ಸಾಮಾಜಿಕ ಜಾಲತಾಣದಲ್ಲಿ ಬಿತ್ತಿರಿಸುವ ಡಿ.ಫೇಕ್‌ ಸುದ್ದಿಗಳಿಗೆ ಕಡಿವಾಣ ಹಾಕಿ: ಪರಂ

By Kannadaprabha News  |  First Published Nov 29, 2023, 12:30 AM IST

ರಾಜಕಾರಣಿಗಳು ಚುನಾವಣಾ ಸಂದರ್ಭದಲ್ಲಿ ಮಾತನಾಡುವ ವಿಚಾರ ವಸ್ತುನಿಷ್ಠವಾದರೂ ಪತ್ರಿಕೆಗಳಲ್ಲಿ ಪ್ರಕಟವಾದಾಗ ಅಭಿಪ್ರಾಯ ಜನರ ಮನಸ್ಸಿನ ಮೇಲೆ ಪರಿಣಾಮ ಬೀರುವಂತೆ ಮಾಡುವ ಶಕ್ತಿಯನ್ನು ಪತ್ರಿಕೋದ್ಯಮಕ್ಕೆ ಇದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ 


ಕೊರಟಗೆರೆ(ನ.29): ಪತ್ರಿಕೋದ್ಯಮಕ್ಕೆ ವಿಶೇಷ ಶಕ್ತಿ ಇದ್ದು, ಜನರ ಮನಸ್ಸಿನ ಮೇಲೆ ಪರಿಣಾಮ ಬೀರುವಂತೆ ಮಾಡುವ ಶಕ್ತಿ ಪತ್ರಿಕೋದ್ಯಮಕ್ಕೆ ಇದೆ. ಇತ್ತೀಚೆಗೆ ಸಾಮಾಜಿಕ ಜಾಲತಾಣ ಮಾದ್ಯಮಗಳು ಡಿ.ಫೇಕ್‌ ಸುದ್ದಿಗಳು ಬಿತ್ತರಿಸುತ್ತಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕಳವಳ ವ್ಯಕ್ತಪಡಿಸಿದರು.

ಹಿಂದೂ ಸಾದರ ಸಮುದಾಯ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಏರ್ಪಡಿಸಿದ್ದ ಕನ್ನಡ ನುಡಿನಮ, ಪತ್ರಿಕಾ ದಿನಾಚರಣೆ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಹೃದಯ ಪೂರ್ವಕ ಕೃತಜ್ಞತೆ ಸಲ್ಲಿಕೆ, ಮಹಿಳಾ ಸಾಧಕರಿಗೆ, ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಅಭಿನಂದನೆ ಹಾಗೂ ಪತ್ರಿಕಾ ವಿತರಕರಿಗೆ ಜರ್ಕಿನ್ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

Tap to resize

Latest Videos

undefined

ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಆಕಾಂಕ್ಷಿಗಳಲ್ಲಿ ತಳಮಳ: ಕಮಲ ನಾಯಕರು ಕಾಂಗ್ರೆಸ್‌ನತ್ತ ಮುಖ ಮಾಡ್ತಾರಾ..?

ಪತ್ರಿಕೋದ್ಯಮ ಎನ್ನುವುದು ಪ್ರಜಾಪ್ರಭುತ್ವದ ನಾಲ್ಕು ಅಂಗಗಳಲ್ಲಿ ಒಂದು ಭಾಗವಾಗಿದ್ದು ಈ ನಾಲ್ಕು ಅಂಗಗಳಲ್ಲಿ ಒಂದು ಅಂಗ ಸರಿ ಇಲ್ಲದಿದ್ದರೂ ಪ್ರಜಾಪ್ರಭುತ್ವ ಗೊಂದಲದಲ್ಲಿ ಸಿಲುಕುತ್ತದೆ. ಪತ್ರಿಕೋದ್ಯಮ ಹಾಗೂ ಮಾಧ್ಯಮ ಕ್ಷೇತ್ರದ ಶಕ್ತಿ ಸಮಾಜವನ್ನು ತಿದ್ದುವಂತಹದ್ದು. ಆದ್ದರಿಂದ ಆಧುನಿಕ ಮಟ್ಟದಲ್ಲಿ ಪತ್ರಿಕೋದ್ಯಮಕ್ಕೆ ವಿಶೇಷ ಶಕ್ತಿ ಇದೆ, ರಾಜಕಾರಣಿಗಳು ಚುನಾವಣಾ ಸಂದರ್ಭದಲ್ಲಿ ಮಾತನಾಡುವ ವಿಚಾರ ವಸ್ತುನಿಷ್ಠವಾದರೂ ಪತ್ರಿಕೆಗಳಲ್ಲಿ ಪ್ರಕಟವಾದಾಗ ಅಭಿಪ್ರಾಯ ಜನರ ಮನಸ್ಸಿನ ಮೇಲೆ ಪರಿಣಾಮ ಬೀರುವಂತೆ ಮಾಡುವ ಶಕ್ತಿಯನ್ನು ಪತ್ರಿಕೋದ್ಯಮಕ್ಕೆ ಇದೆ ಎಂದು ತಿಳಿಸಿದರು.

ದೇಶದ ಅಭಿವೃಧ್ದಿಗೆ ಶಿಕ್ಷಣ ಪೂರಕವಾಗಿದ್ದು ಗ್ರಾಮೀಣ ಭಾಗದ ಪತ್ರಕರ್ತರ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ಕಲ್ಪಿಸಿ ದೇಶದ ಉತ್ತಮ ನಾಗರಿಕರನ್ನಾಗಿ ರೂಪಿಸುವ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಪತ್ರಕರ್ತರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವಲ್ಲಿ ಪತ್ರಿವರ್ಷ 25 ವಿದ್ಯಾರ್ಥಿಗಳಿಗೆ ತಲಾ 1 ಲಕ್ಷ ರು. 25 ಲಕ್ಷ ರು. ನೀಡುವುದಾಗಿ ಆಶ್ವಾಸನೆ ನೀಡಿದ್ದು, ಇದಕ್ಕೆ ಒಂದು ಸಮಿತಿ ರಚಿಸಿಕೊಂಡು ವಿತರಿಸುವಂತೆ ಪತ್ರಕರ್ತರ ಸಂಘಕ್ಕೆ ಸೂಚಿಸಿದ ಸಚಿವರು ಕಾರ್ಯನಿರತ ಪತ್ರಕರ್ತರೊಂದಿಗೆ ಸದಾ ಇದ್ದು ಅವರ ಕಷ್ಟ ಸುಖಗಳಲ್ಲಿ ಭಾಗಿಯಾಗವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಯುದ್ಧದಲ್ಲಿ ಹುತಾತ್ಮಯೋಧ ಕ್ಯಾಪ್ಟನ್ ಪ್ರಾಂಜಲ್ ಅವರಿಗೆ ಗೌರವ ನಮನ ಸಲ್ಲಿಸಿದರು.

ಸಂಘದ ಅಧ್ಯಕ್ಷ ಕೆ.ವಿ.ಪುರಷೋತ್ತಮ್ ಮಾತನಾಡಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ತಾಲೂಕಿನ ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಪತ್ರಕರ್ತರ ಮಕ್ಕಳ ಉತ್ತಮ ಶಿಕ್ಷಣ ಕಲ್ಪಿಸುವ ದೃಷ್ಟಿಯಿಂದ ಪ್ರತಿವರ್ಷ ಪ್ರತಿ ಪತ್ರಕರ್ತ ಪ್ರತಿಭಾವಂತ ವಿದ್ಯಾರ್ಥಿಗೆ 1 ಲಕ್ಷ ರು. ಜಿಲ್ಲೆಯ 25 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಹೃದಯ ಪೂರ್ವಕ ಕೃತಜ್ಞತೆ ಸಲ್ಲಿಸುತ್ತಿದ್ದೇವೆ. ವಿದ್ಯಾರ್ಥಿ ವೇತನ ವಿತರಣೆಗೆ ಸಮಿತಿ ರಚಿಸುವಂತೆ ಮನವಿ ಮಾಡಿದರು.

ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ

ಸಂಘದ ಅಧ್ಯಕ್ಷ ಚಿ.ನಿ.ಪುರುಷೋತ್ತಮ್ ಮಾತನಾಡಿ, ಸಚಿವರು ಸರ್ಕಾರದಲ್ಲಿ ಪತ್ರಕರ್ತರ ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದು ಪತ್ರಕರ್ತರ ಸಮಸ್ಯಗಳ ಪರಿಹಾರಕ್ಕೆ ಮುಂದಾಗಬೇಕಾಗಿ ಮನವಿ ಮಾಡಿ, ದೇಶದಲ್ಲಿಯೇ ಯಾವ ಶಾಸಕರು, ಸಚಿವರು ಮಾಡದಂತ ಕಾರ್ಯ ಜಿಲ್ಲೆಯ ಪತ್ರಕರ್ತರ 25 ಮಕ್ಕಳ ವಿಧ್ಯಾಭ್ಯಾಸಕ್ಕೆ ಪ್ರತಿವರ್ಷ 1 ಲಕ್ಷ ರು. ವಿದ್ಯಾರ್ಥಿ ವೇತನ ನೀಡುವ ಆಶ್ವಾಸನೆ ನೀಡಿದ್ದು ಇನ್ನಿತರ ಶಾಸಕರುಗಳಿಗೆ, ಮಂತ್ರಿಗಳಿಗೆ, ಸಂಸದರಿಗೆ ಮಾದರಿಯಾಗಿದ್ದು, ಜಿಲ್ಲಾ ಪತ್ರಕರ್ತರ ಪರವಾಗಿ ಕೃತಜ್ಞತೆ ಸಲ್ಲಿಸಿದರು. ವಿವಿಧ ಸಾಧಕರನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸನ್ಮಾನಿಸಿದರು.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿ.ಪಂ. ಇಒ ಜೆ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ವಿ.ವಿ.ಕುಲಸಚಿವೆ ನಾಹಿದಾ ಜಮ್‌ಜಮ್, ತಹಶೀಲ್ದಾರ್ ಮಂಜುನಾಥ್, ತಾ.ಪಂ.ಇಒ ಅಪೂರ್ವ ಅನಂತರಾಮು, ಕಾರ್ಯದರ್ಶಿ, ರಘುರಾಮ್, ರಂಗಧಾಮಯ್ಯ, ಉಪಾಧ್ಯಕ್ಷ ಚಿಕ್ಕೀರಪ್ಪ, ರಾಜ್ಯ ನಿರ್ದೇಶಕ ಸಿದ್ದಲಿಂಗಸ್ವಾಮಿ, ನಿರ್ದೇಶಕ ಎನ್.ಮೂರ್ತಿ, ಕೆ.ಪಿ.ಸಿ.ಸಿ ಸದಸ್ಯ ಹಾಗೂ ಪ.ಪಂ.ಸದಸ್ಯ ಎ.ಡಿ.ಬಲರಾಮಯ್ಯ, ನಗರಸಭಾ ಮಾಜಿ ಉಪಾಧ್ಯಕ್ಷ ವಾಲೆಚಂದ್ರಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್‌ಗೌಡ, ಕಾಂಗ್ರೆಸ್ ಮುಖಂಡ ಎಂ.ಎನ್.ಜೆ.ಮಂಜುನಾಥ್, ಹೂಲಿಕುಂಟೆ ರುದ್ರಪ್ರಸಾದ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರುದ್ರೇಶ್ ಉಪಸ್ಥಿತರಿದ್ದರು.

click me!