
ಕೊಡಗು (ಏ.12): ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ (40) ದಾರುಣವಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 275 ರ ಆನೆಕಾಡು ಸಮೀಪದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ ನಿನ್ನೆ ಕೆಲಸ ಮುಗಿಸಿಕೊಂಡು ತಡರಾತ್ರಿ ಹರೀಶ್ ಅವರು ಕುಶಾಲನಗರದಿಂದ ತಮ್ಮ ಸ್ವಗ್ರಾಮವಾದ ಹೊಸಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ವೇಗವಾಗಿ ಡಿಕ್ಕಿ ಹೊಡೆದಿದೆ. ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಹರೀಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತ ಹರೀಶ್ ಅವರು ಬಹುಮುಖಿ ಪ್ರತಿಭೆಯಾಗಿದ್ದರು. ಅವರು ವೃತ್ತಿಜೀವನದ ಜೊತೆಗೇ ಹಲವು ಕನ್ನಡ ಸಿನಿಮಾಗಳಲ್ಲಿ ಸಹ ಕಲಾವಿದನಾಗಿ ಮತ್ತು ಕಿರುತೆರೆಯ ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ತಮ್ಮನ್ನು ಗುರುತಿಸಿಕೊಂಡಿದ್ದರು.
ಸ್ಥಳಕ್ಕೆ ಪೊಲೀಸರು ಭೇಟಿ
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಸದ್ಯ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ