ಸರ್ಕಾರಕ್ಕೆ ಆಸ್ತಿ ವಿವರ ಸಲ್ಲಿಕೆ ವೇಳೆ ತಪ್ಪು ಮಾಹಿತಿ ನೀಡಿದ ಆರೋಪದಲ್ಲಿ ಹೊಳಲ್ಕೆರೆ ಕ್ಷೇತ್ರದ ಮಾಜಿ ಶಾಸಕ ಎ.ವಿ.ಉಮಾಪತಿ ಅವರಿಗೆ 3 ತಿಂಗಳು ಜೈಲು ಶಿಕ್ಷೆ ಮತ್ತು 1 ಸಾವಿರ ರೂ. ದಂಡ ವಿಧಿಸಲಾಗಿದೆ.
ಬೆಂಗಳೂರು (ನ.28): ಸರ್ಕಾರಕ್ಕೆ ಆಸ್ತಿ ವಿವರ ಸಲ್ಲಿಕೆ ವೇಳೆ ತಪ್ಪು ಮಾಹಿತಿಯನ್ನು ನೀಡಿ ವಂಚನೆ ಮಾಡಿದ ಆರೋಪದಲ್ಲಿ ಹೊಳಲ್ಕೆರೆ ಕ್ಷೇತ್ರದ ಶಾಸಕ ಮಾಜಿ ಶಾಸಕ ಎ.ವಿ.ಉಮಾಪತಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ 3 ತಿಂಗಳು ಜೈಲು ಶಿಕ್ಷೆ ಹಾಗೂ 1 ಸಾವಿರ ರೂ. ದಂಡವನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ.
ಹೊಳಲ್ಕೆರೆ ಕ್ಷೇತ್ರದ ಮಾಜಿ ಶಾಸಕ ಎ.ವಿ.ಉಮಾಪತಿ ಅವರು 2004-05 ಹಾಗೂ 2005-06ರ ಸಾಲಿನ ಆಸ್ತಿ ವಿವರದಲ್ಲಿ ತಪ್ಪು ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮತ್ತೊಬ್ಬ ಮಾಜಿ ಶಾಸಕ ತಿಪ್ಪೇರುದ್ರಪ್ಪ ಅವರು ತಪ್ಪು ಲೋಕಾಯುಕ್ತ ಇಲಾಖೆಗೆ ದೂರು ಸಲ್ಲಿಕೆ ಮಾಡಿದ್ದರು. ಈ ಬಗ್ಗೆ ತನಿಖೆ ಮಾಡಿದ್ದ ಲೋಕಾಯುಕ್ತ ಇಲಾಖೆ ತನಿಖಾ ವರದಿಯನ್ನು ಸಲ್ಲಿಕೆ ಮಾಡಿತ್ತು. ಈ ತನಿಖಾ ವರದಿ ಅನ್ವಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎನ್.ಶಿವಕುಮಾರ್ ಅವರು ಮಾಜಿ ಶಾಸಕ ಎ.ವಿ.ಉಮಾಪತಿಗೆ ಅವರಿಗೆ ಶಿಕ್ಷೆಯನ್ನು ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ಆಸ್ತಿ ಎಷ್ಟಿದೆ? ದೆಹಲಿ-ಶಿಮ್ಲಾ ಆಸ್ತಿ ವಿವರ ಇಲ್ಲಿದೆ..
ಮಾಜಿ ಶಾಸಕ ಎ.ವಿ.ಉಮಾಪತಿಗೆ ಅವರಿಗೆ 3 ತಿಂಗಳ ಕಾಲ ಜೈಲು ಶಿಕ್ಷೆ ಹಾಗೂ 1 ಸಾವಿರ ರೂ.ದಂಡವನ್ನು ವಿಧಿಸಲಾಗಿದೆ. ಇನ್ನು ಮಾಜಿ ಶಾಸಕ ಉಮಾಪತಿ ಅವರು ಆಸ್ತಿ ವಿವರ ಸಲ್ಲಿಕೆಯಲ್ಲಿ ತಪ್ಪು ಮಾಹಿತಿ ನೀಡಿದ್ದರು ಎಂದು ಮತ್ತೊಬ್ಬ ಮಾಜಿ ಶಾಸಕ ತಿಪ್ಪೇರುದ್ರಪ್ಪ ಅವರು ದೂರು ಸಲ್ಲಿಕೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ಮಾಡಿದ ಲೋಕಾಯುಕ್ತ ವರದಿ ಅನುಸಾರ ಶಿಕ್ಷೆ ಪ್ರಕಟ ಮಾಡಲಾಗಿದೆ. ಇದೀಗ ಉಮಾಪತಿ ಅವರನ್ನು ಪೊಲೀಸರು ಯಾವುದೇ ಕ್ಷಣದಲ್ಲಾದರೂ ಬಂಧಿಸಿ ಜೈಲಿಗೆ ಕಳಿಸಬಹುದು.