ಧರ್ಮಗಳ ಸಂಘರ್ಷದ  ಮಧ್ಯೆ ನಡೆಯಿತೊಂದು ಅಪರೂಪದ ಮಾನವೀಯ ಕಾರ್ಯ!

By Ravi Janekal  |  First Published Jul 17, 2023, 11:08 AM IST

ತೀರ್ಥಹಳ್ಳಿ  ತಾಲೂಕಿನ ಆಗುಂಬೆ ಘಾಟಿಯ 7 ನೇ ತಿರುವಿನಲ್ಲಿ ಗುಜರಿ ಫ್ಯಾಕ್ಟರಿ ಮಾಲಿಕನೊಬ್ಬ ಆಕಸ್ಮಿಕವಾಗಿ 30 ಅಡಿ ಪ್ರಪಾತಕ್ಕೆ ಬಿದ್ದ ಘಟನೆ ಭಾನುವಾರ ಸಂಜೆ ವೇಳೆ ನೆಡೆದಿದೆ.


ಶಿವಮೊಗ್ಗ (ಜು.17) : ತೀರ್ಥಹಳ್ಳಿ  ತಾಲೂಕಿನ ಆಗುಂಬೆ ಘಾಟಿಯ 7 ನೇ ತಿರುವಿನಲ್ಲಿ ಗುಜರಿ ಫ್ಯಾಕ್ಟರಿ ಮಾಲಿಕನೊಬ್ಬ ಆಕಸ್ಮಿಕವಾಗಿ 30 ಅಡಿ ಪ್ರಪಾತಕ್ಕೆ ಬಿದ್ದ ಘಟನೆ ಭಾನುವಾರ ಸಂಜೆ ವೇಳೆ ನೆಡೆದಿದೆ.

ಮಹಮ್ಮದ್ ಪಾಷಾ ಎಂಬಾತ ರಸ್ತೆ ಬದಿಯಲ್ಲಿದ್ದ ನಿಂತಿದ್ದ ವೇಳೆ ಪ್ರಪಾತಕ್ಕೆ ಬಿದ್ದಿದ್ದಾರೆ. ಸ್ಕ್ರಾಪ್ ಗಾಡಿಯನ್ನು ಟ್ರ್ಯಾಕ್ಟರ್‌ ಟೋಯಿಂಗ್ ಮಾಡ್ತಿದ್ದ ವೇಳೆ ಗಾಡಿ ಬ್ರೇಕ್ ಫೇಲ್ ಆದ ಹಿನ್ನೆಲೆಯಲ್ಲಿ ಮಹಮ್ಮದ್ ಪಾಷಾ ಅವರಿಗೆ ಗುದ್ದಿದೆ ಈ ಕಾರಣದಿಂದ ಈ ಅವಘಡ ಸಂಭವಿಸಿದೆ.

Tap to resize

Latest Videos

ಆಗುಂಬೆ ಘಾಟ್ ನಿಂದ 25 ರಿಂದ 30 ಅಡಿ ಕೆಳಗಡೆ ಬಿದ್ದ ಭಾಷಾಗೆ ಗಂಭೀರ ಗಾಯವಾಗಿದ್ದು ಮೇಲಿನಿಂದ ಬಿದ್ದ ರಭಸಕ್ಕೆ ಭಾಷ ಅವರ ಸೊಂಟ ಮತ್ತು ತಲೆಗೆ ಪೆಟ್ಟು ಬಿದ್ದಿದೆ. ಕೂಡಲೇ ಸ್ಥಳದಲ್ಲಿದ್ದಲಿದ್ದ ಹಿಂದೂ ಜಾಗರಣೆ ವೇದಿಕೆಯ ಸದಸ್ಯರು ಮಹಮ್ಮದ್ ಪಾಷಾರನ್ನ ರಕ್ಷಣೆ ಮಾಡಿದ್ದಾರೆ.

ಅನಾಥ ಮಹಿಳೆಗೆ ರಕ್ಷಕನಾದ ಆರಕ್ಷಕ ಅಧಿಕಾರಿ, ಸೂಪರ್ ಕಾಪ್‌ಗೆ ಮೆಚ್ಚುಗೆ!

ಹಿಂದೂ ಜಾಗರಣೆ ವೇದಿಕೆಯ ನಿತ್ಯಾನಂದ ನೇತೃತ್ವದ ತಂಡದಿಂದ ಆಗುಂಬೆ ಘಾಟ್ ಕೆಳಗಡೆ ಇಳಿದು ಮಹಮ್ಮದ್ ಪಾಷಾರನ್ನ ಬೆಡ್ ಶೀಟ್ ಹಾಗೂ ಹಗ್ಗದ ಸಹಾಯದಿಂದ ಮೇಲೆತ್ತಿದ್ದಾರೆ.

ಹಿಂದು ಜಾಗರಣೆ ವೇದಿಕೆಯ ನಿತ್ಯಾನಂದ ಮತ್ತು ತಂಡದ ರಕ್ಷಣಾ ಕಾರ್ಯಕ್ಕೆ ಹಲವರಿಂದ ಮೆಚ್ಚುಗೆ ವ್ಯಕ್ತವಾಗಿದೆ.

click me!