ಪ್ರಿಯಕರನನ್ನ ನೋಡಲು ಫ್ರೀ ಬಸ್ ಹತ್ತಿ ತನ್ನ 11 ತಿಂಗಳ ಮಗುವನ್ನು ಬಿಟ್ಟು ಪ್ರಿಯತಮೆ ಹುಬ್ಬಳ್ಳಿಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬಂದಿದ್ದು, ಈಗ ಇಬ್ಬರೂ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಮಂಗಳೂರು (ಜೂ.14): ರಾಜ್ಯದಲ್ಲಿ ಜೂನ್ 11 ರಿಂದ ಶಕ್ತಿ ಯೋಜನೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭಗೊಂಡಿದೆ. ಮಹಿಳೆಯರು ಪ್ರವಾಸ, ತೀರ್ಥ ಕ್ಷೇತ್ರ ಸುತ್ತಾಟ ನಡೆಸುತ್ತಿದ್ದಾರೆ. ಈ ನಡುವೆ ಪ್ರಿಯಕರನನ್ನ ನೋಡಲು ಫ್ರೀ ಬಸ್ ಹತ್ತಿ ಪ್ರಿಯತಮೆ ಬಂದಿರುವ ಘಟನೆ ನಡೆದಿದೆ. ಹುಬ್ಬಳಿಯಿಂದ ದೂರದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಬಂದು ಪ್ರಿಯಕರನೊಂದಿಗೆ ನಾಪತ್ತೆಯಾಗಿದ್ದಾಳೆ. ತನ್ನ 11 ತಿಂಗಳ ಮಗವನ್ನು ಬಿಟ್ಟು ಪ್ರಿಯಕರನನ್ನ ನೋಡಲು ಬಂದ ವಿವಾಹಿತೆ ಈಗ ನಾಪತ್ತೆಯಾಗಿದ್ದಾಳೆ.
ಈ ಹಿಂದೆಯೇ ಇಬ್ಬರ ನಡುವೆ ಪ್ರೀತಿ ಶುರುವಾಗಿತ್ತು. ಯುವತಿಗೆ ಬೇರೆಯವನ ಜೊತೆ ಮದುವೆ ಆದ ಬಳಿಕವೂ ತನ್ನ ಪ್ರಿಯಕರನ ಜೊತೆ ಒಡನಾಟದಲ್ಲಿದ್ದಳು. ಪುತ್ತೂರು ಕೋಡಿಂಬಾಡಿ ಸಮೀಪದಲ್ಲಿ ಪ್ರಿಯಕರ ತೋಟದ ಕೆಲಸ ಮಾಡುತ್ತಿದ್ದ. ಗಂಡನ ಮನೆಯವರು ಹಾಗೂ ಮಹಿಳೆಯ ಮನೆಯವರಿಂದ ರಾತ್ರೋ ರಾತ್ರಿ ಪುತ್ತೂರಿನಲ್ಲಿ ವಿವಾಹಿತೆಗಾಗಿ ಹುಡುಕಾಟ ನಡೆದಿದೆ.
ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ 6 ಕಂಡೀಷನ್ ಹಾಕಿ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ
ತನ್ನ ಗಂಡನಲ್ಲಿ ಆಧಾರ್ ಲಿಂಕ್ ಮಾಡಿ ಬರುತ್ತೇನೆಂದು ಹೇಳಿ ಈಕೆ ಮನೆಯಿಂದ ಎಸ್ಕೇಪ್ ಆಗಿದ್ದಾಳೆ. ಆಧಾರ್ ಕಾರ್ಡ್ ಅನ್ನು ಬಸ್ಸಿನಲ್ಲಿ ಪ್ರಯಾಣಿಸುವಾಗ ಕಂಡಕ್ಟರ್ ಗೆ ತೋರಿಸಲು ತಂದಿದ್ದಳು. ಗಂಡನಲ್ಲಿ ಆಧಾರ್ ಲಿಂಕ್ ಬಗ್ಗೆ ಸುಳ್ಳು ಹೇಳಿ ಎಸ್ಕೇಪ್ ಆಗಿದ್ದಾಳೆ. ಇದೀಗ ಎರಡೂ ಮನೆಯವರಿಂದ ಮಹಿಳೆ ಹಾಗೂ ಆಕೆಯ ಪ್ರಿಯಕರನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇವರಿಬ್ಬರನ್ನ ಹುಡುಕಿಕೊಂಡು ಬಂದ ಕುಟುಂಬಸ್ಥರಿಗೆ ಗ್ರಾಮ ಪಂಚಾಯತ್ ಸದಸ್ಯ ಜಯಪ್ರಕಾಶ್ ಬದಿನಾರ್ ಧೈರ್ಯ ಹೇಳಿದ್ದಾರೆ.
ಪುತ್ತೂರಿಗೆ ಬಂದು ಪ್ರಿಯಕರನ ಜೊತೆ ಪರಾರಿಯಾದ ಮಹಿಳೆ ಬಗ್ಗೆ ಜಯಪ್ರಕಾಶ್ ಮಾಹಿತಿ ಸಂಗ್ರಹಿಸಿದ್ದು, ಟವರ್ ಲೊಕೇಶನ್ ಮೂಲಕ ಪತ್ತೆ ಹಚ್ಚಿದಾಗ ಪುತ್ತೂರಿನಿಂದ ಸಿದ್ಧಕಟ್ಟೆಗೆ ಪರಾರಿಯಾದ ಮಾಹಿತಿ ಲಭ್ಯವಾಗಿದೆ. ಇದೀಗ ಇಬ್ಬರೂ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.
NEET UG 2023: ಕೋವಿಡ್-19 ಸಮಯ ವೈದ್ಯರಿಂದ ಸ್ಫೂರ್ತಿ, ದೇಶಕ್ಕೆ ಐದನೇ ಟಾಪರ್