ನಾನು ಯಾವುದೇ ಪಕ್ಷಕ್ಕೆ ಸೇರಿ​ದ​ವ​ನ​ಲ್ಲ: ಹರೇ​ಕಳ ಹಾಜಬ್ಬ ಸ್ಪಷ್ಟ​ನೆ

By Kannadaprabha News  |  First Published Aug 17, 2023, 2:05 PM IST

ನಾನು ಯಾವ ರಾಜಕೀಯ ಪಕ್ಷಕ್ಕೂ ಸೇರಿದವನಲ್ಲ. ನನಗೆ ರಾಜಕೀಯ ಆಕಾಂಕ್ಷೆಗಳೂ ಇಲ್ಲ. ಶಿಕ್ಷಣ ಕ್ಷೇತ್ರದಲ್ಲಿ ನನ್ನ ಊರಿನ ಬಡಮಕ್ಕಳ ಸಲುವಾಗಿ ಕೆಲಸ ಮಾಡುತ್ತಿದ್ದೇನೆ. ದಯವಿಟ್ಟು ನನ್ನನ್ನು ರಾಜಕೀಯ ಕಾರ್ಯಕ್ರಮಗಳಿಗೆ ಕರೆಯಬೇಡಿ ಎಂದು ಪದ್ಮಶ್ರೀ ಪ್ರಶಸ್ತಿ ವಿಜೇತ ಅಕ್ಷರ ಸಂತ ಹರೇ​ಕಳ ಹಾಜಬ್ಬ ಮನವಿ ಮಾಡಿ​ದ್ದಾ​ರೆ.


ಮಂಗ​ಳೂ​ರು (ಆ.17) : ನಾನು ಯಾವ ರಾಜಕೀಯ ಪಕ್ಷಕ್ಕೂ ಸೇರಿದವನಲ್ಲ. ನನಗೆ ರಾಜಕೀಯ ಆಕಾಂಕ್ಷೆಗಳೂ ಇಲ್ಲ. ಶಿಕ್ಷಣ ಕ್ಷೇತ್ರದಲ್ಲಿ ನನ್ನ ಊರಿನ ಬಡಮಕ್ಕಳ ಸಲುವಾಗಿ ಕೆಲಸ ಮಾಡುತ್ತಿದ್ದೇನೆ. ದಯವಿಟ್ಟು ನನ್ನನ್ನು ರಾಜಕೀಯ ಕಾರ್ಯಕ್ರಮಗಳಿಗೆ ಕರೆಯಬೇಡಿ ಎಂದು ಪದ್ಮಶ್ರೀ ಪ್ರಶಸ್ತಿ ವಿಜೇತ ಅಕ್ಷರ ಸಂತ ಹರೇ​ಕಳ ಹಾಜಬ್ಬ(Harekal hajabba) ಮನವಿ ಮಾಡಿ​ದ್ದಾ​ರೆ.

ಈ ಕುರಿತು ಹೇಳಿಕೆ ನೀಡಿ​ರುವ ಅವರು, ನನಗೆ ಯಾವುದೇ ವಿವಾದಗಳಲ್ಲಿ ಒಳಗೊಳ್ಳಲು ಇಷ್ಟವಿಲ್ಲ. ಆ. 14 ರಂದು ಬಿಜೆಪಿ ನಾಯಕರೊಬ್ಬರ ಆಹ್ವಾನದ ಮೇರೆಗೆ ಬೆಂಗಳೂರಿನ ಕಾರ್ಯಕ್ರಮವೊಂದಕ್ಕೆ ಹೋಗಿದ್ದು ನಿಜ. ಆದರೆ ಅದು ಸರ್ಕಾರದ ಸ್ವಾತಂತ್ರ್ಯ ಉತ್ಸವದ ಕಾರ್ಯಕ್ರಮ ಎಂದು ತಪ್ಪಾಗಿ ಭಾವಿಸಿ ಹೋಗಿದ್ದೆ. ಅಲ್ಲಿ ಹೋದ ಬಳಿಕ ಪಕ್ಷದ ಕಾರ್ಯಕ್ರಮ ಎಂದು ಗೊತ್ತಾಗಿ ವಾಪಸ್‌ ಮರಳಿದ್ದೂ ನಿಜ. ದಯವಿಟ್ಟು ಇದನ್ನು ವಿವಾದ ಮಾಡಬೇಡಿ. ನನ್ನ ಸಾಮಾಜಿಕ ಕೆಲಸದಲ್ಲಿ ಎಲ್ಲ ಪಕ್ಷದವರೂ ಸಹಾಯ ಮಾಡಿದ್ದಾರೆ. ಆದರೆ ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವನಲ್ಲ ಎಂದು ಸ್ಪಷ್ಟ​ಪ​ಡಿ​ಸಿ​ದ್ದಾ​ರೆ.

Tap to resize

Latest Videos

 

ಉಳ್ಳಾಲ: ಅಕ್ಷರ ಸಂತಗೆ ಗೌರವ, ಗ್ರಾ.ಪಂ. ಕಟ್ಟಡದಲ್ಲಿ ಹಾಜಬ್ಬರ ಚಿತ್ರ ರಚನೆ

ನನ್ನ ಸಾಮಾಜಿಕ ಕಾರ್ಯಗಳನ್ನು ಗುರುತಿಸಿ ಎಲ್ಲ ಪಕ್ಷ, ಧರ್ಮಗಳಿಗೆ ಸೇರಿದವರೂ ನೆರವಾಗಿದ್ದಾರೆ. ಮುಂದೆಯೂ ನನಗೆ ಎಲ್ಲರ ಸಹಕಾರ ಬೇಕು. ನಾನು ಒಬ್ಬ ಸಾಮಾನ್ಯ ಮನುಷ್ಯ. ಇನ್ನು ಮುಂದೆಯೂ ಕಿತ್ತಳೆ ಹಾಜಬ್ಬನಾಗಿಯೇ ಉಳಿಯುತ್ತೇನೆ. ದಯವಿಟ್ಟು ಯಾರೂ ನನ್ನನ್ನು ತಪ್ಪು ತಿಳಿಯಬೇಡಿ ಎಂದು ಅವರು ಮನವಿ ಮಾಡಿದ್ದಾರೆ.

Padma Shri Harekala Hajabba ಹರೇಕಳ ಹಾಜಬ್ಬ ವೈಯಕ್ತಿಕ ಬದುಕಿನ ನೆರವಿಗೆ 10 ಲಕ್ಷ ರೂ ನೆರವು!

click me!