ರೈತರು ತಲೆತಲಾಂತರದಿಂದ ಸಾಗುವಳಿ ಮಾಡಿಕೊಂಡು ಬಂದ ಭೂಮಿಗೆ ವಕ್ಫ್ ನೋಟಿಸ್ ನೀಡುತ್ತಿದೆ ಎಂದು ಹೇಳಿದ್ದೇನೆ. ರೈತರ ಹಿತ ದೃಷ್ಟಿಯಿಂದ ಈ ರೀತಿಯ ಹೇಳಿಕೆ ನೀಡಿದ್ದೇನೆ. ಮುಸ್ಲಿಮರ ಬಗ್ಗೆ ಮಾತನಾಡಿಲ್ಲ. ನಮ್ಮ ಮಠಕ್ಕೆ ಮುಸ್ಲಿಂ ಸಮುದಾಯದವರೂ ಭಕ್ತರಿದ್ದಾರೆ. ಹೀಗಿರುವಾಗ ಆ ಸಮುದಾಯವನ್ನು ಗುರಿಯಾಗಿಸಿ ಮಾತನಾಡಲ್ಲ: ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಚಂದ್ರಶೇಖರ ಸ್ವಾಮೀಜಿ
ಬೆಂಗಳೂರು(ಡಿ.01): ವಕ್ಫ್ ನೋಟಿಸ್ ನೀಡುವುದರಿಂದ ರೈತರಿಗೆ ಸಮಸ್ಯೆಯಾಗುತ್ತದೆ ಎಂಬರ್ಥದಲ್ಲಿ ಮಾತನಾಡಿದ್ದೇನೆ ಹೊರತು, ಮುಸ್ಲಿಮರನ್ನು ವಿರೋಧಿಸಿಲ್ಲ ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾ ಧ್ಯಕ್ಷ ಚಂದ್ರಶೇಖರ ಸ್ವಾಮೀಜಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ತಲೆತಲಾಂತರದಿಂದ ಸಾಗುವಳಿ ಮಾಡಿಕೊಂಡು ಬಂದ ಭೂಮಿಗೆ ವಕ್ಫ್ ನೋಟಿಸ್ ನೀಡುತ್ತಿದೆ ಎಂದು ಹೇಳಿದ್ದೇನೆ. ರೈತರ ಹಿತ ದೃಷ್ಟಿಯಿಂದ ಈ ರೀತಿಯ ಹೇಳಿಕೆ ನೀಡಿದ್ದೇನೆ. ಮುಸ್ಲಿಮರ ಬಗ್ಗೆ ಮಾತನಾಡಿಲ್ಲ. ನಮ್ಮ ಮಠಕ್ಕೆ ಮುಸ್ಲಿಂ ಸಮುದಾಯದವರೂ ಭಕ್ತರಿದ್ದಾರೆ. ಹೀಗಿರುವಾಗ ಆ ಸಮುದಾಯವನ್ನು ಗುರಿಯಾಗಿಸಿ ಮಾತನಾಡಲ್ಲ ಎಂದರು.
ಅನ್ಯಕೋಮಿನ ಕುರಿತ ಹೇಳಿಕೆಗೆ ಕ್ಷಮೆಯಾಚಿಸಿದ ಸ್ವಾಮೀಜಿ ಮೇಲೆ ಎಫ್‌ಐಆರ್ ಖಂಡನೀಯ; ಜೆಡಿಎಸ್
ಪೊಲೀಸರು ನೋಟಿಸ್ ನೀಡಿದ್ದು, ಅನಾರೋಗ್ಯದ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ನನ್ನ ಹೇಳಿಕೆ ಸರಿ ಎಂದು ಹೇಳಲ್ಲ. ಆದರೆ, ರೈತರಿಗೆ ತೊಂದರೆ ಕೊಡಬೇಡಿ ಎಂದು ಹೇಳುತ್ತಿದ್ದೇನೆ. ಆದರೂ, ಏನಾಗುತ್ತದೆಯೋ ಅದು ಆಗಲಿ ಎಂದರು.
ಚಂದ್ರಶೇಖರ ಸ್ವಾಮೀಜಿ ವಿರುದ್ಧ ಕೇಸ್: ಕೆ.ಎಸ್. ಈಶ್ವರಪ್ಪ ಆಕ್ರೋಶ
ಶಿವಮೊಗ್ಗ: ಧರ್ಮದ ಮೇಲೆ ದಾಳಿ ನಡೆ ಯುವ ಸಂದರ್ಭದಲ್ಲಿ ಸಾಧು ಸಂತರು ಬೇಸರ ಮತ್ತು ಆಕ್ರೋಶದಿಂದ ಕೆಲ ಮಾತನ್ನು ಆಡಿದರೆ ಅದನ್ನೇ ಮುಂದಿಟ್ಟು ಕೊಂಡು ಸಾಧು ಸಂತರ ವಿರುದ್ಧ ಕೇಸು ದಾಖಲಿಸುವುದು ಸರಿಯಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಶ್ರೀ ಚಂದ್ರಶೇಖರ ಸ್ವಾಮೀಜಿಯವರ ವಿರುದ್ಧ ಸರ್ಕಾರ ಕೇಸು ದಾಖಲಿಸಿರುವ ಕುರಿತಾಗಿ ಪ್ರತಿಕ್ರಿಯಿಸಿದ ಅವರು ಇಂತಹ ನಿಲುವಿನಿಂದ ಕಾಂಗ್ರೆಸ್ ದೂರ ಬರಬೇಕು ಎಂದು ಹೇಳಿದರು.
ರೈತರ ಭೂಮಿಯನ್ನು ವಕ್ಸ್ ವಶಪಡಿಸಿ ಕೊಳ್ಳುತ್ತಿರುವುದರ ವಿರುದ್ಧ ಹೋರಾಟದ ಸಂದರ್ಭದಲ್ಲಿ ಶ್ರೀಗಳು ಆಕ್ರೋಶದಿಂದಾಗಿ ಮುಸ್ಲಿಂರಿಗೆ ಮತದಾನ ಹಕ್ಕನ್ನು ನೀಡಬಾ ರದು ಎಂದು ಹೇಳಿದ್ದನ್ನೇ ಮುಂದಿ ಟ್ಟು ಕೊಂಡು ಅವರ ವಿರುದ್ದ ಕೇಸ್ ದಾಖಲಿಸಿಕೊಂಡಿರುವುದು ಸರಿಯಲ್ಲ. ಜೊತೆಗೆ ಶ್ರೀಗಳು ಈಗಾಗಲೇ ಅವರು ಕ್ಷಮೆಯನ್ನು ಕೂಡ ಕೇಳಿ ದ್ದಾರೆ. ಸಾಧು ಸಂತರು ಕೆಲವೊಮ್ಮೆ ಧರ್ಮಕ್ಕಾಗಿ ಈ ರೀತಿ ಮಾತನಾಡುತ್ತಿರುವುದು ಸಹಜ ಎಂದರು.
ನನ್ನ ಮೇಲೆ ಕೇಸ್ ದಾಖಲಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಮೇಲೂ ಕೂಡ ಕೇಸು ದಾಖಲಿಸಬೇಕಿತ್ತು. ಆದರೆ ಇದನ್ನು ಮಾಡಲಿಲ್ಲ. ಬದಲಾಗಿ ನನ್ನ ಮೇಲೆ ಕೇಸು ದಾಖಲಿಸಿದ ರೀತಿಯಲ್ಲಿಯೇ ಸ್ವಾಮೀಜಿ ಯವರ ಮೇಲೂ ಕೇಸ್ ಹಾಕಲಾಗಿದೆ ಎಂದು ಹೇಳಿದರು.
ಮುಸ್ಲಿಮರ ಮತ ರದ್ದು ಬಗ್ಗೆ ಶ್ರೀಗಳ ಹೇಳಿಕೆ ತಪ್ಪು: ಡಿಕೆಶಿ
ಬೆಂಗಳೂರು: ಆದಿಚುಂಚನಗಿರಿ ಮಠದ ಬಾಲಗಂಗಾ ಧರನಾಥ ಸ್ವಾಮೀಜಿ ಅವರ ವಿರುದ್ಧ ಕೇಸುದಾಖಲಿಸಿದಾಗ ಪ್ರತಿಪಕ್ಷನಾಯಕ ಆರ್.ಅಶೋಕ್ ಎಲ್ಲಿ ಹೋಗಿದ್ದರು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
ಚಂದ್ರಶೇಖರನಾಥ ಸ್ವಾಮೀಜಿ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿರುವ ಕುರಿತು ಶನಿವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚಂದ್ರಶೇಖರನಾಥ ಸ್ವಾಮೀಜಿ ಅವರು ಮುಸ್ಲಿಮರಿಗೆ ಮತದಾನದ ಹಕ್ಕು ರದ್ದು ಮಾಡಬೇಕು ಎಂದುಮಾತನಾಡಿದ್ದು ತಪ್ಪು. ಮತದಾನ ಪ್ರತಿಯೊಬ್ಬ ಪ್ರಜೆಯ ಸಾಂವಿಧಾನಿಕ ಹಕ್ಕು. ಇದರಲ್ಲಿ ಯಾವ ದಾಕ್ಷಿಣ್ಯವೂ ಇಲ್ಲ. ಅವರು ಕ್ಷಮಾಪಣೆ ಕೇಳಿದ್ದಾರೆ. ಆದರೆ, ಅಶೋಕ್ ಅವರು ಬೆಂಕಿ ಇಟ್ಟು ಅದರಲ್ಲಿ ಬೀಡಿ ಸೇದಲು ಹೊರಟಿದ್ದಾರೆ ಎಂದು ಕಿಡಿಕಾರಿದರು.
ಮುಸ್ಲಿಮರಿಗೆ ಮತದ ಹಕ್ಕು ಬೇಡ: ಚಂದ್ರಶೇಖರ ಶ್ರೀ ವಿವಾದಾತ್ಮಕ ಹೇಳಿಕೆ
ಬಾಲಗಂಗಾಧರನಾಥ ಸ್ವಾಮೀಜಿ ತಪ್ಪು ಮಾಡದಿದ್ದರೂ ಮಾಜಿ ಸಚಿವ ಚನ್ನಿಗಪ್ಪ ಅವರಿಂದಪ್ರಕರಣ ದಾಖಲಿಸಿ, ಸ್ವಾಮೀಜಿ ಜಾಮೀನು ಪಡೆಯುವ ಸ್ಥಿತಿ ಬಂದಾಗ ಅಶೋಕಣ್ಣ ಸೇರಿದಂತೆ ಉಳಿದವರೆಲ್ಲ ಎಲ್ಲಿದ್ದರು? ಕಾನೂನು ಎಲ್ಲರಿಗೂ ಒಂದೇ ಅಲ್ಲವೇ ಎಂದರು.
ನಾನು ಎಂದಿಗೂ ಒಕ್ಕಲಿಗ ಸಮುದಾಯವನ್ನು ಬಳಸಿಕೊಂಡಿಲ್ಲ. ನಾನು ಒಕ್ಕಲಿಗನಾಗಿ ಹುಟ್ಟಿದ್ದೇನೆ. ನಾವು ಎಲ್ಲಾ ಜಾತಿ, ಧರ್ಮಗಳಿಗೆ ಗೌರವ ಕೊಡಬೇಕು. ಸಾಂವಿಧಾನಿಕ ದೇಶದಲ್ಲಿ ಒಂದು ಧರ್ಮ, ಜಾತಿಯ ಹಕ್ಕಿನ ಬಗ್ಗೆ ಮಾತನಾಡುವುದು ಸೂಕ್ತವಲ್ಲ ಎಂದು ಹೇಳಿದರು.