
ಬೆಂಗಳೂರು(ಜು.23): ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸತ್ಯಾಸತ್ಯಗಳೇನು ಎಂಬುದನ್ನು ಹೊರತರುವ ಉದ್ದೇಶದಿಂದ ನಮ್ಮ ಸರ್ಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಸದಾಶಿವನಗರದ ತಮ್ಮ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕೆಂಬುದು ಕಾಂಗ್ರೆಸ್ ಪ್ರತಿಪಕ್ಷದಲ್ಲಿದ್ದಾಗ ಆಗ್ರಹವಾಗಿತ್ತು. ಆದರೆ, ಹಿಂದಿನ ಬಿಜೆಪಿ ಸರ್ಕಾರ ವಹಿಸಿರಲಿಲ್ಲ. ಈಗ ನಾವು ಅಧಿಕಾರಕ್ಕೆ ಬಂದಿದ್ದೇವೆ. ಸತ್ಯಾಸತ್ಯ ಹೊರಗೆ ಬರಬೇಕಾದರೆ ನ್ಯಾಯಾಂಗ ತನಿಖೆ ಆಗಬೇಕು. ಶುಕ್ರವಾರವಷ್ಟೆ ಈ ಸಂಬಂಧ ಆದೇಶ ಮಾಡಿದ್ದೇವೆ. ಹೈಕೋರ್ಟ್‌ನ ನಿವೃತ್ತ ನ್ಯಾಯಮುರ್ತಿ ವೀರಪ್ಪ ಅವರ ನೇತೃತ್ವದ ಏಕ ಸದಸ್ಯತ್ವದಲ್ಲಿ ತನಿಖೆ ನಡೆಯಲಿದೆ. ಸತ್ಯಾಸತ್ಯ ಹೊರಬರುವ ಸಂಪೂರ್ಣ ವಿಶ್ವಾಸವಿದೆ ಎಂದರು.
ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ: ಎಡಿಜಿಪಿ ಅಮೃತ್ ಪಾಲ್ ವಿರುದ್ಧ ಕ್ರಮಕ್ಕೆ ಕೇಂದ್ರ ಅಸ್ತು
ಇದಕ್ಕೂ ಮುನ್ನ ಸಚಿವ ಪ್ರಯಾಂಕ್ ಖರ್ಗೆ ಅವರು ಪರಮೇಶ್ವರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇದ್ದ ಒಂದಷ್ಟುದಾಖಲೆಗಳನ್ನು ನೀಡಿದ್ದಾರೆ ಎಂದು ಹೇಳಲಾಗಿದೆ. ಈ ಹಿಂದೆಯೂ ಪ್ರತಿಪಕ್ಷದಲ್ಲಿದ್ದಾಗ ಪ್ರಿಯಾಂಕ್ ಖರ್ಗೆ ಅವರು ಸುದ್ದಿಗೋಷ್ಠಿ ನಡೆಸಿ ಪ್ರಕರಣ ಸಂಬಂಧ ಹಲವು ಆರೋಪ, ದಾಖಲೆಗಳ ಬಿಡುಗಡೆ ಮಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ