
ಬೆಂಗಳೂರು(ಆ.21): ದಕ್ಷ, ಪ್ರಮಾಣಿಕ ಅಧಿಕಾರಿ ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್ ಅವರನ್ನು ಏಜೆಂಟ್ ಎಂದು ಕರೆದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಬಲವಾಗಿ ಖಂಡಿಸುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಕಮಲ್‌ಪಂತ್ ಅವರ ಕುರಿತ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಗಲಭೆಕೋರರನ್ನು ಪರೋಕ್ಷವಾಗಿ ರಕ್ಷಣೆ ಮಾಡುವ ಮತ್ತೊಂದು ತಂತ್ರವಾಗಿದೆ. ಇದು ಯಾವುದು ನಡೆಯುವುದಿಲ್ಲ ಎಂದಿದ್ದಾರೆ.
'ಏಜೆಂಟರಂತೆ ಕೆಲಸ ಮಾಡ್ಬೇಡಿ' ಕಮಿಷನರ್ ವಿರುದ್ಧ ಡಿಕೆಶಿ ಗುಡುಗು
ಕಾವಲ್‌ಭೈರಸಂದ್ರದ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆ ವಿಡಿಯೋಗಳಲ್ಲಿ ಸ್ಪಷ್ಟವಾಗಿದ್ದು, ಗಲಭೆಕೋರರ ವಿರುದ್ಧ ನಿರ್ಧಾಕ್ಷಿಣವಾಗಿ ಪೊಲೀಸ್ ಆಯುಕ್ತರು ಕೈಗೊಂಡಿದ್ದಾರೆ. ಆಯುಕ್ತರ ಕ್ರಮದ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪೊಲೀಸರನ್ನು ಏಜೆಂಟರನ್ನಾಗಿ ನಡೆಸಿಕೊಳ್ಳುವುದು ಅವರ ಸಂಸ್ಕೃತಿ, ಪೊಲೀಸರ ನಿಷ್ಪಕ್ಷಪಾತವಾಗಿ ತನಿಖೆಯನ್ನು ಮಾಡುತ್ತಿದ್ದಾರೆ. ಇದರಲ್ಲಿ ಪ್ರಭಾವ ನಡೆಯುವುದಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ