ನಾನೂ ಸಹ ರಾಮಭಕ್ತ, ರಾಮೋತ್ಸವ ಮಾಡುತ್ತೇನೆ: ಇಕ್ಬಾಲ್ ಹುಸೇನ್

By Kannadaprabha News  |  First Published Jan 5, 2024, 6:38 AM IST

ನಾನೂ ಕೂಡಾ ರಾಮಭಕ್ತ, ನಾನು ರಾಮನನ್ನು ಪೂಜೆ ಮಾಡ್ತೀನಿ.! ರಾಮನಗರದಲ್ಲಿ ರಾಮೋತ್ಸವವನ್ನ ನಡೆಸಬೇಕು ಅಂತ ಚಿಂತನೆ ಮಾಡಿದ್ದೆವು. ಅದನ್ನ ಭಕ್ತಿ ಪೂರ್ವಕವಾಗಿ ಮಾಡೇ ಮಾಡುತ್ತೇವೆ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.


ಚನ್ನಪಟ್ಟಣ (ಜ.5): ನಾನೂ ಕೂಡಾ ರಾಮಭಕ್ತ, ನಾನು ರಾಮನನ್ನು ಪೂಜೆ ಮಾಡ್ತೀನಿ.! ರಾಮನಗರದಲ್ಲಿ ರಾಮೋತ್ಸವವನ್ನ ನಡೆಸಬೇಕು ಅಂತ ಚಿಂತನೆ ಮಾಡಿದ್ದೆವು. ಅದನ್ನ ಭಕ್ತಿ ಪೂರ್ವಕವಾಗಿ ಮಾಡೇ ಮಾಡುತ್ತೇವೆ ಎಂದು ರಾಮನಗರ ಶಾಸಕ ಇಕ್ಬಾಲ್ ಹಸೇನ್ ತಿಳಿಸಿದರು.

ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಂಡಿದ್ದ ಜನತಾ ದರ್ಶನದಲ್ಲಿ ಭಾಗಿಯಾದ ಬಾಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅತ್ತ ರಾಮಮಂದಿರ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ನಡುವೆ ಧರ್ಮಯುದ್ಧ ನಡೆಯುತ್ತಿರುವ ಹೊತ್ತಿನಲ್ಲೇ ಇತ್ತ ರಾಮೋತ್ಸವದ ಜಪ ಜಪಿಸಿದರು.

Tap to resize

Latest Videos

ವಿಜಯಪುರ: ದಲಿತರ ಮನೆಗಳಿಗೆ ಮಂತ್ರಾಕ್ಷತೆ ವಿತರಿಸಿದ ಪೇಜಾವರ ಶ್ರೀಗಳು

ನಾನೂ ರಾಮನ ಭಕ್ತ, ನಾನು ಎಲ್ಲಾ ದೇವರನ್ನ ಪೂಜಿಸ್ತೇನೆ. ನಾನು ಚಿಕ್ಕವಯಸ್ಸಿನಿಂದಲೇ ಎಲ್ಲಾ ದೇವರ ಪೂಜೆ ಮಾಡಿದ್ದೇನೆ. ಅಂತೆಯೇ ರಾಮನ ಪೂಜೆಯನ್ನೂ ಮಾಡ್ತೇನೆ. ರಾಮಮಂದಿರ ವಿಚಾರವನ್ನ ಯಾರೋ ರಾಜಕೀಯವಾಗಿ ಬಳಸಿಕೊಳ್ಳಬಹುದು. ಆದರೆ ನಾವು ಇದನ್ನ ರಾಜಕೀಯವಾಗಿ ಬಳಸಿಕೊಳ್ಳಲ್ಲ ಎಂದರು.

ಜನರನ್ನ ಒಡೆದು ಕೆಲವರು ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್‌ಗೆ ತನ್ನದೇ ಆದ ಬದ್ಧತೆ, ಸಿದ್ದಾಂತ ಇದೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಮಾಡುತ್ತಿದ್ದಾರೋ ಇಲ್ವೋ ಗೊತ್ತಿಲ್ಲ. ಅದು ಅವರಿಗೆ ಬಿಟ್ಟಿರೋ ವಿಚಾರ. ಆದರೆ ನಾವು ರಾಮನನ್ನ ಮನೆ ದೇವರು ಅಂತ ಪೂಜೆ ಮಾಡುತ್ತೇವೆ. ಅವರಿಗೆ ರಾಮನ ಪೂಜೆ ಹೊಸದಿರಬಹದು, ಆದರೆ ನಮಗೆ ಹೊಸದೇನಲ್ಲ. ಅದಕ್ಕಾಗಿ ರಾಜಕಾರಣಕ್ಕೆ ಬಳಸಿಕೊಳ್ತಿದ್ದಾರೆ ಎಂದು ಬಿಜೆಪಿಗೆ ತಿರುಗೇಟು ನೀಡಿದರು. 

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಬೆನ್ನಲ್ಲೇ ದತ್ತಪೀಠ ಹಳೇ ಕೇಸ್‌ಗೂ ಮರುಜೀವ?: ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು?

click me!