ನಾನು ಯಾರಿಗೂ ಟಿಕೆಟ್ ಭರವಸೆ ನೀಡಿಲ್ಲ, ಎಲ್ಲವೂ ಹೈಕಮಾಂಡ್ ನಿರ್ಧಾರ: ಬೊಮ್ಮಾಯಿ

By Sathish Kumar KH  |  First Published Oct 21, 2024, 6:54 PM IST

ಶಿಗ್ಗಾವಿ ಉಪಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ತಮಗೆ ಯಾವುದೇ ಪಾತ್ರವಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಯಾರಿಗೂ ಟಿಕೆಟ್ ಭರವಸೆ ನೀಡಿಲ್ಲ, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಾರೆ. ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಲಾಗಿದೆ ಎಂದು ಹೇಳಿದ್ದಾರೆ.


ಹಾವೇರಿ (ಅ.21): ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಾರಿಗೂ ಟಿಕೆಟ್ ಕೊಡಿಸುವ ಭರವಸೆ ನೀಡಿರಲಿಲ್ಲ. ನಾನು ಕಾರ್ಯಕರ್ತರಿಗೆ ಅನ್ಯಾಯ ಮಾಡಿಲ್ಲ. ನನ್ನ ಮಗನನ್ನು  ನಿಲ್ಲಿಸಲು ಆಸಕ್ತಿ ಇರಲಿಲ್ಲ. ಕೊನೆಯ ಘಳಿಗೆವರಿಗೂ ಬೇಡ ಅಂತಾ ಹೇಳಿದ್ದೇನೆ. ಅಂತಿಮವಾಗಿ ಹೈಕಮಾಂಡ್ ಟಿಕೆಟ್ ನೀಡಿದೆ. ಗೆಲ್ಲುವ ದೃಷ್ಟಿಯಿಂದ ಟಿಕೆಟ್ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಗ್ಗಾವಿ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಸಂಸದ ಬಸವರಾಜ  ಬೊಮ್ಮಾಯಿ ಮಾತುಕೊಟ್ಟು ತಪ್ಪಿದ್ದಾರೆ ಎಂಬ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಸ್ಪಷ್ಟವಾಗಿ ಹೇಳುತ್ತೇನೆ. ನಾನು ಯಾರಿಗೂ ಟಿಕೆಟ್ ಕೊಡಿಸುತ್ತೇನೆ ಎಂದು ಮಾತುಕೊಟ್ಟಿಲ್ಲ. ಸುಮಾರು 50 ಜನ ಆಕಾಂಕ್ಷಿಗಳು ಇದ್ದರು, ಎಲ್ಲರಿಗೂ ಪಕ್ಷದ ನಿರ್ಧಾರಕ್ಕೆ ಬದ್ದನಾಗಿರಬೇಕು ಅಂತಾ ಒಂದೆ ಮಾತು ಹೇಳಿದ್ದೆ. ಇದು ನನ್ನ ನಿರ್ಣಯ ಅಲ್ಲಾ,‌ ಪಕ್ಷದ ನಿರ್ಣಯ. ನಾನು ಯಾರಿಗೂ ಮಾತುಕೊಟ್ಟಿಲ್ಲ. ಮಾತು ತಪ್ಪಿಲ್ಲ ಎಂದು ಹೇಳಿದರು.

Latest Videos

undefined

ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಬಂಡಾಯ ಸ್ಪರ್ಧೆ ಖಚಿತವೆಂದ ಸೈನಿಕ; ಅಫಿಡವಿಟ್ ಸಿದ್ಧಪಡಿಸಿಕೊಳ್ಳುತ್ತಿರುವ ಯೋಗೇಶ್ವರ್!

ನನ್ನ ಮಗನನ್ನು  ನಿಲ್ಲಿಸಲು ಆಸಕ್ತಿ ಇರಲಿಲ್ಲ. ಕೊನೆಯ ಘಳಿಗೆವರಿಗೂ ಬೇಡ ಅಂತಾ ಹೇಳಿದ್ದೇನೆ. ಅಂತಿಮವಾಗಿ ಹೈಕಮಾಂಡ್ ಟಿಕೆಟ್ ನೀಡಿದೆ. ಗೆಲ್ಲುವ ದೃಷ್ಟಿಯಿಂದ ಟಿಕೆಟ್ ನೀಡಿದೆ. ತಿರ್ಮಾನ ಮಾಡಿದೆ. ಪಕ್ಷದ ಆದೇಶವನ್ನು ಪರಿಪಾಲನೆ ಮಾಡುವುದು ನನ್ನ ಕಾರ್ಯ. ಕೇಂದ್ರ ಗೃಹ ಸಚಿವ ಅಮಿಶ್ ಷಾ ಮಾತನಾಡಿ  ಟಿಕೆಟ್ ಪೈನಲ್ ಮಾಡಿದ್ದಾರೆ. ಸಾಮಾನ್ಯ ಕಾರ್ಯಕರ್ತರಿಗೆ ಅನ್ಯಾಯ  ಆಗಿದೆ ಎಂಬ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನ್ನ ಕಾರ್ಯಕರ್ತರಿಗೆ ಅನ್ಯಾಯ ಮಾಡಿಲ್ಲ. ಅವರಿಗೆ ಕ್ಯಾಬಿನೆಟ್ ಸ್ಥಾನ ನೀಡಿದ್ದೇನೆ. ಹಲವಾರು ಸ್ಥಾನಮಾನ ಮಾಡಿದ್ದೇವೆ. ಶ್ರೀಕಾಂತ್ ದುಂಡಿಗೌಡರ ಜೊತೆ ಮಾತನಾಡುತ್ತೇನೆ. ಮನವೊಲಿಸಲು ಕಾರ್ಯ ಮಾಡುತ್ತೇವೆ ಎಂದು ಹೇಳಿದರು.

ಚನ್ನಪಟ್ಟಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಸಿ.ಪಿ ಯೋಗಿಶ್ವರ  ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇವತ್ತಿನ ಬೆಳವಣಿಗೆ ಗೊತ್ತಿಲ್ಲ. ನಿನ್ನೆ‌ ತಡರಾತ್ರಿ ಮನವೊಲಿಸಲು  ಪ್ರಯತ್ನ ನಡೆದಿತ್ತು. ರಾಷ್ಟ್ರೀಯ ವರಿಷ್ಟರು ಮಾತುಕತೆ ಮಾಡಿ ಮನವೊಲಿಸಲು ಕಾರ್ಯ ಮಾಡುತ್ತಾರೆ. ಸರಿಯಾಗುತ್ತದೆ ಅನ್ನುವ ವಿಶ್ವಾಸ ಇದೆ. ಸಿ.ಪಿ ಯೋಗಿಶ್ವರರಗೆ ಸ್ವರ್ಧೆ ಮಾಡುವ ಆಸೆ ಇದೆ. ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರ ಕ್ಷೇತ್ರ ಆಗಿದ್ದು, ಅವರಿಬ್ಬರೂ ಮಾತುಕತೆ ಮಾಡಿಕೊಂಡು ಹೊಂದಾಣಿಕೆ ಆಗಬೇಕಿತ್ತು. ತಡವಾಗಿದ್ದಕ್ಕೆ ಈ ನಿರ್ಧಾರಕ್ಕೆ ಬಂದಿರಬಹುದು. ನಮ್ಮ ಪಕ್ಷದ ಹೈಕಮಾಂಡ್ ಮಧ್ಯಸ್ಥಿಕೆ ವಹಿಸಿ ಸರಿಪಡಿಸುವ ಕಾರ್ಯ ಮಾಡುತ್ತದೆ.  ಸಿ.ಪಿ‌. ಯೋಗೇಶ್ವರ ಕಾಂಗ್ರೆಸ್ ಮುಖಂಡರ ಜೊತೆ ಸಂಪರ್ಕದಲ್ಲಿರುವ  ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ರಾಕೇಶ್ ಸಿದ್ದರಾಮಯ್ಯ ಸಾವಿಗೆ ಬೈರತಿ ಸುರೇಶ್ ಕಾರಣ: ಸಚಿವೆ ಶೋಭಾ ಕರಂದ್ಲಾಜೆ ಆರೋಪ

ನಮ್ಮ ತಂದೆಯಂತೆ ಈ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತೇನೆ. ಬರುವ ದಿನಗಳಲ್ಲಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನ ಮುಂದುವರೆಸಿಕೊಂಡು ಹೋಗುತ್ತೇನೆ. ಸಾಮಾಜಿಕ ನ್ಯಾಯದ ಅಡಿ ಕೆಲಸ ಮಾಡುತ್ತೇನೆ.‌ ಎಸ್ಸಿ, ಎಸ್ಟಿ ಒಬಿಸಿ ಸೇರಿದಂತೆ ಎಲ್ಲಾ ವರ್ಗದ ಜನರ ಕೆಲಸಗಳನ್ನು ಮಾಡುತ್ತೇನೆ. ನಾನು 2018, 2023 ರ ವಿಧಾನಸಭೆ ಚುನಾವಣೆಯಲ್ಲಿ ಕೆಲಸ‌ ಮಾಡಿದ್ದೇನೆ. ಕ್ಷೇತ್ರದ ಜನರು ನನಗೆ ಪ್ರೀತಿ ವಿಶ್ವಾಸ ತೋರಿಸಿದ್ದೀರಿ, ಮೀರ್ಚಿ ಮಂಡಕ್ಕಿ ಕೊಟ್ಟು ಪ್ರೀತಿ ತೋರಿಸಿದ್ದೀರಿ. ನಾನು ನಿಮ್ಮೊಂದಿಗೆ ಸದಾ ಕಾಲ‌ ಇದ್ದು ಕೆಲಸ ಮಾಡುತ್ತೇನೆ ಎಂದು ಹೇಳಿದರು. 

click me!