ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಗೌರವ ಡಾಕ್ಟರೇಟ್‌

By Sathish Kumar KH  |  First Published Jun 30, 2023, 12:52 PM IST

ಕರ್ನಾಟಕ ರಾಜ್ಯದ ಮುಕ್ತ ವಿಶ್ವವಿದ್ಯಾನಿಲಯದ 18ನೇ ವಾರ್ಷಿಕ ಘಟಿಕೋತ್ಸವದಲ್ಲಿ ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಗೌರವ ಡಾಕ್ಟರೇಟ್‌ ಘೋಷಣೆ ಮಾಡಿದೆ.


ಬೆಂಗಳೂರು (ಜೂ.30): ಕರ್ನಾಟಕ ರಾಜ್ಯದ ಮುಕ್ತ ವಿಶ್ವವಿದ್ಯಾನಿಲಯದ 18ನೇ ವಾರ್ಷಿಕ ಘಟಿಕೋತ್ಸವದಲ್ಲಿ ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್‌ ಪದವಿ ಪ್ರಮಾಣ ಮಾಡಲಾಗುತ್ತಿದೆ.

ಮೈಸೂರಿನ ಮಾನಸಗಂಗೋತ್ರಿ ಆವರಣದಲ್ಲಿರುವ  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 18ನೇ ವಾರ್ಷಿಕ ಘಟಿಕೋತ್ಸವದಲ್ಲಿ (18th Annual Convocation of Karnataka State Open University) ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್‌ (ಡಿ.ಲಿಟ್‌) ಪ್ರದಾನ ಮಾಡಲಾಗುತ್ತಿದೆ. ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಎನ್. ರಾಮಚಂದ್ರಯ್ಯ, ಶ್ರೀ ವೆಂಕಟಲಕ್ಷ್ಮೀ ನರಸಿಂಹರಾಜು ಅವರಿಗೆ ಗೌರವ ಡಾಕ್ಟರೇಟ್‌ (Honorary Doctorate) ನೀಡಿ ಗೌರವಿಸಲಾಗುತ್ತಿದೆ ಎಂದು ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರಣಪ್ಪ ಹಲಸೆ ತಿಳಿಸಿದ್ದಾರೆ.

Tap to resize

Latest Videos

undefined

ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌: ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಣೆ

ಜು.2ರಂದು ಘಟಿಕೋತ್ಸವ ಕಾರ್ಯಕ್ರಮ:  ಈ ಬಗ್ಗೆ ಮಾತನಾಡಿದ ಅವರು, ವಿಶ್ವವಿದ್ಯಾನಿಲಯದ ಘಟಿಕೋತ್ಸವ ಜುಲೈ 2ರ ಭಾನುವಾರ ನಡೆಯಲಿದೆ. ರಾಷ್ಟ್ರಪತಿ ಅವರನ್ನೂ ಆಹ್ವಾನಿಸಲಾಗಿದೆ. ಆ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಅವರು ಆಗಮಿಸದಿದ್ದರೆ ಜು.3ರಂದು ರಾಷ್ಟ್ರಪತಿ ಅವರು ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ರಾಜಭವನದಲ್ಲಿ ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಗುವುದು ಎಂದು ಕುಲಪತಿಗಳು ಮಾಹಿತಿ ನೀಡಿದರು. 

8,722 ಅಭ್ಯರ್ಥಿಗಳಿಗೆ ಪದವಿ ಪ್ರದಾನ: ಉಳಿದಂತೆ, ಒಬ್ಬರಿಗೆ ಪಿ.ಹೆಚ್‌ಡಿ. ಪದವಿ ಪ್ರದಾನ, 44 ಚಿನ್ನದ ಪದಕಗಳು, 27 ನಗದು ಬಹುಮಾನಗಳನ್ನು ವಿತರಣೆ ಮಾಡಲಾಗುತ್ತಿದೆ. ವಿಶ್ವವಿದ್ಯಾಲಯದ ವಿವಿಧ ವಿಷಗಳಲ್ಲಿ ಒಟ್ಟು 8,722 ಪದವಿ ಪೂರೈಸಿದವರಿಗೆ ಪದವಿ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಈ ಪೈಕಿ 5,241 ಮಹಿಳೆಯರು ಹಾಗೂ 3,481 ಪುರುಷರು ಪದವಿ ಪಡೆಯಲು ಅರ್ಹರಾಗಿದ್ದಾರೆ. 

ನಾಳೆಯಿಂದಲೇ ಅನ್ನಭಾಗ್ಯ ಯೋಜನೆ ಜಾರಿ: 5 ಅಕ್ಕಿ, 170 ರೂ. ಹಣ ಹಂಚಿಕೆಗೆ ಚಾಲನೆ

ದ್ರೌಪದಿ ಮುರ್ಮು ಅವರ ವಿಶೇಷತೆ: ಇನ್ನು ಭಾರತದ ರಾಷ್ಟ್ರಪತಿ ಆಗಿರುವ ದ್ರೌಪದಿ ಮುರ್ಮು ಅವರು ಆದಿವಾಸಿ ಎಂಬ ಮಹಿಳೆ ಎಂಬುದೇ ದೇಶದ ಸಂವಿಧಾನಿಕ ಸಮಾನತೆ ಎತ್ತಿ ಹಿಡಿದಿರುವುದಕ್ಕೆ ಕೈಗನ್ನಡಿ ಆಗಿದೆ. ಇನ್ನು ಮೂಲತಃ ದ್ರೌಪದಿ ಮುರ್ಮು ಅವರು ಶಿಕ್ಷಕಿ ಆಗಿಯೂ ಕಾರ್ಯನಿರ್ವಹಿಸಿದ್ದಾರೆ. ನಂತರ, ರಾಜ್ಯಪಾಲರಾಗಿ ಮತ್ತು ಪ್ರಸ್ತುತ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 

click me!