

ಹೈಕಮಾಂಡ್ ಒತ್ತಡದಿಂದ ಕ್ಷಮೆ?

ಹಿಂದು ಪದ ವಿವಾದಾತ್ಮಕ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆ ಖಂಡಿಸಿ ತೀವ್ರ ಪ್ರತಿಭಟನೆಗಳು ನಡೆದವು.  ಜಾರಕಿಹೊಳಿ ಹೇಳಿಕೆ ನೀಡಿದ ದಿನವೇ ರಣದೀಪ್ ಸುರ್ಜೇವಾಲ್ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಟ್ವೀಟ್ ಮೂಲಕ ಬಹಿರಂಗವಾಗಿ ಖಂಡಿಸಿದ್ದರು. ಎಲ್ಲ ಧರ್ಮಗಳ ನಂಬಿಕೆ ಗೌರವಿಸುವಂತೆ ಸಲಹೆ ನೀಡಿದ್ದರು. ಅಲ್ಲದೆ ಚುನಾವಣೆ ಹೊತ್ತಲ್ಲಿ ಇಂಥ ವಿವಾದಾತ್ಮಕ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆಂದು ಆತಂಕವ್ಯಕ್ತಪಡಿಸಿದ್ದರು. ಈ ಹೇಳಿಕೆ ಬಗ್ಗ ಜಾರಕಿಹೊಳಿ ಕ್ಷಮೆ ಕೇಳುವುದು ಒಳಿತು ಎಂದಿದ್ದರು. ಕಾಂಗ್ರೆಸ್ ಹೈಕಮಾಂಡ್‌ನ ಒತ್ತಡದಿಂದಲೇ ಇದೀಗ ಸತೀಶ್ ಜಾರಕಿಹೊಳಿ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.

click me!