PSI Recruitment Scam: ಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥ ನಂತರ ಸರ್ಕಾರದ ನಿಲುವು, ಆರಗ ಜ್ಞಾನೇಂದ್ರ

By Kannadaprabha News  |  First Published Dec 24, 2022, 7:30 PM IST

ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾದವರ ನೋವು ನನಗೂ ಅರ್ಥವಾಗುತ್ತದೆ. ಆದರೆ, ತನಿಖೆ ಪೂರ್ಣವಾಗುವವರೆಗೂ ನಾವು ಕಾಯಬೇಕಾಗುತ್ತದೆ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ 


ಬೆಳಗಾವಿ(ಡಿ.24):  545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ನ್ಯಾಯಾಲಯದಲ್ಲಿದೆ. ಸಿಐಡಿ ತನಿಖಾ ವರದಿ ಬರಬೇಕಿದ್ದು, ನ್ಯಾಯಾಲಯದಲ್ಲೂ ಪ್ರಕರಣ ಇತ್ಯರ್ಥವಾಗಬೇಕಿದೆ. ನಂತರ ಸರ್ಕಾರ ತನ್ನ ನಿಲುವು ಪ್ರಕಟಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಪಿಎಸ್‌ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಪ್ರಾಮಾಣಿಕವಾಗಿ ಆಯ್ಕೆಯಾಗಿರುವ ನಮಗೆ ನ್ಯಾಯ ಒದಗಿಸಿ ಎಂದು ಒತ್ತಾಯಿಸಿ ಬಸ್ತವಾಡ ಬಳಿಯಿರುವ ಪ್ರತಿಭಟನಾ ವೇದಿಕೆಯಲ್ಲಿ ಶುಕ್ರವಾರ ನೊಂದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಸಚಿವರು, ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಮಾತನಾಡಿ, ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾದವರ ನೋವು ನನಗೂ ಅರ್ಥವಾಗುತ್ತದೆ. ಆದರೆ, ತನಿಖೆ ಪೂರ್ಣವಾಗುವವರೆಗೂ ನಾವು ಕಾಯಬೇಕಾಗುತ್ತದೆ ಎಂದರು.

Tap to resize

Latest Videos

PSI Recruitment Scam: ಬೇಲ್‌ ಪಡೆದು ಬಂದ ಕಾಂಗ್ರೆಸ್‌ ಮುಖಂಡನಿಗೆ ಭರ್ಜರಿ ಸ್ವಾಗತ!

10 ಸಂಘಟನೆಗಳಿಂದ ಪ್ರತಿಭಟನೆ: 

ಸುವರ್ಣಸೌಧದ ಎದುರು 5ನೇ ದಿನವಾದ ಶುಕ್ರವಾರ 10 ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳು ನಡೆದವು. ಈ ಮಧ್ಯೆ, ಸಾರಿಗೆ ನೌಕರರ ಒಕ್ಕೂಟದ ಪ್ರತಿಭಟನೆ ವೇಳೆ ಮೂವರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

click me!