ಪದೇ ಪದೇ ಇ.ಡಿ.ಸಮನ್ಸ್‌ ನೀಡಿ ಹಿಂಸೆ: ಡಿ.ಕೆ.ಶಿವಕುಮಾರ್‌

By Govindaraj SFirst Published Nov 6, 2022, 2:15 AM IST
Highlights

ಜಾರಿ ನಿರ್ದೇಶನಾಲಯದ (ಇ.ಡಿ) ಸಮನ್ಸ್‌ ಮೇರೆಗೆ ಇತ್ತೀಚೆಗಷ್ಟೇ ನಾನು ಹಾಗೂ ನನ್ನ ಸಹೋದರ ಹೋಗಿ ಉತ್ತರ ಕೊಟ್ಟಿದ್ದೇವೆ. ಇದೀಗ ಮತ್ತೆ ನ.7ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಬಂದಿದೆ. ಇ.ಡಿ. ಅವರು ಯಾಕೆ ಪದೇ ಪದೇ ಕರೆದು ಹಿಂಸೆ ಕೊಡುತ್ತಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ನ.06): ಜಾರಿ ನಿರ್ದೇಶನಾಲಯದ (ಇ.ಡಿ) ಸಮನ್ಸ್‌ ಮೇರೆಗೆ ಇತ್ತೀಚೆಗಷ್ಟೇ ನಾನು ಹಾಗೂ ನನ್ನ ಸಹೋದರ ಹೋಗಿ ಉತ್ತರ ಕೊಟ್ಟಿದ್ದೇವೆ. ಇದೀಗ ಮತ್ತೆ ನ.7ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಬಂದಿದೆ. ಇ.ಡಿ. ಅವರು ಯಾಕೆ ಪದೇ ಪದೇ ಕರೆದು ಹಿಂಸೆ ಕೊಡುತ್ತಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದೇ ಪದೇ ಜಾರಿ ನಿರ್ದೇಶನಾಲಯದಿಂದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಬರುತ್ತಿರುವ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು.

ಇತ್ತೀಚೆಗೆ ನಡೆದ ವಿಚಾರಣೆ ವೇಳೆ ಇ.ಡಿ. ಅವರು ಕೇಳಿದ ಎಲ್ಲಾ ಮಾಹಿತಿ ನೀಡಿದ್ದೇನೆ. ಆದರೆ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದ ತನಿಖಾಧಿಕಾರಿ ಬದಲಾಗಿದ್ದಾರೆ. ಈಗ ಮತ್ತೆ ವಿಚಾರಣೆಗೆ ಹಾಜರಾಗಲು ನನಗೆ ಹಾಗೂ ನನ್ನ ಸಹೋದರನಿಗೆ (ಸಂಸದ ಡಿ.ಕೆ.ಸುರೇಶ್‌) ನೋಟಿಸ್‌ ನೀಡಿದ್ದಾರೆ. ಅವರು ಕೇಳಿದ ದಾಖಲೆ ಸಲ್ಲಿಸಿದ್ದು, ಇನ್ನೂ ಕೆಲ ದಾಖಲೆಗಳನ್ನು ಕಳಿಸುತ್ತೇನೆ. ಇದನ್ನು ಕಾನೂನು ಪ್ರಕಾರವೇ ಎದುರಿಸುತ್ತೇನೆ ಎಂದು ಸ್ಪಷ್ಟಪಡಿಸಿದರು. ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಒಂದೇ ವಿಚಾರಕ್ಕೆ (ಅಕ್ರಮ ಆಸ್ತಿ ಸಂಪಾದನೆ ಪ್ರಕರಣ) ಎರಡು ಕೇಸ್‌ ದಾಖಲಿಸಿವೆ. ಈ ರೀತಿ ದಾಖಲಿಸಲು ಸಾಧ್ಯವಿಲ್ಲ ಎಂದು ಹೈಕೋರ್ಚ್‌ಗೆ ಅರ್ಜಿ ಹಾಕಿದ್ದೇನೆ. ನನಗೆ ಕಾನೂನಿನ ಮೇಲೆ ಗೌರವ ಇದೆ. ಅವರು ಏನು ಹೇಳುತ್ತಾರೋ ನೋಡೋಣ ಎಂದು ಹೇಳಿದರು.

ನ.6ಕ್ಕೆ ಬೆಂಗಳೂರಿಗೆ ಖರ್ಗೆ, ಪ್ಯಾಲೇಸ್ ಗ್ರೌಂಡ್‌ನಲ್ಲಿ ಸಮಾವೇಶ: ಡಿ.ಕೆ.ಶಿವಕುಮಾರ್

ಕೆಜಿಎಫ್‌-2 ಹಾಡು ಬಳಕೆ, ಕಾನೂನು ಮೂಲಕ ಉತ್ತರ: ಭಾರತ ಜೋಡೋ ಯಾತ್ರೆ ಸಂದರ್ಭದಲ್ಲಿ ಕೆಜಿಎಫ್‌-2 ಚಿತ್ರದ ಹಾಡಿನ ಬಳಕೆ ವಿಚಾರವಾಗಿ ರಾಹುಲ್ ಗಾಂಧಿ, ಜೈರಾಮ್‌ ರಮೇಶ್‌ ಹಾಗೂ ಇತರ ನಾಯಕರ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಮಾಧ್ಯಮಗಳ ಮೂಲಕ ತಿಳಿದುಬಂದಿದೆ. ದೇಶದೆಲ್ಲೆಡೆ ಜನ ಸಿನಿಮಾ ಹಾಡುಗಳನ್ನು ತಮ್ಮ ವಿಡಿಯೋಗಳಿಗೆ ಬಳಸುತ್ತಾರೆ. ಅದರಲ್ಲಿ ಯಾವ ಅಪರಾಧ ಇದೆಯೋ ಎಂದು ತಿಳಿಯುತ್ತಿಲ್ಲ. ಇಂತಹ ಪ್ರಕರಣಗಳ ಅನೇಕ ಉದಾಹರಣೆ ಪಟ್ಟಿನೀಡಬಹುದು. ಇದನ್ನು ನಾವು ಕಾನೂನಿನ ಮೂಲಕವೇ ಎದುರಿಸುತ್ತೇವೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಕಾಂಗ್ರೆಸ್‌ ಹಣ ಸಂಗ್ರಹಿಸಿದರೆ ಬಿಜೆಪಿಗೇಕೆ ನೋವು: ಬಿಜೆಪಿಯವರು ಚುನಾವಣಾ ಬಾಂಡ್‌ ಹೆಸರಿನಲ್ಲಿ ಹಣ ಸಂಗ್ರಹಿಸಿದ್ದಾರೆ. ನಮಗೆ ಯಾರೂ ಬಾಂಡ್‌ ಕೊಡುವವರಿಲ್ಲ. ಆದ್ದರಿಂದ ನಾವು ವಿಧಾನಸಭಾ ಚುನಾವಣಾ ಟಿಕೆಟ್‌ ನೀಡಲು ಕಾರ್ಯಕರ್ತರಿಂದ ಹಣ ಸಂಗ್ರಹಿಸುತ್ತಿದ್ದೇವೆ. ಇದರಿಂದ ಬಿಜೆಪಿಯವರಿಗೇನು ನೋವು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿಯವರು ಏನಾದರೂ ಟೀಕಿಸಲಿ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಅರ್ಜಿ ಶುಲ್ಕ 5 ಸಾವಿರ ರು. ಹಾಗೂ ಅರ್ಜಿ ಸಲ್ಲಿಸುವಾಗ 1 ಲಕ್ಷ, 2 ಲಕ್ಷ ರು. ಡಿಡಿ ಪಡೆದರೆ ತಪ್ಪೇನು?’ ಎಂದು ಪ್ರಶ್ನಿಸಿದರು. 

‘ಹಣ ನೀಡುವ ಬಗ್ಗೆ ಪಕ್ಷದ ಯಾವ ಕಾರ್ಯಕರ್ತರೂ ಅಸಮಾಧಾನ ವ್ಯಕ್ತಪಡಿಸಿಲ್ಲ. ಅಸಮಾಧಾನಗೊಳ್ಳುವವರು ಪಕ್ಷದಲ್ಲಿ ಇರುವುದು ಬೇಡ. ಪಕ್ಷ ತೊರೆಯಬಹುದು. ಎಲ್ಲರನ್ನೂ ಗಮನದಲ್ಲಿ ಇಟ್ಟುಕೊಂಡು ಪಕ್ಷದಿಂದಲೇ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದು ಪಕ್ಷದ ವಿಚಾರವಾಗಿದ್ದು, ಪಕ್ಷ ಉಳಿಯಬೇಕು. ಪಕ್ಷ ಹಾಗೂ ಪಕ್ಷದ ಬಾವುಟ ಕಟ್ಟುವವರು ಯಾರು. ಮಾತನಾಡುವವರು ಬಂದು ಪಕ್ಷ ಕಟ್ಟುತ್ತಾರಾ?’ ಎಂದು ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಬಿಜಿಪಿ ಸರ್ಕಾರವಿದ್ದು ಬಾಂಡ್‌ ಹೆಸರಿನಲ್ಲಿ ಹಣ ಸಂಗ್ರಹ ಮಾಡುತ್ತಿದ್ದಾರೆ. 

ತಾಕತ್ತಿದ್ದರೆ ಭ್ರಷ್ಟಾಚಾರ ಬಗ್ಗೆ ತನಿಖೆ ನಡೆಸಿ: ಸಿಎಂಗೆ ಡಿಕೆಶಿ ಸವಾಲು

ಆದರೆ ನಮಗೆ ಬಾಂಡ್‌ ಕೊಡುವವರಿಲ್ಲ. ಹೀಗಾಗಿ ಪಕ್ಷ ಸಂಘಟನೆಗೆ ನಮ್ಮ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು? ‘ಹಣ ನೀಡುವ ಬಗ್ಗೆ ಪಕ್ಷದ ಯಾವ ಕಾರ್ಯಕರ್ತರೂ ಅಸಮಾಧಾನ ವ್ಯಕ್ತಪಡಿಸಿಲ್ಲ. ಅಸಮಾಧಾನಗೊಳ್ಳುವವರು ಪಕ್ಷದಲ್ಲಿ ಇರುವುದು ಬೇಡ. ಪಕ್ಷ ತೊರೆಯಬಹುದು. ಎಲ್ಲರನ್ನೂ ಗಮನದಲ್ಲಿ ಇಟ್ಟುಕೊಂಡು ಪಕ್ಷದಿಂದಲೇ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದು ಪಕ್ಷದ ವಿಚಾರವಾಗಿದ್ದು, ಪಕ್ಷ ಉಳಿಯಬೇಕು. ಪಕ್ಷ ಹಾಗೂ ಪಕ್ಷದ ಬಾವುಟ ಕಟ್ಟುವವರು ಯಾರು. ಮಾತನಾಡುವವರು ಬಂದು ಪಕ್ಷ ಕಟ್ಟುತ್ತಾರಾ?’ ಎಂದು ತಿರುಗೇಟು ನೀಡಿದರು.

click me!