ಉಡುಪಿ ಜಿಲ್ಲಾ ಪೊಲೀಸ್ ಮಹತ್ವದ ಸಭೆ ನಡೆಸಿದ ಗೃಹ ಸಚಿವ ಪರಮೇಶ್ವರ್

By Govindaraj S  |  First Published Jun 7, 2023, 12:03 PM IST

ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದಲ್ಲಿ ವಿದ್ಯಾರ್ಥಿಗಳು, ಯುವ ಜನತೆ ಮಾದಕ ವ್ಯಸನಕ್ಕೆ ತುತ್ತಾಗುತ್ತಿದ್ದಾರೆ. ಮಾದಕ ದ್ರವ್ಯವನ್ನು ವಿದ್ಯಾರ್ಥಿಗಳಿಗೆ ಒದಗಿಸುವ ಪೆಡ್ಲರ್‌ಗಳನ್ನು ಮಟ್ಟ ಹಾಕಲು ಪೋಲಿಸರಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. 


ಉಡುಪಿ (ಜೂ.07): ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದಲ್ಲಿ ವಿದ್ಯಾರ್ಥಿಗಳು, ಯುವ ಜನತೆ ಮಾದಕ ವ್ಯಸನಕ್ಕೆ ತುತ್ತಾಗುತ್ತಿದ್ದಾರೆ. ಮಾದಕ ದ್ರವ್ಯವನ್ನು ವಿದ್ಯಾರ್ಥಿಗಳಿಗೆ ಒದಗಿಸುವ ಪೆಡ್ಲರ್‌ಗಳನ್ನು ಮಟ್ಟ ಹಾಕಲು ಪೋಲಿಸರಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಅವರು ಉಡುಪಿಯ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪೋಲಿಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಟಿ ಮಾಹಿತಿ ವಿವರಿಸಿದರು.

ಅಪರಾಧ ಪ್ರಕರಣಗಳನ್ನು ಮಟ್ಟ ಹಾಕಲು ವಿಫಲವಾದರೇ ಕೇವಲ ಒಬ್ಬರನ್ನು ದೂಷಿಸುವುದು ಸರಿಯಲ್ಲ. ಪ್ರಕರಣ ನಡೆದ ವ್ಯಾಪ್ತಿಗೆ ಒಳಪಟ್ಟ ಠಾಣಾಧಿಕಾರಿ, ಡಿವೈಎಸ್ಪಿ ಮತ್ತು ಎಸ್ಪಿಯೇ ಜವಾಬ್ದಾರರಾಗಿರುತ್ತಾರೆ. ಹಿರಿಯ ಅಧಿಕಾರಿಗಳು ತಮ್ಮ ಅಧೀನದಲ್ಲಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾದರಿಯಾಗಿರಬೇಕು ಎಂದು ತಿಳಿಸಲಾಗಿದೆ. ಜಿಲ್ಲೆಯಲ್ಲಿ ಯಾವುದೇ ರೀತಿಯ ಮಟ್ಕಾ, ಜೂಜು ಸೇರಿದಂತೆ ಅಕ್ರಮ ಚಟುವಟಿಕೆಗಳು ನಡೆಯದಂತೆ ಪೋಲಿಸ್ ಇಲಾಖೆ ನಿಗಾ ವಹಿಸಲು ತಿಳಿಸಲಾಗಿದ್ದು, ಯಾವುದೇ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳು ನಡೆದರೆ ಅದಕ್ಕೆ ಆ ವ್ಯಾಪ್ತಿಯ ಠಾಣಾಧಿಕಾರಿಯನ್ನೇ ಹೊಣೆ ಮಾಡಲಾಗುತ್ತದೆ ಎಂದರು. 

Tap to resize

Latest Videos

undefined

ಚುನಾವಣೆಯಲ್ಲಿ ಹಣದ ಹೊಳೆ ತಡೆಯದಿದ್ದರೆ ಪ್ರಜಾಪ್ರಭುತ್ವ ವ್ಯರ್ಥ: ಎಸ್‌.ಎಂ.ಕೃಷ್ಣ

ನೈತಿಕ ಪೋಲಿಸ್ ಗಿರಿಗೆ ಕ್ರಮ: ನೈತಿಕ ಪೋಲಿಸ್ ಗಿರಿ ವಿರುದ್ದ ಕ್ರಮ ಕೈಗೊಳ್ಳಲು ಸೂಚಿಸಲಾಗಿದ್ದು, ಸಮಾಜದ ಸ್ವಾಸ್ಥ್ಯ ಕದಡುವ, ಕೋಮು ಪ್ರಚೋದನೆ ನೀಡುವುದು ಕರಾವಳಿ ಭಾಗದಲ್ಲಿ ಜಾಸ್ತಿಯಾಗುತ್ತಿದೆ. ನಮ್ಮ ಸರಕಾರ ಸರ್ವ ಜನಾಂಗದ ಶಾಂತಿಯ ತೋಟ ಪರಿಕಲ್ಪನೆಯಲ್ಲಿ ಆಡಳಿತ ನೀಡುತ್ತದೆ. ಈ ಜಿಲ್ಲೆಯಲ್ಲಿ ಕೋಮು ಸೌಹಾರ್ದ ತರಬೇಕಾಗಿದೆ. ಅದನ್ನು ಅನುಷ್ಠಾನ ಮಾಡಿಯೇ ಮಾಡುತ್ತೇವೆ. ಮುಗ್ದ ವಿದ್ಯಾರ್ಥಿಗಳು, ಅಮಾಯಕ ಯುವ ಜನಾಂಗದ ಈ ದ್ವೇಷದ ಬೀಜಕ್ಕೆ ಬಲಿಯಾಗಬಾರದು ಎಂದರು. 

ಅಂತರ್ ಜಿಲ್ಲಾ ವರ್ಗಾವಣೆಯ ಕುರಿತು ಪರಿಶೀಲನೆ ನಡೆಸುತ್ತೇವೆ: ರಾಜ್ಯದಲ್ಲಿ ಪ್ರತಿ ವರ್ಷ 2,000 ಪೋಲಿಸರು ನಿವೃತ್ತಿ ಹೊಂದುತ್ತಿದ್ದಾರೆ. ಪ್ರಸ್ತುತ 15,000 ಪೋಲಿಸ್ ಹುದ್ದೆ ಖಾಲಿಯಿದ್ದು, ಹಂತ ಹಂತವಾಗಿ ನೇಮಕಾತಿ ಮಾಡುತ್ತೇವೆ. ಅಂತರ್ ಜಿಲ್ಲಾ ವರ್ಗಾವಣೆಯ ಕುರಿತು ಪರಿಶೀಲನೆ ನಡೆಸುತ್ತೇವೆ. ಈ ಹಿಂದೆ ತಾನು ಗೃಹ ಸಚಿವನಾಗಿದ್ದಾರ ಒಂದೆ ಬಾರಿಗೆ 12,000 ಪೋಲಿಸರಿಗೆ ಮುಂಭಡ್ತಿ ನೀಡಿದ್ದೇನು. ಈಗ ಬಾಕಿಯಿರುವ ಮುಂಭಡ್ತಿ ಮತ್ತು ಬಾಕಿಯಿರುವ ಸಂಬಳ ಏರಿಕೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು. 

ಪಠ್ಯ ಪರಿಷ್ಕರಣೆ ಗೊಂದಲ ಬಗೆಹರಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಹಿಜಾಬ್ ವಿವಾದ ಈಗ ಸುಪ್ರೀಂ ಕೋರ್ಟ್‌ನಲ್ಲಿದೆ: ರಾಷ್ಟ್ರ, ಅಂತರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ್ದ ಹಿಜಾಬ್ ವಿವಾದ ಈಗ ಸುಪ್ರೀಂ ಕೋರ್ಟ್‌ನಲ್ಲಿದೆ. ಅದರ ತೀಪು ಬಂದ ಬಳಿಕ ಸರಕಾರ ತನ್ನ ನಿಲುವನ್ನು ಸ್ಪಷ್ಟ ಪಡಿಸುತ್ತದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್, ಪಶ್ಚಿಮ ವಲಯ ಐಜಿಪಿ ಡಾ| ಚಂದ್ರಗುಪ್ತ, ಉಡುಪಿ ಎಸ್ಪಿ ಅಕ್ಷಯ್ ಹಾಕೆ, ಎ.ಎನ್.ಎಫ್ ಎಸ್ಪಿ ಪ್ರಕಾಶ್ ನಿಕ್ಕಮ್ ಉಪಸ್ಥಿತರಿದ್ದರು.  ಬಿಜೆಪಿ ಕಾರ್ಯಕರ್ತರಿಗಾಗಿ ಸ್ಥಾಪಿಸಿರುವ ಹೆಲ್ಪ್ ಡೆಸ್ಕ್ ಕುರಿತಾಗಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಕಾರ್ಯಕರ್ತರಿಗೆ ಅನುಕೂಲವಾಗುತ್ತದೆ, ಅವರ ಕಾರ್ಯಕರ್ತರ ರಕ್ಷಣೆ ಸ್ಥಾಪಿಸಿದ್ದರೇ ಅದರಲ್ಲಿ ತಪ್ಪಿಲ್ಲ. ಅದು ಅವರ ಪಕ್ಷದ ಆಂತರಿಕ ವಿಚಾರ ಎಂದರು.

click me!