
ಬೆಂಗಳೂರು (ಜ.4): ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಗ್ಗೆ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಸುನೀಲ್ ಕುಮಾರ್ ಅವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ವಶಕ್ಕೆ ಪಡೆದುಕೊಂಡರು.
ಪ್ರತಿಭಟನೆ ವೇಳೆ ಸುನೀಲ್ ಕುಮಾರ್ ಅವರು ‘ನನ್ನನ್ನೂ ಬಂಧಿಸಿ’ ಎಂಬ ಬರಹವುಳ್ಳ ಕರಪತ್ರವನ್ನು ಹಿಡಿದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಕಾಂಗ್ರೆಸ್-ಬಿಜೆಪಿ ನಡುವೆ ಭುಗಿಲೆದ್ದ ‘ಕರಸೇವಕ’ ಫೈಟ್: ಹಳೇ ಕೇಸ್ ಕೆದಕುವ ಹಿಂದೆ ರಾಜಕೀಯ ಇದ್ಯಾ..?
ಡಿ. 29 ರಂದು ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದ ಹುಬ್ಬಳ್ಳಿ ಶಹರ ಠಾಣೆಯ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಇನ್ಸಪೆಕ್ಟರ್ ಅಮಾನತಿಗೆ ಆಗ್ರಹಿಸಿ ಬಿಜೆಪಿ ನಾಯಕರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ನಿನ್ನೆ ರಾಜ್ಯಪಾಲರಿಗೂ ದೂರು ನೀಡಿದ್ದಾರೆ.
ಹಳೇಯ ಪ್ರಕರಣಗಳನ್ನು ವಿಲೇವಾರಿ ಮಾಡುವಾಗ ಬಂಧನ ಮಾಡಲಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಈಗಾಗಲೇ ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿದೆ. ಹೀಗಾಗಿ ರಾಜ್ಯ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆಗೆ ಮುಂದಾಗಿದೆ.
ರಾಮಭಕ್ತರ ಮೇಲೆ ಕಾಂಗ್ರೆಸ್ಸಿಗೆ ಇಷ್ಟೊಂದು ಆಕ್ರೋಶ ಏಕೆ?: ಶಾಸಕ ವೇದವ್ಯಾಸ್ ಕಾಮತ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ