ಸಮೀಕ್ಷೆಯ ಮೂಲಪ್ರತಿ ನನ್ನ ಬಳಿ ಇಲ್ಲ; ಸಂಪುಟದಲ್ಲಿ ಯಾರೂ ವಿರೋಧಿಸಿಲ್ಲ : ಆರ್ ಅಶೋಕ್‌ ಹೇಳಿಕೆಗೆ ಸಿಎಂ ತಿರುಗೇಟು

Published : Apr 21, 2025, 05:19 AM ISTUpdated : Apr 21, 2025, 05:20 AM IST
ಸಮೀಕ್ಷೆಯ ಮೂಲಪ್ರತಿ ನನ್ನ ಬಳಿ ಇಲ್ಲ; ಸಂಪುಟದಲ್ಲಿ ಯಾರೂ ವಿರೋಧಿಸಿಲ್ಲ : ಆರ್ ಅಶೋಕ್‌ ಹೇಳಿಕೆಗೆ ಸಿಎಂ ತಿರುಗೇಟು

ಸಾರಾಂಶ

ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲಪ್ರತಿ ನನ್ನ ಬಳಿ ಇಲ್ಲ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸುಳ್ಳು ಹೇಳುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

 ಬೆಳಗಾವಿ (ಏ.21)‘ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲಪ್ರತಿ ನನ್ನ ಬಳಿ ಇಲ್ಲ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸುಳ್ಳು ಹೇಳುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲಪ್ರತಿ ಮುಖ್ಯಮಂತ್ರಿಯವರ ಬಳಿಯಿದೆ ಎಂಬ ಆರ್.ಅಶೋಕ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, ಅಶೋಕ್ ಅವರು ಯಾವತ್ತಾದರೂ ಸತ್ಯ ಹೇಳಿದ್ದಾರೆಯೇ?. ಅವರು ಯಾವಾಗಲೂ ಸುಳ್ಳೇ ಹೇಳುವುದು. ಮೂಲಪ್ರತಿ ನನ್ನ ಬಳಿಯಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಅಲ್ಲದೆ, ಈ ಸಂಬಂಧ ರಾಹುಲ್ ಗಾಂಧಿಯವರಿಗೆ ನಾವು ಪತ್ರ ಬರೆದಿಲ್ಲ. ಆದರೆ, ಅವರೊಂದಿಗೆ ಚರ್ಚೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಸಮೀಕ್ಷೆಯ ವರದಿಯನ್ನು ಮಂಡಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಮುಸಲ್ಮಾನರು, ಹಿಂದುಳಿದವರಿಗೆ ಮಾತ್ರವಲ್ಲದೆ, ಎಲ್ಲಾ ಧರ್ಮ, ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು. ಅವರಿಗೆ ಸಾಮಾಜಿಕ, ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ. ಯಾವ ಜಾತಿಗೂ ಅನ್ಯಾಯವಾಗಬಾರದು ಎನ್ನುವುದು ಸರ್ಕಾರದ ಉದ್ದೇಶ ಎಂದರು.

ಇದನ್ನೂ ಓದಿ6 ಜನ ಮಕ್ಕಳಲ್ಲಿ ನಾನೊಬ್ಬನೇ ಓದಿ ಸಿಎಂ ಆದೆ, ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬೇಡಿ: ಸಿದ್ದರಾಮಯ್ಯ

ಇದು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ. ಸಂವಿಧಾನ ಜಾರಿಯಾಗಿ 75 ವರ್ಷಗಳಾಗಿದ್ದರೂ ಬಡವ ಬಡವನಾಗಿಯೇ ಉಳಿಯಬೇಕೆ?. ಸಮಾನತೆ ಬೇಡವೇ?, ಜಾತಿಗೆ ಅಂಟಿಕೊಂಡೇ ಇರಬೇಕೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.ಕಾಂಗ್ರೆಸ್ ಶಾಸಕರೇ ಈ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಸಚಿವ ಸಂಪುಟ ಸಭೆಯಲ್ಲಿ ಯಾರೂ ಈ ಬಗ್ಗೆ ವಿರೋಧ ವ್ಯಕ್ತಪಡಿಸಿ ಜೋರಾಗಿ ಮಾತನಾಡಿಲ್ಲ. ಸಮೀಕ್ಷೆ ಓದಿಕೊಂಡು ಅಭಿಪ್ರಾಯ ತಿಳಿಸುವಂತೆ ಸೂಚಿಸಲಾಗಿದ್ದು, ಸಚಿವರು ಅಭಿಪ್ರಾಯ ತಿಳಿಸಿದ ನಂತರ ಪುನಃ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್