ಜನ ಬೆಲೆ ಏರಿಕೆ ಹೇಗೆ ಎದುರಿಸಬೇಕು? ಇನ್ಫೋಸಿಸ್ ನಾರಾಯಣಮೂರ್ತಿಗೆ ಡಿಕೆಶಿ ಪ್ರಶ್ನೆ

By Kannadaprabha News  |  First Published Dec 2, 2023, 4:49 AM IST

‘ರಾಜ್ಯ ಸರ್ಕಾರ ರೈತರು ಹಾಗೂ ಬಡವರ ನೆರವಿಗೆ ಬಾರದಿದ್ದರೆ ಬೆಲೆ ಏರಿಕೆ ಸಮಸ್ಯೆಯನ್ನು ಜನಸಾಮಾನ್ಯರು ಹೇಗೆ ಎದುರಿಸಬೇಕು?’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದ್ದಾರೆ. ತನ್ಮೂಲಕ ‘ಸರ್ಕಾರಗಳು ಜನರಿಗೆ ಉಚಿತ ಕೊಡುಗೆಗಳನ್ನು ನೀಡಬಾರದು’ ಎಂದಿರುವ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.


ಬೆಂಗಳೂರು (ಡಿ.2) :  ‘ರಾಜ್ಯ ಸರ್ಕಾರ ರೈತರು ಹಾಗೂ ಬಡವರ ನೆರವಿಗೆ ಬಾರದಿದ್ದರೆ ಬೆಲೆ ಏರಿಕೆ ಸಮಸ್ಯೆಯನ್ನು ಜನಸಾಮಾನ್ಯರು ಹೇಗೆ ಎದುರಿಸಬೇಕು?’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದ್ದಾರೆ. ತನ್ಮೂಲಕ ‘ಸರ್ಕಾರಗಳು ಜನರಿಗೆ ಉಚಿತ ಕೊಡುಗೆಗಳನ್ನು ನೀಡಬಾರದು’ ಎಂದಿರುವ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

‘ನಾರಾಯಣ ಮೂರ್ತಿ ಅವರ ಸಲಹೆ ಜನರ ಅಭಿವೃದ್ಧಿಯ ಭಾಗವಾಗಿರಬಹುದು. ಆದರೆ, ಈ ವಿಷಯದಲ್ಲಿ ಸರ್ಕಾರದ ನಿರ್ಧಾರ ಅಂತಿಮ’ ಎಂದು ಡಿಕೆಶಿ ಸುದ್ದಿಗಾರರಿಗೆ ಸ್ಪಷ್ಟಪಡಿಸಿದರು.

Tap to resize

Latest Videos

 

ಶಾಲೆಗಳಿಗೆ ಬಾಂಬ್‌ ಬೆದರಿಕೆ ಪ್ರಕರಣ ಗಂಭೀರ ಪರಿಶೀಲನೆ: ಗೃಹ ಸಚಿವ ಪರಮೇಶ್ವರ

ಸರ್ಕಾರ ರೈತರು, ಬಡವರಿಗೆ ನೆರವಾಗಬೇಕು. ಸರ್ಕಾರವು ನೆರವಿಗೆ ಬಾರದಿದ್ದರೆ ಬೆಲೆ ಏರಿಕೆ ಸಮಸ್ಯೆಯನ್ನು ಜನ ಸಾಮಾನ್ಯರು ಹೇಗೆ ಎದುರಿಸಬೇಕು. 70 ರು. ಇದ್ದ ಪೆಟ್ರೋಲ್ ಬೆಲೆ 110 ರು. ಆಗಿದೆ. ಜನಸಾಮಾನ್ಯರ ದುಡಿಮೆಯ ಹಣ ಹೆಚ್ಚಳವಾಗಿಲ್ಲ. ಬೆಲೆ ಏರಿಕೆಯಂತಹ ಗಂಭೀರ ಸಮಸ್ಯೆಗಳನ್ನು ಎದುರಿಸಲು ಜನಸಾಮಾನ್ಯರಿಗೆ ಶಕ್ತಿ ಬೇಕಲ್ಲವೇ? ಇಂತಹ ಸಮಸ್ಯೆಗಳನ್ನು ಹೇಗೆ ನಿವಾರಣೆ ಮಾಡಬೇಕು? ಎಂದು ಪ್ರಶ್ನಿಸಿದರು.

ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ: 24 ತಾಸಲ್ಲೇ ಆರೋಪಿಗಳ ಪತ್ತೆ 

ಬೆಂಗಳೂರಿನ‌ ಶಾಲೆಗಳಿಗೆ ಬಂದಿರುವುದು ಹುಸಿ ಬಾಂಬ್‌ ಬೆದರಿಕೆಯಾದರೂ ಸುಮ್ಮನಿರಲು ಆಗುವುದಿಲ್ಲ. ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಕೈಗೊಂಡಿದೆ. 24 ಗಂಟೆಯಲ್ಲಿ ಹುಸಿ ಬಾಂಬ್‌ ಬೆದರಿಕೆ ಒಡ್ಡಿದ ದುಷ್ಕರ್ಮಿಗಳನ್ನು ಪೊಲೀಸರು ಪತ್ತೆ ಹಚ್ಚಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿಯ ನೀವ್ ಅಕಾಡೆಮಿಗೂ ಹುಸಿ ಬಾಂಬ್‌ ಬೆದರಿಕೆಯ ಇ-ಮೇಲ್‌ ಬಂದಿರುವ ಸುದ್ದಿ ತಿಳಿದು ಶಾಲೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಿರುವ ಸುದ್ದಿ ತಿಳಿದ ಗಾಬರಿಯಾಯಿತು. ನನಗೆ ಪರಿಚಯವಿರುವ ಕೆಲವು ಶಾಲೆಗಳಿಂದ ಇ- ಮೇಲ್‌ ಸಂದೇಶದ ಮಾಹಿತಿ ಗೊತ್ತಾಯಿತು. ನಮ್ಮ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದರು.

ನಾವು ಬಡವರಿಗೆ ಸಹಾಯ ಮಾಡಿದ್ರೆ, ಶ್ರೀಮಂತರಿಗೆ ಹೊಟ್ಟೆ ಉರಿಯುತ್ತೆ: ನಾರಾಯಣ ಮೂರ್ತಿ ಹೇಳಿಕೆಗೆ ಸಚಿವ ತಂಗಡಗಿ ಕಿಡಿ

ಕೆಲವೊಮ್ಮೆ 10 ಹುಸಿ ಬೆದರಿಕೆಗಳ ಪೈಕಿ ಒಂದು ಟಾರ್ಗೆಟ್ ಮಾಡುವ ಸಾಧ್ಯತೆ ಇರುತ್ತದೆ. ಇಂತಹ ಹುಸಿ ಬೆದರಿಕೆಗಳನ್ನು ನಾವು ನಿರ್ಲಕ್ಷಿಸುವುದಿಲ್ಲ. ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮಕೈಗೊಳ್ಳುತ್ತೇವೆ ಎಂದರು.

ಹುಸಿ ಬೆದರಿಕೆ ಎಂದು ಸರ್ಕಾರ ಸುಮ್ಮನಿರುವುದಿಲ್ಲ. ಸೂಕ್ತ ತನಿಖೆ ನಡೆಸಿ ಇಂತಹ ಕೃತ್ಯ ಎಸಗಿದ್ದು ಯಾರು ಎಂದು 24 ಗಂಟೆಯೊಳಗೆ ಪತ್ತೆ ಮಾಡಲಾಗುವುದು. ಕೆಲವರು ಕಿಡಿಗೇಡಿಗಳು ಈ ರೀತಿ ಚೇಷ್ಟೆ ಮಾಡುತ್ತಾರೆ, ಹಬ್ಬ ಅದರ ಪಾಡಿಗೆ ಅದು ನಡೆಯುತ್ತದೆ. ಸೈಬರ್‌ ಕ್ರೈಂ ವಿಭಾಗದವರು ಸಕ್ರಿಯವಾಗಿದ್ದಾರೆ. ಕಳೆದ ಒಂದು ವರ್ಷದ ಹಿಂದೆಯೂ ಹೀಗೆ ಆಗಿತ್ತು ಎಂದರು.

click me!