Karnataka MLAs' Foreign Trip: ಶಾಸಕರು ಕೃಷಿ ಅಧ್ಯಯನಕ್ಕೆ ವಿದೇಶಕ್ಕೆ ಹೋಗ್ತಿರಬಹುದು, ಗೊತ್ತಿಲ್ಲ: ಪರಮೇಶ್ವರ್‌

Kannadaprabha News, Ravi Janekal |   | Kannada Prabha
Published : Feb 18, 2026, 06:50 AM IST
Dr G Parameshwara

ಸಾರಾಂಶ

karnataka MLAs' Foreign Trip: ಮಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸವು ಕೃಷಿ ಅಧ್ಯಯನಕ್ಕೆ ಇರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಎಚ್.ಸಿ ಮಹದೇವಪ್ಪ ಅವರ ದಲಿತ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಮಂಗಳೂರ (ಫೆ.18): ಶಾಸಕರು ಕೃಷಿ ಅಧ್ಯಯನಕ್ಕಾಗಿ ವಿದೇಶ ಪ್ರವಾಸಕ್ಕೆ ಹೋಗ್ತಿರಬಹುದು, ಗೊತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. 

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಪ್ರತಿಕ್ರಿಯಿಸಿ, ಅವರು ಯಾಕೆ ಹೋಗ್ತಿದ್ದಾರೆ ಎನ್ನುವುದು ಗೊತ್ತಿಲ್ಲ. ಆಸ್ಟ್ರೇಲಿಯಾ ಸೇರಿದಂತೆ ಎಲ್ಲಾ ಕಡೆ ಕೃಷಿ ಇದೆ. ಬಹುಶಃ ಕೃಷಿ ಅಧ್ಯಯನಕ್ಕೆ ಇರಬಹುದು. ಅವರ ಹಣದಲ್ಲಿ ಅವರು ಎಲ್ಲಿಗೆ ಬೇಕಾದರೂ ಹೋಗಬಹುದು. ಹಾಗಂತ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಯಾವ ಕದನವೂ ಇಲ್ಲ ಎಂದರು. 

ರಾಜ್ಯ ಬಜೆಟ್‌ನಲ್ಲಿ ಶಾಸಕರಿಗೆ ಕೆಲಸ ಇಲ್ಲ. ಬಜೆಟ್ ತಯಾರು ಮಾಡೋದು ಸಿಎಂ, ಹಣಕಾಸು ಇಲಾಖೆಯವರು. ಸಿಎಲ್‌ಪಿ ಸಭೆಯಲ್ಲಿ ಬಜೆಟ್ ಕುರಿತು ಶಾಸಕರು ತಮ್ಮ ಅನಿಸಿಕೆಗಳನ್ನು ಈಗಾಗಲೇ ಹೇಳಿದ್ದಾರೆ. ಅವೆಲ್ಲವನ್ನೂ ಕ್ರೋಢೀಕರಿಸಿ ಬಜೆಟ್ ತಯಾರು ಮಾಡುತ್ತಾರೆ ಎಂದು ಪರಮೇಶ್ವರ್‌ ಹೇಳಿದರು.

ಎಚ್.ಸಿ ಮಹದೇವಪ್ಪ ಅವರ ದಲಿತ ಸಿಎಂ ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿ, ಈಗ ದಲಿತ ಸಿಎಂ ಎಂಬ ಚರ್ಚೆಯೇ ಇಲ್ಲ. ನಾವು ಆಡಳಿತದ ಮೇಲೆ ನಿಗಾ ಇರಿಸಿದ್ದೇವೆ. ಮಹದೇವಪ್ಪ ಅವರು ತಮ್ಮ ಅಭಿಪ್ರಾಯ ಹೇಳಿಕೊಂಡಿದ್ದಾರೆ. ಮಹದೇವಪ್ಪ ಅವರು ಸಮರ್ಥರಿದ್ದಾರೆ. ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುವುದಕ್ಕೆ ಅವರಿಗೆ ಸಾಮರ್ಥ್ಯ ಇದೆ. ಅದಕ್ಕೆ ಅವರು ಹೇಳಿರಬಹುದು ಎಂದರು.

ಕಾಂಗ್ರೆಸ್‌ನಲ್ಲಿ ಒಂದು ವ್ಯವಸ್ಥೆ ಇದೆ, ಹೈಕಮಾಂಡ್ ಇದೆ. ಹೈಕಮಾಂಡ್ ನವರು ಆ ಬಗ್ಗೆ ತೀರ್ಮಾನ ಮಾಡುತ್ತಾರೆ. ಯಾರೋ 10 ಜನ ನನ್ನ ಪರವಾಗಿ ಜೈಕಾರ ಹಾಕಿದರೆ ಆಗಲ್ಲ. ಈಗ ಅಂತಹ ಸಂದರ್ಭ ಇದೆ ಅಂತ ನನಗೆ ಅನಿಸುವುದಿಲ್ಲ ಎಂದು ಡಾ.ಪರಮೇಶ್ವರ್‌ ಹೇಳಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: ಅಸಹಜ ಲೈಂ*ಕ ದೌರ್ಜನ್ಯ ಕೇಸ್‌: ಜೆಡಿಎಸ್ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಕೋರ್ಟ್‌ ಶಾಕ್‌
ಒಂಟಿ ವೃದ್ಧೆಯರ ಸುರಕ್ಷತೆಗೆ ಪೊಲೀಸರ ಹೊಸ ಪ್ಲಾನ್: ಮನೆ ಮಗನಂತೆ ರಕ್ಷಣೆ ನೀಡಲು ಇಲಾಖೆ ಸಜ್ಜು, ಏನಿದು ಹೊಸ ಯೋಜನೆ?