
ಬೆಂಗಳೂರು(ಜು.02): ವಿವಿಧ ಮ್ಯಾನೇಜ್‌ಮೆಂಟ್ ಕೋರ್ಸ್‌ಗಳ ರೀತಿ ಆಸ್ಪತ್ರೆ ನಿರ್ವಹಣೆಗೂ ಈಗ ಒಂದು ಹೊಸ ಕೋರ್ಸ್ ಬಂದಿದೆ. ಈ ಕೋರ್ಸ್‌ನಲ್ಲಿ ಆಸ್ಪತ್ರೆ ನಿರ್ವಹಣೆಗೆ ಬೇಕಾದ 10ಕ್ಕೂ ಅಧಿಕ ಕೌಶಲ್ಯಗಳ ತರಬೇತಿ ನೀಡಲಾಗುತ್ತದೆ.
ವಿವಿಧ ವಲಯಗಳ ನಿರ್ವಹಣಾ ತರಬೇತಿಯನ್ನು ನೀಡುವ ಬೆಂಗಳೂರಿನ ‘ಐಐಎಂ-ಬಿ’ಯಲ್ಲಿ ಶುಕ್ರವಾರ ಆಸ್ಪತ್ರೆ ನಿರ್ವಹಣಾ (ಹಾಸ್ಪಿಟಲ್ ಮ್ಯಾನೇಜ್‌ಮೆಂಟ್) ಕೋರ್ಸ್‌ಗೆ ಆರೋಗ್ಯ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಚಾಲನೆ ನೀಡಿದರು.
Tomato Flu ಕೋವಿಡ್‌ಗೂ ಟೊಮೆಟೋ ಜ್ವರಕ್ಕೂ ಸಂಬಂಧವಿಲ್ಲ, ಸುಧಾಕರ್!
ಈ ಸಂದರ್ಭದಲ್ಲಿ ಮಾತನಾಡಿದ ಸುಧಾಕರ್, ‘ವೈದ್ಯರಿಗೆ ಆಸ್ಪತ್ರೆಯ ಆಡಳಿತದ ನಿರ್ವಹಣೆ ಮಾಡುವ ನಾಯಕತ್ವವು ಅವಶ್ಯಕವಿದೆ. ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಇಲಾಖೆಯ ಹಿರಿಯ ಅಧಿಕಾರಿಗಳು, ಜಿಲ್ಲಾ ಆಸ್ಪತ್ರೆಗಳ ವೈದ್ಯರಿಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (ಐಐಎಂಬಿ) ವತಿಯಿಂದ ಆಸ್ಪತ್ರೆ ನಿರ್ವಹಣಾ ತರಬೇತಿಯನ್ನು ಕೊಡಿಸಲಾಗುತ್ತದೆ’ ಎಂದು ಪ್ರಕಟಿಸಿದರು.
‘ವೈದ್ಯರು ಆಸ್ಪತ್ರೆಯಲ್ಲಿ ರೋಗಿಗೆ ಚಿಕಿತ್ಸೆ ನೀಡುವುದು ಎಷ್ಟುಮುಖ್ಯವೋ, ಆಸ್ಪತ್ರೆಯ ನಿರ್ವಹಣೆಯೂ ಅಷ್ಟೇ ಮುಖ್ಯ. ಆಗ ಮಾತ್ರ ಆರೋಗ್ಯ ಸೇವೆಗಳಲ್ಲಿ ದಕ್ಷತೆ, ಗುಣಮಟ್ಟ, ವೃತ್ತಿಪರತೆ ಕಾಯ್ದುಕೊಳ್ಳಲು ಸಾಧ್ಯ. ಆಸ್ಪತ್ರೆಯೊಂದರ ಸಮಗ್ರ ಪ್ರಗತಿಗೆ ವೈದ್ಯರೇ ಮುಂದಾಳತ್ವ ವಹಿಸಿ ನಿರ್ವಹಣೆ ಮಾಡಬೇಕು. ಈ ನಿಟ್ಟಿನಲ್ಲಿ ಒಂದು ವೃತ್ತಿಪರ ಕೋರ್ಸ್ ಆರಂಭಿಸಬೇಕೆಂಬ ಕನಸು ನನಗಿತ್ತು. ಇದಕ್ಕೆ ಪೂರಕವಾಗುವಂತೆ ಐಐಎಂಬಿ ನೂತನ ಆನ್‌ಲೈನ್ ಕೋರ್ಸ್ ಆರಂಭಿಸಿದೆ. ಮೊದಲ ಹಂತದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ, ಉನ್ನತ ಆಸ್ಪತ್ರೆಗಳ ಹಿರಿಯ ಅಧಿಕಾರಿಗಳು, ಜಿಲ್ಲಾವೈದ್ಯಕೀಯ ಅಧಿಕಾರಿಗಳು, ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕರು ಸೇರಿದಂತೆ ಹಲವರಿಗೆ ಈ ಕೋರ್ಸ್ ಮೂಲಕ ನಿರ್ವಹಣಾ ತರಬೇತಿ ಕೊಡಿಸಲು ಕ್ರಮವಹಿಸಲಾಗುವುದು’ ಎಂದರು.
ಕರ್ನಾಟಕದಲ್ಲೂ ಕೋವಿಡ್ ಆತಂಕ?: ಸಚಿವ ಸುಧಾಕರ್ ಪ್ರತಿಕ್ರಿಯೆ
‘ಐಐಎಂಬಿಯ ಪರಿಣತ ಉಪನ್ಯಾಸಕರು ತರಬೇತಿ ನೀಡಲಿದ್ದಾರೆ. ಇದರಿಂದಾಗಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಆಡಳಿತ ನಡೆಸುವ ಪರಿಣತಿಯನ್ನು ವೈದ್ಯರು ಹೊಂದಬಹುದಾಗಿದೆ. ಈ ಕೋರ್ಸ್‌ನಿಂದ ರಾಜ್ಯ ಮಾತ್ರವಲ್ಲದೆ, ಇಡೀ ದೇಶದ ವೈದ್ಯರಿಗೆ ನೆರವಾಗಲಿದೆ. ಖಾಸಗಿ ಆಸ್ಪತ್ರೆಗಳ ವೈದ್ಯರು ಕೂಡಾ ಈ ಕೋರ್ಸ್‌ನ ಅನುಕೂಲ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಏನಿದು ಕೋರ್ಸ್?
ಆಸ್ಪತ್ರೆಯ ಸ್ವಚ್ಛತೆಯ ನಿರ್ವಹಣೆ, ಔಷಧ ಪೂರೈಕೆ, ಯಂತ್ರೋಪಕರಣ ಸುಸ್ಥಿತಿ ಕಾಪಾಡುವುದು, ಸಿಬ್ಬಂದಿ ನಿರ್ವಹಣೆ, ಲೆಕ್ಕಪತ್ರಗಳ ನಿರ್ವಹಣೆ ಸೇರಿ ಅನೇಕ ತರಬೇತಿಯನ್ನು ಒಳಗೊಂಡಿದೆ. ವೈದ್ಯಕೀಯ ವಲಯದ ಸಿಬ್ಬಂದಿಗಳು, ವೈದ್ಯರು, ಅಧಿಕಾರಿಗಳು ಐಐಎಂಬಿಯಲ್ಲಿ ನೋಂದಣಿಯಾಗುವ ಮೂಲಕ ಈ ಕೋರ್ಸ್ ಸೇರಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ