ಪದೇ ಪದೇ ಗೋವುಗಳ ಮೇಲೆ ವಿಕೃತಿಗೆ ಸ್ವತಃ ಗೃಹ ಸಚಿವ ಪರಮೇಶ್ವರ್‌ ಕಳವಳ

Published : Jan 21, 2025, 05:00 AM IST
ಪದೇ ಪದೇ ಗೋವುಗಳ ಮೇಲೆ ವಿಕೃತಿಗೆ ಸ್ವತಃ ಗೃಹ ಸಚಿವ ಪರಮೇಶ್ವರ್‌ ಕಳವಳ

ಸಾರಾಂಶ

ರಾಜ್ಯದಲ್ಲಿ ಗೋಹತ್ಯೆ ಹೆಚ್ಚಳ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ ಸಚಿವ ಪರಮೇಶ್ವರ್‌

ಬೆಂಗಳೂರು(ಜ.21):  ಇತ್ತೀಚೆಗೆ ಬೆಂಗಳೂರು, ನಂಜನಗೂಡು ಮತ್ತು ಹೊನ್ನಾವರದಲ್ಲಿ ನಡೆದ ಗೋವುಗಳ ಮೇಲಿನ ವಿಕೃತಿ ಪ್ರಕರಣ ಕುರಿತು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಪ್ರಕರಣದ ಕುರಿತು ರಾಜ್ಯ ಸರ್ಕಾರ ತನಿಖೆಗೆ ಸೂಚಿಸಿದೆ. ಜೊತೆಗೆ ಪ್ರಕರಣದ ಕುರಿತು ಸ್ವತಃ ಗೃಹ ಸಚಿವ ಜಿ.ಪರಮೇಶ್ವರ್‌ ಅವರೇ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪರಮೇಶ್ವರ್‌, ರಾಜ್ಯದಲ್ಲಿ ಗೋಹತ್ಯೆ ಹೆಚ್ಚಳ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದ ಕಿಡಿಗೇಡಿಗಳು, ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ!

ಜೊತೆಗೆ, ಗೋಹತ್ಯೆ ತಡೆಗೆ ಏನಾದರು ಉಪಾಯ ಕಂಡು ಹಿಡಿಯಬೇಕಿದೆ. ಗೋಹತ್ಯೆ ಹೆಚ್ಚಳದ ಹಿನ್ನೆಲೆಯಲ್ಲಿ ಯಾವುದಾದರೂ ಸಂಘಟನೆ ಕೈವಾಡ ಇದೆಯೇ ಅಥವಾ ವ್ಯಕ್ತಿಗಳು ಯಾರಾದರು ಇದ್ದಾರೆಯೇ ಎಂಬುದನ್ನು ನೋಡಬೇಕು. ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಈ ಕುರಿತು ಸೂಚನೆ ನೀಡಿದ್ದೇನೆ ಎಂದರು.

ಮೈಕ್ರೋ ಫೈನಾನ್ಸ್ ವಂಚನೆ ಕುರಿತು ಪ್ರತಿಕ್ರಿಯಿಸಿ, ಫೈನಾನ್ಸ್‌ ವಂಚನೆ ತಡೆಗೆ ಹಣಕಾಸು ಇಲಾಖೆ ದಾರಿ ಹುಡುಕಬೇಕು. ನಾವು ಇದರಲ್ಲಿ ಏನೂ ಮಾಡಲು ಆಗುವುದಿಲ್ಲ. ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಈ ಕುರಿತು ಯಾವ ಹಂತದಲ್ಲಿ ಚರ್ಚೆಯಾಗಿದೆ ಗೊತ್ತಿಲ್ಲ. ಬಿಜೆಪಿಯವರು ಕಾಂಗ್ರೆಸ್‌ ಒಡೆದ ಮನೆ ಅನ್ನುತ್ತಿದ್ದರು. ಈಗ ಅವರ ಮನೆಗೆ ಎಷ್ಟು ಬಾಗಿಲು ಎಂದು ಹೇಳಬೇಕು? ಈಗೇನು ಮಾಡ್ತೀರಾ ಅಂತ ಬಿಜೆಪಿ ನಾಯಕರಿಗೆ ಕೇಳುತ್ತೇನೆ ಎಂದರು.

ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ: ಸಚಿವ ಪರಂ

ಹೊನ್ನಾವರ: ಹೊನ್ನಾವರದಲ್ಲಿ ಗರ್ಭಿಣಿ ಹಸುವಿನ ತಲೆ, ಕಾಲು ಕಡಿದು ಕರು ಎಸೆದು ಹೋದ ವಿಕೃತ ಘಟನೆ ಖಂಡಿಸಿ ಬಿಜೆಪಿ, ಹಿಂದೂಪರ ಸಂಘಟನೆಗಳು ಸೋಮವಾರ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದವು. ಇದೇ ವೇಳೆ ಘಟನಾ ಸ್ಥಳಕ್ಕೆ ಸೋಮವಾರ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಭೇಟಿ ನೀಡಿ ವಿವರ ಪಡೆದುಕೊಂಡರು.

ಗೋ ಶಾಲೆಗೆ ನಯಾಪೈಸೆ ಕೊಡದ ಕಾಂಗ್ರೆಸ್ ಸರ್ಕಾರ, ಮೇವಿಲ್ಲದೆ ಬಡಕಲು ಬಿದ್ದು ನರಳುತ್ತಿವೆ ಗೋವುಗಳು!

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಬಿವೈವಿ

ಬೆಂಗಳೂರು: ಹೊನ್ನಾವರದಲ್ಲಿ ಗೋವಿನ ರುಂಡ ಕತ್ತರಿಸಿ ಘಟನೆ ಅತ್ಯಂತ ಅಮಾನುಷ. ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಸಂಪೂರ್ಣವಾಗಿ ಹದಗೆಟ್ಟಿದೆ. ಪ್ರತಿಯೊಬ್ಬರೂ ತಲೆ ತಗ್ಗಿಸುವ ಘಟನೆಯಿದು. ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಗರ್ಭಿಣಿ ಹಸು ಹತ್ಯೆ ಖಂಡಿಸಿ ಹೊನ್ನಾವರದಲ್ಲಿ ಪ್ರತಿಭಟನೆ

ಹೊನ್ನಾವರ: ಹೊನ್ನಾವರದಲ್ಲಿ ಗರ್ಭಿಣಿ ಹಸುವಿನ ತಲೆ, ಕಾಲು ಕಡಿದು ಕರು ಎಸೆದು ಹೋದ ವಿಕೃತ ಘಟನೆ ಖಂಡಿಸಿ ಬಿಜೆಪಿ, ಹಿಂದೂಪರ ಸಂಘಟನೆಗಳು ಸೋಮವಾರ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದವು. ಇದೇ ವೇಳೆ ಘಟನಾ ಸ್ಥಳಕ್ಕೆ ಸೋಮವಾರ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಭೇಟಿ ನೀಡಿ ವಿವರ ಪಡೆದುಕೊಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್