ಚಾಮುಂಡಿಬೆಟ್ಟದಲ್ಲಿ ಮಹಿಷ ದಸರಾ ಆಚರಿಸಲು ಬಿಡುವುದಿಲ್ಲ. ಸಂಘರ್ಷವಾದರೂ ತಡೆಯುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಷ ದಸರಾ ಆಚರಣೆ ಅಸಂಬದ್ಧ ಮತ್ತು ಅನಾಚಾರ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಆಚರಿಸಲು ಅವಕಾಶ ನೀಡಿರಲಿಲ್ಲ. ಈಗಲೂ ಆಚರಿಸಲು ಬಿಡುವುದಿಲ್ಲ ಎಂದು ಹೇಳಿದರು.
ಮೈಸೂರು (ಸೆ.9): ಹಿಂದೂ ಧರ್ಮಕ್ಕೆ ಈ ಸೊಳ್ಳೆ, ನೊಣಗಳನ್ನೆಲ್ಲ ನುಂಗಿ ಜೀರ್ಣಸಿಕೊಳ್ಳುವ ಶಕ್ತಿ ಇದೆ ಎಂದು ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದರು. ಸನಾತನ ಧರ್ಮದ ವಿಚಾರವಾಗಿ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಮೈಸೂರಿನಲ್ಲಿ ಶುಕ್ರವಾರ ಪ್ರತಿಕ್ರಿಯಿಸಿ, ಸೂರ್ಯನ ಸುತ್ತ ಭೂಮಿ ಸುತ್ತುತ್ತಿದೆ ಎಂದು ಹೇಳಿದ ಏಕೈಕ ಧರ್ಮ ಹಿಂದೂ ಧರ್ಮ ಮಾತ್ರ. ಬೇರೆ ಧರ್ಮಗಳಿಗೆ ಖಗೋಳ ವಿಜ್ಞಾನದ ಬಗ್ಗೆ ಅರಿವೇ ಇಲ್ಲ. ಹಿಂದೂ ಧರ್ಮದ ಬಗ್ಗೆ ಅರಿವೇ ಇಲ್ಲದೆ, ಜ್ಞಾನ ಇಲ್ಲದೆ ಅಸಂಬದ್ಧ ಮಾತುಗಳನ್ನು ಆಡುತ್ತಾರೆ ಎಂದು ಕಿಡಿಕಾರಿದರು. 700 ವರ್ಷಗಳ ಕಾಲ ಮುಸಲ್ಮಾನರ ದಾಳಿಯನ್ನು, 200 ವರ್ಷಗಳ ಕಾಲ ಕ್ರೈಸ್ತರ ದಾಳಿಯನ್ನು ಸಹಿಸಿಕೊಂಡು ಇವತ್ತಿಗೂ ಶೇ.80ರಷ್ಟುಹಿಂದೂಗಳು ಈ ದೇಶದಲ್ಲಿ ಇದ್ದಾರೆ ಎಂದರೆ, ಹಿಂದೂ ಧರ್ಮಕ್ಕೆ ಈ ಸೊಳ್ಳೆ, ನೊಣಗಳನ್ನೆಲ್ಲ ನುಂಗಿ ಜೀರ್ಣಸಿಕೊಳ್ಳುವ ಶಕ್ತಿ ಇದೆ ಎಂದರ್ಥ ಎಂದು ಕುಟುಕಿದರು.
ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಿಸಲು ಬಿಡುವುದಿಲ್ಲ:
ಚಾಮುಂಡಿಬೆಟ್ಟದಲ್ಲಿ ಮಹಿಷ ದಸರಾ ಆಚರಿಸಲು ಬಿಡುವುದಿಲ್ಲ. ಸಂಘರ್ಷವಾದರೂ ತಡೆಯುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಷ ದಸರಾ ಆಚರಣೆ ಅಸಂಬದ್ಧ ಮತ್ತು ಅನಾಚಾರ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಆಚರಿಸಲು ಅವಕಾಶ ನೀಡಿರಲಿಲ್ಲ. ಈಗಲೂ ಆಚರಿಸಲು ಬಿಡುವುದಿಲ್ಲ ಎಂದು ಹೇಳಿದರು.
ರಾಜ್ಯ ಸರ್ಕಾರಕ್ಕೆ ದೇವಾಲಯ ಅಭಿವೃದ್ಧಿಗಿಂತ ಮಹಿಷ ದಸರಾವೇ ಮುಖ್ಯ: ಸಂಸದ ಪ್ರತಾಪ ಸಿಂಹ ಟೀಕೆ
ಸಾರ್ವಜನಿಕರು ಚಾಮುಂಡೇಶ್ವರಿ ದೇವಿ ದರ್ಶನ ಪಡೆಯಲು ಚಾಮುಂಡಿಬೆಟ್ಟಕ್ಕೆ ಬರುತ್ತಾರೆ. ಆಸ್ತಿಕರಿಗೆ ಚಾಮುಂಡೇಶ್ವರಿ ಇದ್ದಾಳೆ. ನಾಸಿಕ್ತರಿಗೆ ಬೇರೆಯವರು ಇರಬಹುದು. ಮಹಿಷ ದಸರಾ ಹೆಸರಿನಲ್ಲಿ ಚಾಮುಂಡಿಬೆಟ್ಟದಲ್ಲಿ ಅನಾಚಾರ ಮಾಡಲು ಬಿಡುವುದಿಲ್ಲ. ಮಹಿಷ ದಸರಾ ನಿಲ್ಲಿಸುವಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಆಯುಕ್ತರಿಗೆ ನೇರವಾಗಿ ಹೇಳುತ್ತಿದ್ದೇನೆ. ಇದಕ್ಕೆ ಅವಕಾಶ ಮಾಡಿಕೊಡಬಾರದು. ಸಂಘರ್ಷವಾದರೂ ಪರವಾಗಿಲ್ಲ ತಡೆಯುತ್ತೇವೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಷ ದಸರಾ ಆಚರಣೆಗೆ ಅವಕಾಶ ನೀಡದಂತೆ ಮನವಿ ಮಾಡುತ್ತೇನೆ. ಮಹಿಷ ದಸರಾ ಆಚರಿಸುವವರಿಗೆ ಒಂದು ಕೇಳುತ್ತೇನೆ. ಅವರ ಮನೆಯಲ್ಲಿ ಯಾವುದಾದರೂ ಫೋಟೋ ಇಟ್ಟು ಆಚರಿಸಲಿ. ಮಹಿಷನಂತಹ ಮಗು ಹುಟ್ಟಲೆಂದು ಕೇಳಿಕೊಳ್ಳಲಿ. ಹೊರಗೆ ಆಚರಿಸಿ ಹಿಂದೂ ಭಕ್ತರ ಭಾವನೆಗೆ ಧಕ್ಕೆ ತರುವುದು ಬೇಡ ಎಂದು ಅವರು ಹೇಳಿದರು.
ಸಿದ್ದರಾಮಯ್ಯ ಸರ್ಕಾರವಿದ್ದಾಗ ಮಹಿಷ ದಸರಾಗೆ ಅನುಮತಿ ನೀಡಿದ್ದರು. ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರದಲ್ಲಿ ಮಹಿಷ ದಸರಾಗೆ ಮಟ್ಟ ಹಾಕಿದ್ವಿ. ಅದೇನೋ ಗೊತ್ತಿಲ್ಲ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಾಗ ಧರ್ಮ ವಿರೋಧಿಗಳಿಗೆ ಶಕ್ತಿ ಬರುತ್ತೆ. ಅದನ್ನೇ ಇಂದು ಮಹಿಷ ದಸರಾ ರೂಪದಲ್ಲಿ ನೋಡುತ್ತಿದ್ದೇವೆ ಎಂದು ಅವರು ತಿಳಿಸಿದರು.
ಬಿಜೆಪಿ-ಜೆಡಿಎಸ್ ಮೈತ್ರಿ ಹೈಕಮಾಂಡ್ ನಿರ್ಧಾರ:
ಪಕ್ಷದ ಹಿತದೃಷ್ಟಿಯಿಂದ ಕೇಂದ್ರ ಮತ್ತು ರಾಜ್ಯ ನಾಯಕರು ಯಾವುದೇ ನಿರ್ಧಾರ ಕೈಗೊಂಡರು ಬೆಂಬಲಿಸುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್‌ಮೈತ್ರಿ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ಪಕ್ಷದ ಹೈಕಮಾಂಡ್‌ನಿರ್ಧಾರವನ್ನು ಮುಖಂಡರು, ಕಾರ್ಯಕರ್ತರು ಬೆಂಬಲಿಸುತ್ತಾರೆ ಎಂದರು.
ಇವತ್ತಿಗೂ ಬಿ.ಎಸ್. ಯಡಿಯೂರಪ್ಪ ಅವರು ಪ್ರಶ್ನಾತೀತ ನಾಯಕರು. ತಳಮಟ್ಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಎರಡೆರಡು ಬಾರಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಅವರು ಹೇಳಿರುವುದಕ್ಕೆ ಬದ್ಧರಾಗಿರುತ್ತೇವೆ ಎಂದು ಅವರು ಹೇಳಿದರು.
ಮೈಸೂರಿನ ಅಭಿವೃದ್ಧಿಗೆ ಸಂಸದ ಪ್ರತಾಪ ಸಿಂಹ ಕೊಡುಗೆ ಏನು: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್
ಕರ್ನಾಟಕದಲ್ಲಿ 2004 ರಿಂದ ಸತತವಾಗಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಪಡೆಯುತ್ತಿದೆ. 2004ರಲ್ಲಿ 8, 2009ರಲ್ಲಿ 19, 2014ರಲ್ಲಿ 17, 2019ರಲ್ಲಿ 25 ಸ್ಥಾನಗಳು ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಪ್ರಜ್ಞಾವಂತ ಮತದಾರರು ಗ್ಯಾರಂಟಿಗೆ ಮರುಳಾದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸುತ್ತಾರೆ. ಮೋದಿ ಮತ್ತೊಮ್ಮೆ ಪ್ರಧಾನಿ ಆಗ್ತಾರೆ ಎಂದು ಅವರು ಹೇಳಿದರು.