
ವಿಜಯನಗರ/ಬಳ್ಳಾರಿ: ಸೂರ್ಯನ ತಾಪ ದಿನದಿಂದ ದಿನಕ್ಕೆ ಬಿರುಸುಗೊಳ್ಳುತ್ತಿದ್ದು, ಸೆಖೆ ತಡೆದುಕೊಳ್ಳಲಾಗದೇ ಜನರು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಇತ್ತ ಬಿರು ಬೇಸಿಗೆಯ ಬಿಸಿಲ ತಾಪ ತುಂಗಾಭದ್ರ ಜಲಾಶಯಕ್ಕೂ ತಟ್ಟಿದ್ದು, ಜಲಾಶಯದ ನೀರಿನ ಮಟ್ಟ ಕೂಡ ಕಡಿಮೆಯಾಗ್ತಿದೆ.
ವಿಜಯನಗರ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಜೀವ ಜಲಕ್ಕಾಗಿ ಈಗಾಗಲೇ ಹಾಹಾಕಾರ ಶುರುವಾಗಿದೆ. 105. 788 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ತುಂಗಾಭದ್ರಾ ಜಲಾಶಯದಲ್ಲಿ ಕೇವಲ 20 ಟಿಎಂಸಿ ನೀರು ಮಾತ್ರ ಇದೆ. ಹೀಗಾಗಿ ವಿಜಯನಗರ, ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ನೀರನ್ನು ಕೇವಲ ಜನರಿಗೆ ಕುಡಿಯುವ ನೀರಿಗಾಗಿ ಮೀಸಲಿಡುವಂತೆ ಒತ್ತಾಯ ಕೇಳಿ ಬಂದಿದೆ.
ಇರುವ 20 ಟಿಎಂಸಿ ನೀರಿನಲ್ಲಿ ಸುತ್ತಮುತ್ತಲಿನ ಕಾರ್ಖಾನೆಗಳು ನಡೆಯಬೇಕಿದೆ. ಇದರ ಜೊತೆಗೆ ಸುತ್ತಮುತ್ತಲ ಕೃಷಿ ಚಟುವಟಿಕೆಗಳಿಗೂ ನೀರಿನ ಅಗತ್ಯವಿದೆ. ಇದರೊಂದಿಗೆ ಕುಡಿಯುವ ನೀರಿಗೂ ಜಲಾಶಯದ ನೀರು ಬಳಕೆ ಮಾಡಬೇಕಿದೆ. ಹೀಗಾಗಿ ಮುಂದಿರುವ ಬೇಸಿಗೆಯ ದಿನಗಳನ್ನು ಎದುರಿಸಲು ಜಿಲ್ಲಾಡಳಿತ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜಲಾಶಯದ ನೀರನ್ನು ಮಿತವಾಗಿ ಬಳಸೋದಕ್ಕೆ ಜಿಲ್ಲಾಡಳಿತ ಯೋಜನೆ ರೂಪಿಸುತ್ತಿದೆ.
ಇದನ್ನೂ ಓದಿ: ಮಕ್ಕಳಿಗೆ ದಾರಿ ತೋರಬೇಕಾದ ಶಿಕ್ಷಕಿಯೇ ದಾರಿ ತಪ್ಪಿದಳು: ಪ್ರಿಯಕರನೊಂದಿಗೆ ಸೇರಿ ಗಂಡನ ಮುಗಿಸಿದ ಸರ್ಕಾರಿ ಶಾಲೆ ಟೀಚರ್
ಈ ಹಿನ್ನೆಲೆ ನೀರಾವರಿ ಇಲಾಖೆ ಮತ್ತು ಕಾರ್ಖಾನೆಗಳ ಮಾಲಿಕರ ಜೊತೆ ಜಿಲ್ಲಾಡಳಿತ ಸಭೆ ನಡೆಸುವುದಕ್ಕೆ ತೀರ್ಮಾನ ಮಾಡಿದೆ. ಈಗಾಗಲೇ ವಿಜಯನಗರ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕುಡಿವ ನೀರಿಗೆ ಹಾಹಾಕಾರ ಪ್ರಾರಂಭವಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ನೂರಾರು ಹಳ್ಳಿಗಳಲ್ಲಿ ಕುಡಿವ ನೀರಿನ ಸಮಸ್ಯೆ ಇದೆ. ಹೀಗಾಗಿ ತುಂಗಭದ್ರಾ ಜಲಾಶಯದಲ್ಲಿನ ನೀರನ್ನು ಸಮರ್ಪಕವಾಗಿ ಕುಡಿಯುವ ನೀರಿಗೆ ಬಳಕೆ ಮಾಡಿ ಅಂತ ಸ್ಥಳೀಯರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಹುಬ್ಬಳ್ಳಿ: ಯುವಕರ ಪಾಲಿಗೆ ಮೃತ್ಯಪಾಶವಾಯ್ತು ಕೇಬಲ್ ವೈರ್: ಇಬ್ಬರು ಬೈಕ್ ಸವಾರರು ಸಾವು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ