ಜನರ ಭಾವನೆ ಕೆರಳಿಸಿದರೆ ಮಹಾರಾಷ್ಟ್ರ ಸಚಿವರ ವಿರುದ್ಧ ಕ್ರಮ: ಗೃಹ ಸಚಿವ ಜ್ಞಾನೇಂದ್ರ

Published : Dec 07, 2022, 03:30 AM IST
ಜನರ ಭಾವನೆ ಕೆರಳಿಸಿದರೆ ಮಹಾರಾಷ್ಟ್ರ ಸಚಿವರ ವಿರುದ್ಧ ಕ್ರಮ: ಗೃಹ ಸಚಿವ ಜ್ಞಾನೇಂದ್ರ

ಸಾರಾಂಶ

ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬಂದರೇನು? ಬೆಂಗಳೂರಿಗೂ ಬರಲಿ. ನಾವು ಬಾಂಬೆಗೂ ಹೋಗುತ್ತೇವೆ. ಯಾವ ಸಮಯಕ್ಕೆ ಬರಬೇಕು, ಯಾವ ಕಾರಣಕ್ಕೆ ಬರಬೇಕು ಅನ್ನುವುದು ಮುಖ್ಯವಾಗುತ್ತದೆ: ಸಚಿವ ಆರಗ ಜ್ಞಾನೇಂದ್ರ 

ಬೆಂಗಳೂರು(ಡಿ.07): ಬೆಳಗಾವಿಗೆ ಬಂದು ಸುಮ್ಮನಿದ್ದವರನ್ನು ಕೆಣಕಿದರೆ, ಜನರ ಭಾವನೆಗಳನ್ನು ಕೆರಳಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ವಿಕಾಸಸೌಧದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ, ಗಡಿ ಸಾಮರಸ್ಯ ಹಾಗೂ ಇತರ ವಿಷಯಗಳ ಕುರಿತು ಚರ್ಚಿಸಿದರು. ನಂತರ ಮಾತನಾಡಿದ ಅವರು, ಇವತ್ತಿನ ಸಭೆಯಲ್ಲಿ ಗಡಿ ವಿಚಾರವಾಗಿ ಶಾಂತಿ ಸುವ್ಯವಸ್ಥೆ ಬಗ್ಗೆ ಚರ್ಚೆ ಮಾಡಿದ್ದೇವೆ. ಯಾರೇ ಆಗಲಿ ಜನರ ಭಾವನೆಯನ್ನು ಕೆರಳಿಸುವ ಕೆಲಸ ಮಾಡಬಾರದು ಎಂದು ಹೇಳಿದರು.

ಬೆಳಗಾವಿ ಗಡಿ ಗಲಾಟೆಗೆ ಶರದ್ ಪವಾರ್ ಕೆಂಡ, ಕರ್ನಾಟಕಕ್ಕೆ ತಾಳ್ಮೆ ಪರೀಕ್ಷಿಸದಂತೆ ಎಚ್ಚರಿಕೆ!

ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬಂದರೇನು? ಬೆಂಗಳೂರಿಗೂ ಬರಲಿ. ನಾವು ಬಾಂಬೆಗೂ ಹೋಗುತ್ತೇವೆ. ಯಾವ ಸಮಯಕ್ಕೆ ಬರಬೇಕು, ಯಾವ ಕಾರಣಕ್ಕೆ ಬರಬೇಕು ಅನ್ನುವುದು ಮುಖ್ಯವಾಗುತ್ತದೆ. ಸಚಿವರಾಗಬಹುದು ಅಥವಾ ಸಾಮಾನ್ಯ ಜನರಾಗಬಹುದು ಕಾನೂನು ದೃಷ್ಟಿಯಲ್ಲಿ ಎಲ್ಲರೂ ಒಂದೇ. ಕಾನೂನಿನ ವಿರುದ್ಧವಾಗಿ ಹೋದರೆ ಕ್ರಮ ಆಗುತ್ತದೆ. ಶಾಂತಿ ಭಂಗ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಸಭೆಯಲ್ಲಿ ರಾಜ್ಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌, ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ಸೂದ್‌, ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕರಾದ ಅಲೋಕ್‌ಕುಮಾರ್‌, ದಯಾನಂದ, ಮಾಲಿನಿ ಕೃಷ್ಣಮೂರ್ತಿ, ಹಿತೇಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ