
ಬೆಂಗಳೂರು, (ಫೆ.19): ಅದು ರಾಮಮಂದಿರವಲ್ಲ, RSS ಮಂದಿರ. ಅದಕ್ಕೆ 1 ಪೈಸೆಯೂ ಕೊಡಬೇಡಿ ಎಂದು ಕರೆ ನೀಡಿರುವ ಪಿಎಫ್‌ಐ ಮುಖಂಡನ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಗೃಹ ಸಚಿವ ಬಸವರಾಜ ಮೊಬ್ಬಾಯಿ ಸೂಚನೆ ನೀಡಿದ್ದಾರೆ.
ಅದು ರಾಮಮಂದಿರ ಅಲ್ಲ. RSS ಮಂದಿರ. ಅದಕ್ಕೆ 1 ಪೈಸೆಯೂ ಕೊಡಬೇಡಿ ಎಂದು ಮಂಗಳೂರಿನ ಉಲ್ಲಾಳದಲ್ಲಿ PFI ಪ್ರಧಾನ ಕಾರ್ಯದರ್ಶಿ ಅನೀಸ್ ಅಹ್ಮದ್ ಹೇಳಿದ್ದರು.
'ಅದು ರಾಮಮಂದಿರವಲ್ಲ, RSS ಮಂದಿರ: 1 ಪೈಸೆಯೂ ಕೊಡಬೇಡಿ'
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮಂಗಳೂರಿನ ಉಲ್ಲಾಳದಲ್ಲಿ ಪಿಎಫ್ ಐ ಮುಖಂಡರು ನೀಡಿರುವ ಹೇಳಿಕೆ ದೇಶ ವಿರೋಧಿ ಮತ್ತು ಅಸಂವಿಧಾನಿಕ. ದೇಶದ ಜನತೆಯನ್ನು ಒಡೆಯುವ ಪ್ರಯತ್ನದ ಹೇಳಿಕೆಯಾಗಿದೆ ಎಂದರು.
ಆರ್ ಎಸ್‌ಎಸ್ ಸಂಘಟನೆ ಒಂದು ದೇಶಭಕ್ತಿಯ ಪ್ರತೀಕ. ರಾಮ ಮಂದಿರ ನಿರ್ಮಿಸುವಂತೆ ಈಗಾಗಲೇ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆ ಬಗ್ಗೆ ಪಿಎಫ್ ಐ ನಾಯಕರು ಮಾತನಾಡಿರುವುದು ಆಕ್ಷೇಪಾರ್ಹ. ಪಿಎಫ್ ಐ ತನ್ನ ನಿಜ ಬಣ್ಣವನ್ನು ಹಲವು ಬಾರಿ ತೋರಿಸಿದೆ. ದೇಶ ವಿರೋಧಿ ಹೇಳಿಕೆ ನೀಡಿರುವ ಪಿಎಫ್ ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸುತ್ತೇನೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ