ರಾಜ್ಯಕ್ಕೆ ಕೇಂದ್ರದ ಮತ್ತೊಂದು ಕೊಡುಗೆ, ಸೆಪ್ಟೆಂಬರ್‌ ನಿಂದ ಪ್ರತಿವಾರ ವಿಶೇಷ ರೈಲು, ಉ.ಕರ್ನಾಟಕ ಮಂದಿಗೆ ಹಬ್ಬ!

Published : Aug 29, 2025, 12:41 PM IST
ooty train

ಸಾರಾಂಶ

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಒತ್ತಾಸೆಯ ಮೇರೆಗೆ ಹುಬ್ಬಳ್ಳಿ-ಜೋಧ್‌ಪುರ್‌ ನಡುವೆ ನೂತನ ರೈಲು ಸಂಚಾರ ಆರಂಭವಾಗಲಿದೆ. ಸೆಪ್ಟೆಂಬರ್‌ನಿಂದಲೇ ಪ್ರಾಯೋಗಿಕವಾಗಿ ಈ ರೈಲು ಸಂಚಾರ ಆರಂಭಿಸಲಿದ್ದು, ಮುಂದಿನ ದಿನಗಳಲ್ಲಿ ನಿಯಮಿತ ರೈಲನ್ನಾಗಿ ಪರಿವರ್ತಿಸುವ ಭರವಸೆ ಇದೆ. ಟಿಕೆಟ್ ಬುಕಿಂಗ್ ಸಹ ಆರಂಭವಾಗಿದೆ.

ನವದೆಹಲಿ: ಕರ್ನಾಟಕಕ್ಕೆ ಅನೇಕ ರೈಲ್ವೆ ಯೋಜನೆಗಳ ಕೊಡುಗೆ ನೀಡಿರುವ ಕೇಂದ್ರ ಸರ್ಕಾರ, ಇದೀಗ ಗಣೇಶ ಹಬ್ಬದ ವೇಳೆ ಮತ್ತೊಂದು ವಿಶೇಷ ಕೊಡುಗೆ ನೀಡಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಒತ್ತಾಸೆಯಂತೆ ʼಹುಬ್ಬಳ್ಳಿ-ಜೋಧಪುರ್‌ʼ ನೇರ ರೈಲು ಸಂಚಾರಕ್ಕೆ ಅಸ್ತು ಎಂದಿದೆ. ʼಹುಬ್ಬಳ್ಳಿ-ಜೋಧಪುರ್‌ʼ ವಿಶೇಷ ರೈಲು ಸೆಪ್ಟೆಂಬರ್‌ ತಿಂಗಳಿನಿಂದಲೇ ಸಂಚಾರ ಪ್ರಾರಂಭಿಸಲಿದೆ. ಪ್ರಸ್ತುತ ವಿಶೇಷ ರೈಲಾಗಿರುವ ಇದನ್ನು ಮುಂದಿನ ದಿನಗಳಲ್ಲಿ ನಿಯತಕಾಲಿಕವಾಗಿ ಪರಿವರ್ತನೆಗೊಳಿಸುವ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭರವಸೆ ನೀಡಿದ್ದಾರೆಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿ-ಜೋಧಪುರ್‌ ನೂತನ ರೈಲು (ಸಂಖ್ಯೆ: 07359) ಹುಬ್ಬಳ್ಳಿಯಿಂದ 7:30ಕ್ಕೆ ತೆರಳಿ BGKT (ಭಗತ ಕಿ ಕೋಟಿ)ಗೆ ಬೆಳಗ್ಗೆ 5:30ಕ್ಕೆ ತಲುಪಲಿದೆ. ಸದ್ಯ ಪ್ರತಿ ರವಿವಾರ ಈ ರೈಲು ಸಂಚಾರವಿರಲಿದೆ. ಸೆಪ್ಟೆಂಬರ್‌ 28ರಿಂದ ಸಂಚಾರ ಆರಂಭಿಸಲಿದೆ.

ಟಿಕೆಟ್‌ ಬುಕಿಂಗ್‌ ಶುರು: 

ನೂತನವಾಗಿ ಸಂಚಾರ ಆರಂಭವಾಗುವ ಹುಬ್ಬಳ್ಳಿ-ಜೋಧಪುರ್‌ ರೈಲ್ವೆ ಸಂಚಾರಕ್ಕೆ ಪ್ರಯಾಣಿಕರಿಂದ ಆಗಲೇ ಟಿಕೆಟ್‌ ಬುಕಿಂಗ್‌ ಸಹ ಶುರುವಾಗಿದೆ. ರೈಲ್ವೆ ಇಲಾಖೆ ಸೆಪ್ಟೆಂಬರ್‌ 28, ಅಕ್ಟೋಬರ್‌ 5, ಅಕ್ಟೋಬರ್‌ 12, ಅಕ್ಟೋಬರ್‌ 1̧9 ಅಕ್ಟೋಬರ್‌ 2ರಂದು ಪ್ರಯಾಣಕ್ಕೆ ಮುಂಗಡ ಟಿಕೆಟ್‌ ಬುಕಿಂಗ್‌ ಆರಂಭಿಸಿದೆ.

ಹುಬ್ಬಳ್ಳಿಗರ ಬಹುದಿನದ ಬೇಡಿಕೆ ಈಡೇರಿಕೆ: 

ಹುಬ್ಬಳ್ಳಿ-ಜೋಧಪುರ್‌ ನೇರ ರೈಲು ಸಂಚಾರಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ಉತ್ತರ ಕರ್ನಾಟಕ ಭಾಗದವರಿಂದ ಅನೇಕ ದಿನಗಳಿಂದಲೂ ಬಹು ಬೇಡಿಕೆಯಿತ್ತು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸತತ ಪ್ರಯತ್ನದ ಫಲವಾಗಿ ಇದೀಗ ಸಾಕಾರಗೊಂಡಿದೆ.

ಸಚಿವ ಪ್ರಲ್ಹಾದ ಜೋಶಿ ಸಾಫಲ್ಯ:

ಬೆಂಗಳೂರು-ಬೆಳಗಾವಿ ವಂದೇ ಭಾರತ್‌ ರೈಲು ಸೇರಿದಂತೆ ರಾಜ್ಯಕ್ಕೆ ವಿವಿಧ ರೈಲ್ವೆ ಯೋಜನೆಗಳನ್ನು ತರುವಲ್ಲಿ ಯಶಸ್ವಿಯಾಗಿರುವ ಸಚಿವ ಜೋಶಿ ಅವರು, ಇದೀಗ ಹುಬ್ಬಳ್ಳಿ-ಜೋಧಪುರ್‌ ವಿಶೇಷ ರೈಲು ಸಂಚಾರ ಆರಂಭಿಸುವಲ್ಲಿ ಸಹ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರ ಗಮನ ಸೆಳೆದು ರೈಲು ಸಂಚಾರವನ್ನು ಸಾಕಾರಗೊಳಿಸುವಲ್ಲಿ ಸಫಲರಾಗಿದ್ದಾರೆ.

ಬಹುಜನರ ಬೇಡಿಕೆಯಂತೆ ಸಂಸದ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹುಬ್ಬಳ್ಳಿ-ಜೋಧಪುರ್‌ ರೈಲು ಸಂಚಾರ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ ಸಲ್ಲಿಸಿ, ನಿರಂತರವಾಗಿ ಗಮನ ಸೆಳೆಯುತ್ತಲೇ ಇದ್ದರು. ಜೋಶಿ ಅವರ ಒತ್ತಾಸೆ, ಮನವಿಗೆ ಸ್ಪಂದಿಸಿ ಸಚಿವ ಅಶ್ವಿನಿ ವೈಷ್ಣವ್‌ ಅವರು ಹುಬ್ಬಳ್ಳಿ-ಜೋಧ್‌ಪುರಕ್ಕೆ ನೇರ ರೈಲು ಸಂಚಾರಕ್ಕೆ ಅನುಮೋದನೆ ನೀಡಿದ್ದಾರೆ.

ರೈಲ್ವೆ ಸಚಿವರಿಗೆ ಜೋಶಿ ಧನ್ಯವಾದ:

ತಮ್ಮ ಮನವಿ, ಒತ್ತಾಸೆಗೆ ಸ್ಪಂದಿಸಿ ಉತ್ತರ ಕರ್ನಾಟಕ ಭಾಗದ ಅದರಲ್ಲೂ ವಾಣಿಜ್ಯ ನಗರಿ ಹುಬ್ಬಳ್ಳಿ ರೈಲ್ವೆ ಯೋಜನೆ-ಸೌಲಭ್ಯಗಳಿಗೆ ವಿಶೇಷ ಆಸಕ್ತಿ ತೋರಿ ಅನುಮೋದಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಸಚಿವ ಪ್ರಲ್ಹಾದ ಜೋಶಿ ಧನ್ಯವಾದ ಅರ್ಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!