HSRP ನಂಬರ್ ಪ್ಲೇಟ್ ಅಳವಡಿಕೆ, ಗುಡ್‌ ನ್ಯೂಸ್‌ ಕೊಟ್ಟು ಮತ್ತೆ ವಿಸ್ತರಣೆ ಘೋಷಿಸಿದ ಸಚಿವ ರಾಮಲಿಂಗಾ ರೆಡ್ಡಿ

By Gowthami KFirst Published Feb 14, 2024, 11:38 AM IST
Highlights

ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ ಮಾಡ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ.

ಬೆಂಗಳೂರು (ಫೆ.14): ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ ಮಾಡ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಈಗಾಗಲೇ 18,32,787 ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಅಂದರೆ ರಾಜ್ಯದಲ್ಲಿ ಈವರೆಗೆ 9.16%. ಮಾತ್ರ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಬೇರೆ ರಾಜ್ಯಗಳಲ್ಲಿ ಇದು ವೇಗವಾಗಿ ಆಗಿದೆ. ನಮ್ಮ ರಾಜ್ಯದಲ್ಲಿ ನಂಬರ್ ಪ್ಲೇಟ್ ಅಳವಡಿಕೆ ತಡವಾಗಿದೆ. ಹೀಗಾಗಿ 3 ತಿಂಗಳು ಅವಧಿ ವಿಸ್ತರಣೆ ಮಾಡಿ ನಂಬರ್ ಪ್ಲೇಟ್ ಅಳವಡಿಕೆ ಮಾಡ್ತೀವಿ ಎಂದು ಮಧು ಮಾದೇಗೌಡ ಪ್ರಶ್ನೆಗೆ ಸಚಿವ ರಾಮಲಿಂಗಾರೆಡ್ಡಿ ಉತ್ತರಿಸಿದ್ದಾರೆ.

ಹೈಸೆಕ್ಯೂರಿಟಿ ನಂಬರ್ ಪ್ಲೇಟ್ (High Security number plate-HSRP) ಜನರು ಕೊನೇ ಅವಧಿಯಲ್ಲಿ ಹೆಚ್ಚೆಚ್ಚು ರಿಜಿಸ್ಟರ್ ಮಾಡಲು ಮುಂದಾಗುತ್ತಿದ್ದು, ಅಪ್ಲೋಡ್ ಸಮಸ್ಯೆಯಾಗಲಿದೆ. ಈಗ ಪುನಃ ದಿನಾಂಕ ವಿಸ್ತರಣೆಗೆ ಒತ್ತಡ ಕೇಳಿ ಬಂದಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸುಳಿವು ನೀಡಿದ್ದರು. ಅದರಂತೆ ಇಂದು ಮೂರು ತಿಂಗಳು ವಿಸ್ತರಣೆ ಮಾಡಲಾಗಿದೆ ಎಂದು ಘೋಷಣೆ ಮಾಡಿದ್ದಾರೆ.

ಇತ್ತೀಚೆಗೆ ವಿವಾಹವಾದ 38ರ ಮಹಿರಾ ಖಾನ್‌ ಗರ್ಭಿಣಿ! ಹಲವು ಬಿಗ್‌ ಪ್ರಾಜೆಕ್ಟ್ ಕೈ ಬಿಟ್ರಾ ನಟಿ?

ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಮಾಡಿಸಲು ಫೆ.17ನೇ ತಾರೀಕು ಲಾಸ್ಟ ಡೇಟ್ ಇತ್ತು ಆದರೆ ದಿನಾಂಕ ಮುಂದೂಡುವಂತೆ ಒತ್ತಡ ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಮೂರು ತಿಂಗಳು ಮುಂದೂಡಲಾಗಿದೆ. ಹೀಗಾಗಿ ವಾಹನ ಸವಾರರಿಗೆ ಕೂಡ ಕೊಂಚ ನಿರಾಳವಾಗಿದೆ.

HSRP ನಂಬರ್ ಪ್ಲೇಟ್ ಪಡೆಯುವುದು ಹೇಗೆ?
ನಕಲಿ ನಂಬರ್ ಪ್ಲೇಟ್, ವಾಹನಗಳನ್ನು ಕಾನೂನು ಬಾಹಿರ ಚಟುವಟಿಕೆಗೆ ಬಳಕೆ ಮಾಡುವುದನ್ನು ತಪ್ಪಿಸಲು ಹಾಗೂ ವಾಹನಗಳನ್ನು ಟ್ರಾಕ್ ಮಾಡಲು ಸೇರಿದಂತೆ ಹಲವು ಕಾರಣಗಳಿಂದ  ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗುತ್ತಿದೆ. ಈ ನಂಬರ್ ಪ್ಲೇಟ್ ಎಲ್ಲೆಂದರಲ್ಲಿ ಸಿಗುವುದಿಲ್ಲ. ಮದ್ಯವರ್ತಿಗಳ ಅವಶ್ಯಕತೆ ಇಲ್ಲ. ಸುಲಭವಾಗಿ HSRP ನಂಬರ್ ಪ್ಲೇಟ್ ಪಡೆಯಲು ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

2019ರ ಎಪ್ರಿಲ್‌ಗೂ ಮೊದಲು ರಿಜಿಸ್ಟ್ರೇಶನ್ ಆಗಿರುವ ಎಲ್ಲಾ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯವಾಗಿದೆ. 2019ರ ಎಪ್ರಿಲ್ ಬಳಿಕ ರಿಜಿಸ್ಟ್ರೇಶನ್ ಆಗಿರುವ ವಾಹನಗಳಿಗೆ ಹಾಕಲಾಗಿರುವ ನಂಬರ್ ಪ್ಲೇಟ್ HSRP ಆಗಿದೆ. ಹೀಗಾಗಿ ಯಾರ ವಾಹನ ಎಪ್ರಿಲ್ 2019ರ ಮೊದಲ ರಿಜಿಸ್ಟ್ರೇಶನ್ ಆಗಿದೆಯೋ ಆ ವಾಹನಗಳ ಮಾಲೀಕರು HSRP ನಂಬರ್ ಪ್ಲೇಟ್ ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು. 

14 ವಯಸ್ಸಿಗೆ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್‌ ಅನುಭವಿಸಿದ ಮುದ್ದಾದ ನಟಿಯ ಬಿಗ್‌ಬಾಸ್‌ ಸಂಭಾವನೆ 2.5 ಕೋಟಿ!

ಮೊದಲು https://transport.karnataka.gov.in ಅಥವಾ www.siam.in ಪೋರ್ಟಲ್‌ನಲ್ಲಿ ಲಾಗಿನ್ ಆಗಿ ಬಳಿಕ Book HSRP ಕ್ಲಿಕ್ ಮಾಡಿ. ನಿಮ್ಮ ವಾಹನದ ಮಾಹಿತಿಯನ್ನು ನಮೂದಿಸಿ. ನಿಮ್ಮ ಹತ್ತಿರದ ಅಥವಾ ನಿಮ್ಮ  ಡೀಲರ್ ಶೋ ರೂಂ ಆಯ್ಕೆ ಮಾಡಿಕೊಳ್ಳಿ. HSRP ನಂಬರ್ ಪ್ಲೇಟ್‌ಗೆ ಪಾವತಿ ಮಾಡಿ. ಮೊಬೈಲ್‌ ನಂಬರ್‌ ಗೆ ಬಂದ ಒಟಿಪಿ ನಂಬರ್‌ ನಮೂದಿಸಿ. HSRP ನಂಬರ್ ಪ್ಲೇಟ್ ಅಳವಡಿಸಲು ನಿಮ್ಮ ಅನುಕೂಲದ ದಿನಾಂಕವನ್ನು ನಿಗದಿಪಡಿಸಿಕೊಳ್ಳಿ

click me!