ಸಿಂಧನೂರು ಬಳಿ ಭೀಕರ ಅಪಘಾತ, ಮಂತ್ರಾಲಯ ಮಠದ ಚಾಲಕ ಸೇರಿ ನಾಲ್ವರು ದುರ್ಮರಣ!

Published : Jan 22, 2025, 12:39 PM ISTUpdated : Jan 22, 2025, 02:07 PM IST
ಸಿಂಧನೂರು ಬಳಿ ಭೀಕರ ಅಪಘಾತ, ಮಂತ್ರಾಲಯ ಮಠದ ಚಾಲಕ ಸೇರಿ ನಾಲ್ವರು ದುರ್ಮರಣ!

ಸಾರಾಂಶ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಬಳಿ ವಾಹನ ಪಲ್ಟಿಯಾಗಿ ಮಂತ್ರಾಲಯ ಮಠದ ಚಾಲಕ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮಂತ್ರಾಲಯದಿಂದ ಹಂಪಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಗಂಗಾವತಿ (ಜ.22): ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಬಳಿ ವಾಹನ ಪಲ್ಟಿಯಾಗಿ ಮಂತ್ರಾಲಯ ಮಠದ ಚಾಲಕ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಮಂತ್ರಾಲಯದಿಂದ ಹಂಪಿಯ ನರಹರಿತೀರ್ಥರ ಆರಾಧನೆಗೆ ತೆರಳುತ್ತಿದ್ದ ವಾಹನ ಮಾರ್ಗ ಮಧ್ಯೆ ಎಕ್ಸೆಲ್ ಕಟ್ ಆಗಿ ದುರಂತ ಸಂಭವಿಸಿದೆ. ದುರ್ಘಟನೆಯಲ್ಲಿ ಮಂತ್ರಾಲಯ ಸಂಸ್ಕೃತ ಪಾಠ ಶಾಲೆಯ ಮೂರು ವಿದ್ಯಾರ್ಥಿಗಳು ಸೇರಿ ವಾಹನ ಚಾಲಕ ಕೂಡ ಮೃತಪಟ್ಟಿದ್ದಾರೆ.  ಮೃತರನ್ನ ಅಯ್ಯವಂದನ್ ( 18), ಸುಜೇಂದ್ರ( 22), ಅಭಿಲಾಷ (20) ಹಾಗೂ ವಾಹನ ಚಾಲಕ ಶಿವಾ(24)  ಎಂದು ಗುರುತಿಸಲಾಗಿದೆ. 

ಮೃತ ಅಭಿಲಾಷ ಕೊಪ್ಪಳ ಮೂಲದವರಾಗಿದ್ದು, ಅಶೋಕ್ ದಂಪತಿಗಳಿಗೆ ಒಬ್ಬನೇ ಮಗನಾಗಿದ್ದ, ಕಳೆದ ನಾಲ್ಕು ವರ್ಷಗಳಿಂದ ಮಂತ್ರಾಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಮಂಗಳವಾರ ವಾಹನದಲ್ಲಿ ಹಂಪಿಯಿಂದ ನರಹರಿತೀರ್ಥರ ಆರಾಧನೆಗೆ ಹೊರಟಿದ್ದರು. 

ಎರಡು ಬೈಕ್ ಮೈ ಮೇಲೆ ಹರಿದರೂ ಬದುಕುಳಿದ ಮಗು: ಬೆಟ್ಟದಿಂದ ಬೀಳುತ್ತಿದ್ದವಳನ್ನ ಬದುಕಿಸಿದ್ದೇ ರೋಚಕ!

10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ:

ದುರ್ಘಟನೆಯಲ್ಲಿ 10ಕ್ಕೂ ಜನರನ್ನ ರಾಯಚೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.  ಘಟನಾ ಸ್ಥಳಕ್ಕೆ ಸಿಂಧನೂರು ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ರಾತ್ರಿಯೇ ಮೃತದೇಹ ಪೋಸ್ಟ್ ಮಾರ್ಟಮ್ ಮುಗಿಸಿ ಶವಗಳನ್ನ ಪೋಷಕರಿಗೆ ಹಸ್ತಾಂತರಿಸಲಾಗಿದೆ.  

ಚಾಲಕನ ನಿರ್ಲಕ್ಷ್ಯ?

ಈ ಸಂಬಂಧ ಸಿಂಧನೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  14 ಜನ ಪ್ರಯಾಣಿಸುತ್ತಿದ್ದ ಕ್ರೂಶರ್ ವಾಹನದ ಆಕ್ಸಲ್ ಕಟ್ ಆಗಿ ಮೂರು ಬಾರಿ ಪಲ್ಟಿ ಹೊಡೆದಿದೆ. ಚಾಲಕನ ಅತೀ ವೇಗ ಹಾಗೂ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. 

 

Bengaluru: ನೆಲಮಂಗಲದಲ್ಲಿ ಮತ್ತೊಂದು ಭೀಕರ ಅಪಘಾತ, ಚಲಿಸುತ್ತಿದ್ದ ಲಾರಿಯ ಅಡಿಗೆ ಸಿಲುಕಿದ ಕಾರು!

ಸ್ಥಳಕ್ಕೆ ಮಂತ್ರಾಲಯ ಶ್ರೀಗಳು ಭೇಟಿ

ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಯ ನರಹರಿ ತೀರ್ಥರ ಬೃಂದಾವನಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ.  ಪೊಲೀಸ್ ಅಧಿಕಾರಿಗಳು ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ.  ಘಟನೆ ಹಿನ್ನೆಲೆಯಲ್ಲಿ ಮಂತ್ರಾಲಯ ಶ್ರೀಗಳು ಸ್ಥಳಕ್ಕೆ ಆಗಮಿಸಿ ಮಾಹಿತಿಯನ್ನ ಪಡೆದುಕೊಂಡಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್