ಕನ್ನಡ ಹೋರಾಟಗಾರರ ಕೇಸ್‌ ಕುರಿತು ಪರಿಶೀಲನೆ: ಗೃಹ ಸಚಿವ ಪರಂ

Kannadaprabha News, Ravi Janekal |   | Kannada Prabha
Published : Nov 10, 2025, 05:09 AM IST
Home Minister Parameshwara's statement on withdrawal of cases against pro-Kannada activists

ಸಾರಾಂಶ

pro-kannada activists cases revie: ರೈತಪರ ಹಾಗೂ ಕನ್ನಡಪರ ಸಂಘಟನೆಗಳು ಒಳ್ಳೆಯ ಉದ್ದೇಶದಿಂದ ನಡೆಸಿದ ಹೋರಾಟದ ವೇಳೆ ದಾಖಲಾದ ಗಂಭೀರವಲ್ಲದ ಕೇಸುಗಳನ್ನು ಪರಿಶೀಲಿಸಿ ವಾಪಸ್ ಪಡೆಯಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರು (ನ.10): ರೈತ ಪರ, ಕನ್ನಡಪರ ಸಂಘಟನೆಗಳು ಒಳ್ಳೆಯ ಉದ್ದೇಶದಿಂದ ಹೋರಾಟ ಮಾಡಿದ ಸಂದರ್ಭದಲ್ಲಿ ಗುರುತರವಾದ ಯಾವುದೇ ಆರೋಪಗಳು ಇಲ್ಲದಿದ್ದರೆ ಅಂತಹ ಕೇಸುಗಳನ್ನು ಚರ್ಚೆ ಮಾಡಿ ವಾಪಸ್‌ ಪಡೆಯುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಕನ್ನಡಪರ ಹೋರಾಟಗಾರರ ಮೇಲೆ ದಾಖಲಾಗಿರುವ ಕೇಸುಗಳನ್ನು ಹಿಂಪಡೆಯಬೇಕೆಂಬ ‘ಕನ್ನಡಪ್ರಭ’ ಸರಣಿ ಅಭಿಯಾನದ ಕುರಿತು ಭಾನುವಾರ ಪ್ರತಿಕ್ರಿಯಿಸಿರುವ ಅವರು, ಯಾರು ಕಾನೂನಿನ ವಿರುದ್ಧವಾಗಿ ಕೆಲಸ ಮಾಡಿರುತ್ತಾರೋ ಅಂತಹವರ ಮೇಲೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.

ಸಮಿತಿ ಪರಿಶೀಲಿಸುತ್ತೆ:

ಕನ್ನಡಪರ, ರೈತಪರ ಸಂಘಟನೆಗಳು ಸೇರಿದಂತೆ ಯಾವುದೇ ಸಂಘಟನೆಗಳು ಒಳ್ಳೆಯ ಉದ್ದೇಶದಿಂದ ಹೋರಾಟ ಮಾಡಿದ ಸಂದರ್ಭದಲ್ಲಿ ಕೇಸು ದಾಖಲಾಗಿದ್ದರೆ, ಅವುಗಳನ್ನು ಪರಿಶೀಲಿಸಲು ಸಚಿವ ಸಂಪುಟ ಉಪಸಮಿತಿ ಮಾಡಲಾಗಿದೆ. ರಾಜ್ಯದ ಯಾವುದೇ ಪೊಲೀಸ್ ಠಾಣೆಯಲ್ಲಿ ಕೇಸು ಹಾಕಿದ್ದರೆ, ಅವುಗಳನ್ನು ಪರಿಶೀಲಿಸಿ ಸಮಿತಿ ವರದಿ ನೀಡುತ್ತದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಗತ್ಯವಿದ್ದರೆ ಕೇಸು ವಾಪಸ್‌ ತೆಗೆದುಕೊಳ್ಳಲಾಗುವುದು ಎಂದರು.

ಈಗ ಅರ್ಜಿ ನೀಡಿದ್ರೆ ನಾಳೆಯೇ ವಾಪಸ್ ತಗೊಳ್ಳೋಕೆ ಆಗೋಲ್ಲ:

ಈಗ ಅರ್ಜಿ ನೀಡಿದರೆ ನಾಳೆಯೇ ವಾಪಸ್‌ ತೆಗೆದುಕೊಳ್ಳಲು ಆಗುವುದಿಲ್ಲ. ಎಲ್ಲವನ್ನೂ ಕೂಲಂಕಷವಾಗಿ ಚರ್ಚಿಸಿ, ಪರಿಶೀಲಿಸಿ, ಕ್ಯಾಬಿನೆಟ್‌ ತೀರ್ಮಾನ ತೆಗೆದುಕೊಳ್ಳುತ್ತದೆ. ಯಾವು ಕಾನೂನು ವಿರುದ್ಧವಾಗಿ ಕೆಲಸ ಮಾಡಿರುತ್ತಾರೋ ಅವರ ಮೇಲೆ ಕ್ರಮ ಆಗಲಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌