
ಬೆಂಗಳೂರು(ನ.16): ಮುಸ್ಲಿಮರ ವಿವಾಹ ನೋಂದಣಿ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ನೀಡಿರುವುದನ್ನು ಎಲ್ಲಿಯೂ ಕೇಳಿಲ್ಲ ಎಂದು ನುಡಿದಿರುವ ಹೈಕೋರ್ಟ್, ಯಾವ ಕಾನೂನಿನ ಅಧಿಕಾರ ಬಳಸಿ ಇಂತಹ ಆದೇಶ ಹೊರಡಿಸಲಾಗಿದೆ ಎಂಬ ಬಗ್ಗೆ ಉತ್ತರ ನೀಡುವಂತೆ ಸರ್ಕಾರಕ್ಕೆ ಸೂಚಿಸಿದೆ.
ಮುಸ್ಲಿಂ ಸಮುದಾಯದವರ ವಿವಾಹ ನೋಂದಣಿ ಪ್ರಮಾಣಪತ್ರಗಳನ್ನು ವಿತರಿಸುವ ಅಧಿಕಾರವನ್ನು ಕರ್ನಾಟಕ ವಕ್ಫ್ ಮಂಡಳಿಗೆ ನೀಡಿ ರಾಜ್ಯ ಅಲ್ಪಸಂಖ್ಯಾತ, ವಕ್ಫ್ ಮತ್ತು ಹಜ್ ಇಲಾಖೆಯು 2023ರ ಸೆ.30ರಂದು ಹೊರಡಿಸಿದ ಆದೇಶ ಪ್ರಶ್ನಿಸಿ ಬೆಂಗಳೂರಿನ ಆಲಂಪಾಷಾ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ವಾಲ್ಮೀಕಿ ನಿಗಮ ಅಕ್ರಮ ಕೇಸ್ ಸಿಬಿಐಗಿಲ್ಲ: ಮಹತ್ವದ ತೀರ್ಪು ನೀಡಿದ ಹೈಕೋರ್ಟ್
ಈ ಅರ್ಜಿಯು ಮುಖ್ಯನ್ಯಾಯಮೂರ್ತಿ ಎನ್ .ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಾಗ ಸರ್ಕಾರಿ ವಕೀಲರು ಹಾಜರಾಗಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಅದಕ್ಕೆ ಒಪ್ಪದ ನ್ಯಾಯಪೀಠವು ವಿಚಾರಣೆಯನ್ನು ನ.21ಕ್ಕೆ ಮುಂದೂಡಿತು.
ಮುಂದಿನ ವಿಚಾರಣೆ ವೇಳೆಗೆ ಲಿಖಿತ ರೂಪದಲ್ಲಿ ಆಕ್ಷೇಪಣೆ ಸಲ್ಲಿಸಬೇಕು. ಹಾಗೆಯೇ, ವಕ್ಫ್ ಕಾಯ್ದೆಯಡಿ ಎಲ್ಲಿ ಮಂಡಳಿಗೆ ಮದುವೆ ನೋಂದಣಿ ಪ್ರಮಾಣಪತ್ರ ವಿತರಿಸುವಂತಹ ಅಧಿಕಾರವನ್ನು ನೀಡಬಹುದು ಎಂಬುದನ್ನು ಸಾಬೀತುಪಡಿಸುವಂತೆ ಸರ್ಕಾರಕ್ಕೆ ಮೌಖಿಕವಾಗಿ ಸೂಚಿಸಿತು. ಸರ್ಕಾರವು 2023ರ ಸೆ.30ರಂದು ಹೊರಡಿಸಿರುವ ಆದೇಶವು ವಕ್ಫ್ ಕಾಯ್ದೆ 1995ರ ನಿಯಮಗಳಿಗೆ ವಿರುದ್ದವಾಗಿದೆ. ಹಾಗಾಗಿ, ಸರ್ಕಾರದ ಆದೇಶ ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ