ಶಾಸಕ ಎಂಪಿ ರೇಣುಕಾಚಾರ್ಯ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು..!

Published : Oct 27, 2021, 08:27 PM ISTUpdated : Oct 27, 2021, 09:11 PM IST
ಶಾಸಕ ಎಂಪಿ ರೇಣುಕಾಚಾರ್ಯ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು..!

ಸಾರಾಂಶ

* ಆಸ್ಪತ್ರೆಗೆ ದಾಖಲಾದ ಶಾಸಕ ಎಂಪಿ ರೇಣುಕಾಚಾರ್ಯ * ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು * ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ

ಮುಂಬೈ/ ಬೆಂಗಳೂರು, (ಅ.27): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ (MP Renukacharya) ಅವರು ಕಾಲಿನ ಶಸ್ತ್ರಚಿಕಿತ್ಸೆಗೆ (Leg Surgery )ಒಳಗಾಗಿದ್ದಾರೆ.

ಹೌದು...ಮುಂಬೈನ (Mumbai) ಖಾಸಗಿ ಆಸ್ಪತ್ರೆಯಲ್ಲಿ (Hospital) ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಈ ಬಗ್ಗೆ ಆಸ್ಪತ್ರೆಯ ಬೆಡ್‌ ಮೇಲೆ ಮಲಗಿರುವ ಫೋಟೋಗಳನ್ನ ಇಂದು (ಅ.27) ಸಾಮಾಜಿಕ ಜಾಲತಾಣಗಳಲ್ಲಿ (Social Media) ಹಂಚಿಕೊಂಡಿದ್ದಾರೆ.

ಬಿಜೆಪಿಯಲ್ಲಿ ಮಹತ್ವ ಬೆಳವಣಿಗೆ: ಮತ್ತೊಮ್ಮೆ ಬೊಮ್ಮಾಯಿ ಸಚಿವ ಸಂಪುಟಕ್ಕೆ ಸರ್ಜರಿ ಆಗುತ್ತಾ?

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಂಭವಿಸಿದ್ದ ಅಪಘಾತದಿಂದಾಗಿ (Accident) ಅವರ ಕಾಳಿಗೆ (Leg) ಪೆಟ್ಟಾಗಿತ್ತು. ಇದೀಗ ಅದರ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಕಾಲಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ.

ಶಸ್ತ್ರಚಿಕಿತ್ಸೆ (surgery) ಮಾಡಿಸಿಕೊಂಡಿದ್ದರಿಂದ ಸದಾ ಕ್ಷೇತ್ರದಲ್ಲಿ ಓಡಾಡುತ್ತಿದ್ದ ರೇಣುಕಾಚಾರ್ಯ ಅವರು 15 ದಿನಗಳ ವರೆಗೆ ಬೆಂಗಳೂರಿನ (Bengaluru) ಆಯುರ್ವೇದಿಕ್ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಹಾನಗಲ್ ಉಪಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ್ ಪರ ಭರ್ಜರಿ ಪ್ರಚಾರ ಮಾಡಿದ್ದರು. ಇದೀಗ ದಿಢೀರ್ ಏಕಾಏಕಿ ಕಾಲಿನಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ನು ಈ ಕುರಿತು ಟ್ವೀಟ್​ (Tweet) ಮಾಡಿರುವ ಅವರು, ಆತ್ಮೀಯ ಬಂಧುಗಳೇ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಂಭವಿಸಿದ್ದ ಅಪಘಾತದಿಂದಾಗಿ ಕಳೆದ ಕೆಲ ತಿಂಗಳಿಂದ ಕಾಲುನೋವು ಕಾಣಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಮುಂಬೈ ಆಸ್ಪತೆಯಲ್ಲಿ ಆಪರೇಷನ್​ಗೆ ಒಳಗಾಗಿದ್ದೇನೆ.

ನಿಮ್ಮೆಲ್ಲರ ಹಾರೈಕೆ ಹಾಗೂ ಆಶೀರ್ವಾದದಿಂದ ಗುಣಮುಖನಾಗುತ್ತಿದ್ದು, ವೈದ್ಯರ ಸಲಹೆ ಮೇರೆಗೆ ಮುಂದಿನ 15 ದಿನಗಳು ಬೆಂಗಳೂರಿನ ಆಯುರ್ವೇದಿಕ್ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ನಿಮ್ಮ ಅಹವಾಲುಗಳಿಗೆ ದೂರವಾಣಿ ಮೂಲಕ ನನ್ನ ಆಪ್ತ ಸಹಾಯಕರು ಸ್ಪಂದಿಸಲಿದ್ದು, ನೀವು ಸಹಕರಿಸಬೇಕಾಗಿ ವಿನಯಪೂರ್ವಕವಾಗಿ ವಿನಂತಿಸುತ್ತೇನೆ ಎಂದಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಕೊರೋನಾ ಎರಡನೇ ಅಲೆ ಬಂದ ಮೇಲೆ ತಮ್ಮ ಕ್ಷೇತ್ರದಲ್ಲಿ ಟೊಂಕಕಟ್ಟಿ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರದ ತುಂಬೆಲ್ಲಾ ಓಡಾಡುತ್ತಾ ಜನರಿಗೆ ಧೈರ್ಯ ತುಂಬುವುದಲ್ಲದೆ ಆಹಾರ, ವೈದ್ಯಕೀಯ ನೆರವು, ಕೊರೋನಾ ಸೋಂಕುತರು ನೆಲೆಸಿರುವ ಕೇಂದ್ರಗಳಲ್ಲಿ ವಾಸ ಮಾಡಿ ಯೋಗ, ಧ್ಯಾನ ಶಿಬಿರ, ಸಂಗೀತ ರಸಸಂಜೆಗಳನ್ನು ನಡೆಸಿಕೊಟ್ಟಿದ್ದಾರೆ.

4  ಆ್ಯಂಬುಲೆನ್ಸ್ ದೇಣಿಗೆ
ಹೊನ್ನಾಳಿ ಸರ್ಕಾರಿ ಆಸ್ಪತ್ರೆಗೆ 4 ಆ್ಯಂಬುಲೆನ್ಸ್ ಹಾಗೂ 50 ಮಂಚವನ್ನು ದೇಣಿಗೆ ನೀಡಿದ್ದಾರೆ.  ತಮ್ಮ ತಂದೆ ತಾಯಿ ಸ್ಮರಣಾರ್ಥ ಸರ್ಕಾರಿ ಆಸ್ಪತ್ರೆಗೆ ಈ ದೇಣಿಗೆ ನೀಡಿದ್ದಾರೆ. ತಮ್ಮ ತಂದೆ ಪಂಚಾಕ್ಷರಯ್ಯ ಮತ್ತು ತಾಯಿ ಕಮಲಮ್ಮ ಅವರ ಸ್ಮರಣಾರ್ಥ ರೇಣುಕಾಚಾರ್ಯ ಈ ಕಾರ್ಯ ಮಾಡಿದ್ದಾರೆ. ಸಂಸದ ಜಿ.ಎಂ.ಸಿದ್ದೇಶ್ವರ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೇರಿದಂತೆ ಪ್ರಮುಖರ ಸಮ್ಮುಖದಲ್ಲಿ ಅಂಬ್ಯುಲೆನ್ಸ್ ಮತ್ತು ಮಂಚ ದಾನ ಮಾಡಿದ್ದಾರೆ.

ಕೊವಿಡ್ ಕೇರ್ ಸೆಂಟರ್​ನಲ್ಲಿ ರಸಮಂಜರಿ
ರೇಣುಕಾಚಾರ್ಯ ಅವರು ಮಾಡಿರುವ ಕಾರ್ಯ ಜನಮೆಚ್ಚುಗೆಗೆ ಕಾರಣವಾಗಿದೆ. ಕೊವಿಡ್ ಕೇರ್ ಸೆಂಟರ್​ನಲ್ಲಿ ರಸಮಂಜರಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ರೋಗಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದರು. ಅಲ್ಲದೇ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿದ್ದ ಜನರಿಗೆ ದಿನಸಿ ಕಿಟ್ ಸೇರಿದಂತೆ ಹಣ ಸಹಾಯ ಮಾಡಿದ್ದನ್ನು ನಾವು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಉಡುಪಿ: ಧರ್ಮ-ಸಂವಿಧಾನ ಬೇರೆಯಲ್ಲ:-ಪವನ್ ಕಲ್ಯಾಣ ಬಣ್ಣನೆ
ಪಬ್ಬಲ್ಲಿ ಮೊಬೈಲ್‌ ತರಲುಹೋದ ಕನ್ನಡಿಗ ಬಲಿ, ಗೋವಾ ಪಬ್ ದುರಂತಕ್ಕೆ ಕಾರಣವೇನು?