ಬೆಂಗಳೂರು ನ.16ಮೆಟ್ರೋ ರೈಲು ಮಾರ್ಗ ನಿರ್ಮಾಣ ಹಿನ್ನೆಲೆಯಲ್ಲಿ ಕತ್ತರಿಸಲಾದ ಮರಗಳಿಗೆ ಪ್ರತಿಯಾಗಿ ನಗರದ ಯಾವೆಲ್ಲಾ ಪ್ರದೇಶಗಳಲ್ಲಿ ಎಷ್ಟುಗಿಡಗಳನ್ನು ನೆಡಲಾಗಿದೆ ಹಾಗೂ ಎಷ್ಟುಮರಗಳನ್ನು ಸ್ಥಳಾಂತರಿಸಲಾಗಿದೆ ಎಂಬ ವರದಿ ಸಲ್ಲಿಸುವಂತೆ ಬೆಂಗಳೂರು ಮೆಟ್ರೋ ರೈಲು ಅಭಿವೃದ್ಧಿ ನಿಗಮಕ್ಕೆ (ಬಿಎಂಆರ್‌ಸಿಎಲ್) ಹೈಕೋರ್ಚ್ ಮಂಗಳವಾರ ನಿರ್ದೇಶಿಸಿದೆ.
ಬೆಂಗಳೂರು ಪರಿಸರ ಟ್ರಸ್ಟ್ ಮತ್ತು ಪರಿಸರ ತಜ್ಞ ದತ್ತಾತ್ರೇಯ ಟಿ. ದೇವರು ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿತು.
ಮೆಟ್ರೋ ಕ್ಯಾಶ್ & ಕ್ಯಾರಿ ರಿಲಯನ್ಸ್ ತೆಕ್ಕೆಗೆ? 4,060 ಕೋಟಿ ರೂ. ಒಪ್ಪಂದಕ್ಕೆ ಜರ್ಮನಿ ಸಂಸ್ಥೆ ಒಪ್ಪಿಗೆ
ಇದಕ್ಕೂ ಮುನ್ನ ಅರ್ಜಿದಾರ ಪರ ವಕೀಲರು, 10 ಸಾವಿರ ಗಿಡ ನೆಡಲಾಗಿದೆ ಎಂದು ಬಿಎಂಆಆರ್‌ಸಿಎಲ್ ಹೇಳಿದೆ. ಆದರೆ, ಅವುಗಳ ಸ್ಥಿತಿಗತಿ ಏನಾಗಿದೆ ಎಂಬ ಯಾವುದೇ ಮಾಹಿತಿ ಲಭ್ಯವಿಲ್ಲ ಎಂದು ಪೀಠದ ಗಮನ ಸೆಳೆದರು.
ಅದಕ್ಕೆ ಬಿಎಂಆರ್‌ಸಿಎಲ್ ಪರ ವಕೀಲರು ಸುದೀರ್ಘವಾಗಿ ಸಮಜಾಯಿಷಿ ನೀಡಿದಾಗ ಪ್ರತಿಕ್ರಿಯಿಸಿದ ನ್ಯಾಯಪೀಠ, ಒಂದು ಮರ ಕಡಿದರೆ ಅದಕ್ಕೆ ಪರ್ಯಾಯವಾಗಿ 10 ಗಿಡ ನೆಡುವುದರಿಂದ ನಗರದ ಹಸಿರು ಹೊದಿಕೆಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಈ ಮೂಲಕ ಪರಿಸರ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸಿದಂತಾಗುತ್ತದೆ ಎಂದು ನುಡಿಯಿತು.
ಎಲ್ಲೆಲ್ಲಿ ಗಿಡ ನೆಡಲಾಗಿದೆ. ಗಿಡ ನೆಟ್ಟಿರುವುದನ್ನು ಯಾವ ಪ್ರಾಧಿಕಾರ ಪರಿಶೀಲಿಸಿದೆ. ಅದಕ್ಕೆ ಒಪ್ಪಿಗೆ ನೀಡಿರುವ ಹಾಗೂ ನಿರ್ದಿಷ್ಟಪ್ರದೇಶದಲ್ಲಿ ನೆಡಲಾಗಿರುವ ಗಿಡಗಳ ಸಂಖ್ಯೆ ಬಗ್ಗೆ ಮಾಹಿತಿ ಒಳಗೊಂಡ ವರದಿ ಸಲ್ಲಿಸಬೇಕು ಬಿಎಂಆರ್‌ಸಿಎಲ್‌ಗೆ ಸೂಚಿಸಿತು. ಬೆಂಗ್ಳೂರಿನ 3ನೇ ಹಂತದ ಮೆಟ್ರೋಗೆ 16 ಸಾವಿರ ಕೋಟಿ ವೆಚ್ಚ..!