ಆಯುಷ್ಯ ಕಡಿಮೆ ಆಗುತ್ತೆಂದು ಸಿಗರೇಟ್ ಸೇದೋದು ಬಿಟ್ಟೆ: ಸಿಎಂ ಸಿದ್ದರಾಮಯ್ಯ

Published : Jul 02, 2024, 12:21 PM ISTUpdated : Jul 02, 2024, 12:44 PM IST
ಆಯುಷ್ಯ ಕಡಿಮೆ ಆಗುತ್ತೆಂದು ಸಿಗರೇಟ್ ಸೇದೋದು ಬಿಟ್ಟೆ: ಸಿಎಂ ಸಿದ್ದರಾಮಯ್ಯ

ಸಾರಾಂಶ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘಿ ಸೇರಿದಂತೆ ಸಾಂಕ್ರಾಮಿಕ ಕಾಯಿಲೆ ಹೆಚ್ಚಾಗುತ್ತಿವೆ. ಇವು ಸೊಳ್ಳೆಗಳಿಂದ ಹರಡುವ ಕಾಯಿಲೆಯಾಗಿದ್ದು, ಸ್ವಚ್ಛ ನೀರಿನಲ್ಲೇ ಇವು ಉತ್ಪತ್ತಿಯಾಗುತ್ತವೆ. ಇವುಗಳನ್ನು ವೈದ್ಯರು. ಆರೋಗ್ಯ ಇಲಾಖೆ ಅಧಿಕಾರಿಗಳ ಜತೆಗೆ ಸಾರ್ವಜನಿಕರು ಸಹ ಜವಾಬ್ದಾರಿ ಅರಿತು ಸಾಥ್ ನೀಡಬೇಕು ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು(ಜು.02):  ರಾಜ್ಯಾದ್ಯಂತ ಡೆಂಘಿ ಸೇರಿದಂತೆ ಸಾಂಕ್ರಾಮಿಕ ಕಾಯಿಲೆಗಳು ಹೆಚ್ಚಾಗುತ್ತಿವೆ. ಕೆಲ ಸಾವುಗಳೂ ವರದಿಯಾಗಿವೆ. ಈ ಕಾಯಿಲೆಗಳನ್ನು ನಿಯಂತ್ರಿಸಲು ವೈದ್ಯರ ಜತೆಗೆ ಸಾರ್ವಜನಿಕರು ಸಹಕೆಲಸಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಆರೋಗ್ಯ ಇಲಾಖೆಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘಿ ಸೇರಿದಂತೆ ಸಾಂಕ್ರಾಮಿಕ ಕಾಯಿಲೆ ಹೆಚ್ಚಾಗುತ್ತಿವೆ. ಇವು ಸೊಳ್ಳೆಗಳಿಂದ ಹರಡುವ ಕಾಯಿಲೆಯಾಗಿದ್ದು, ಸ್ವಚ್ಛ ನೀರಿನಲ್ಲೇ ಇವು ಉತ್ಪತ್ತಿಯಾಗುತ್ತವೆ. ಇವುಗಳನ್ನು ವೈದ್ಯರು. ಆರೋಗ್ಯ ಇಲಾಖೆ ಅಧಿಕಾರಿಗಳ ಜತೆಗೆ ಸಾರ್ವಜನಿಕರು ಸಹ ಜವಾಬ್ದಾರಿ ಅರಿತು ಸಾಥ್ ನೀಡಬೇಕು ಎಂದು ಹೇಳಿದರು.

ಸ್ಮೋಕಿಂಗ್ ಬಿಟ್ಟು ಶ್ವಾಸಕೋಶ ಬಲಪಡಿಸುತ್ತಿರುವವರಿಗೆ 10 ಟಿಪ್ಸ್

ನಾವು ಡೆಂಘಿ ಮತ್ತಿತರ ಕಾಯಿಲೆಗಳು ಸೊಳ್ಳೆಗಳಿಂದ ಬರುತ್ತವೆ ಎಂದು ಗೊತ್ತಿದ್ದರೂ ಅವುಗಳನ್ನು ನಿಯಂತ್ರಿಸುವುದಿಲ್ಲ, ಕೆಲವು ಚಟಗಳಿಂದ ಕಾಯಿಲೆಗಳು ಬರುತ್ತವೆ ಎಂದು ಗೊತ್ತಿದ್ದರೂ ಮುಂದುವರೆಸುತ್ತೇವೆ. ಉದಾ: ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ ಅದರಿಂದ ಕ್ಯಾನ್ಸರ್ ಬರುತ್ತದೆ ಎಂದು ಓದಿಕೊಂಡೇ ಸೇದುತ್ತೇವೆ ಎಂದರು.

ಬಡವರಿಗೆ ಹಸನ್ಮುಖಿಯಾಗಿ ಚಿಕಿತ್ಸೆ ನೀಡಿ:

ವೈದ್ಯೋ ನಾರಾಯಣೋ ಹರಿಃ ಎಂದು ಭಾವಿಸಲಾಗುತ್ತದೆ. ಸಮಾಜದ ಸ್ವಾಸ್ತ್ರವನ್ನು ಕಾಪಾಡುವವರು ಹಾಗೂ ಆರೋಗ್ಯ ರಕ್ಷಣೆ ಮಾಡುವವರು ವೈದ್ಯರು. ಕೊರೋನಾ ಸಂದರ್ಭದಲ್ಲಿ ಅವರ ಸೇವೆಮರೆಯಲಾಗದು. ವೈದ್ಯರು ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಬಡವರಿಗೆ ಹಸನ್ಮುಖಿಯಾಗಿ ಆತ್ಮಸ್ಥೆರ್ಯ ತುಂಬುವ ಕೆಲಸ ಮಾಡಬೇಕು ಎಂದರು.

ಎರಡು ತಿಂಗಳಲ್ಲಿ ಔಷಧ ಕೊರತೆ ನೀಗಿಸು ತೇವೆ: 

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಆರಂಭದಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿಯೇ ಸರಬರಾಜು ಆಗುತ್ತಿರಲಿಲ್ಲ, ಶೇ.30ರಷ್ಟು ಮಾತ್ರ ನಿಗಮದಿಂದ ಪೂರೈಕೆಯಾಗುತ್ತಿತ್ತು. ಇದೀಗ ಸಾಕಷ್ಟು ಸುಧಾರಣೆ ತಂದಿದ್ದು, ಶೇ.80ರಷ್ಟು ಔಷದಿ ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಕೆಯಾಗುತ್ತಿದೆ. ಮುಂಬರುವ ಎರಡು ತಿಂಗಳೊಳಗೆ ಸಂಪೂರ್ಣವಾಗಿ ಔಷಧಿ ಸರಬಾರಾಜು ಸರಿಪಡಿಸುವುದಾಗಿ ಭರವಸೆ ನೀಡಿದರು.

ಕಳೆದ 30 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ವೃಂದ ಮತ್ತು ನೇಮಕಾತಿ ನಿಯಮ ಪರಿಷ್ಕರಣೆಯಾಗಿರಲಿಲ್ಲ. ಇದೀಗ ಪರಿಷ್ಕರಣೆ ಅಂತಿಮ ಹಂತದಲ್ಲಿದ್ದು, ಒಂದು ತಿಂಗಳ ಒಳಗಾಗಿ ಜಾರಿಗೆ ಬರಲಿದೆ. ವಿಶೇಷವಾಗಿ 8 ವರ್ಷಗಳ ಬಳಿಕ ಆರೋಗ್ಯ ಇಲಾಖೆ ವರ್ಗಾವಣೆಯನ್ನು ಪೂರ್ಣ ಪ್ರಮಾಣದಲ್ಲಿ ಕೌನ್ಸೆಲಿಂಗ್ ಮೂಲಕ ನಡೆಸಲಾಗುತ್ತಿದ್ದು,ಪಾರದರ್ಶಕ ಆಡಳಿತವನ್ನು ಇಲಾಖೆಯಲ್ಲಿ ತರಲಾಗಿದೆ ಎಂದರು.

ಸಿಕ್ಕಾಪಟ್ಟೆ ಸ್ಮೋಕಿಂಗ್‌, ವ್ಯಕ್ತಿಯ ಗಂಟಲಲ್ಲಿ ಬೆಳೆಯಿತು ಕೂದಲು!

ಜೀವಮಾನ ಸಾಧನೆ ಹಾಗೂ ಇತರೆ ಪ್ರಶಸ್ತಿಗಳಿಗೆ ಭಾಜನರಾದ ವೈದ್ಯರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.

24 ವರ್ಷ ಹಿಂದೆಯೇ ಆ್ಯಂಜಿಯೋಪ್ಲಾಸ್ಟಿ ಆಗಿದೆ

ನಾನೂ ಸಿಗರೇಟ್ ಸೇದುತ್ತಿದ್ದೆ. ಅದರಿಂದ ಎದೆಯುರಿ ಸಮಸ್ಯೆ ಕಾಣಿಸಿಕೊಂಡು ಆಯುಷ್ಯ ಕಡಿಮೆ ಆಗುತ್ತದೆ ಎಂದು ತಿಳಿದಾಗ 1987ರಲ್ಲಿ ಸಿಗರೇಟ್ ಬಿಟ್ಟೆ ಆದರೆ ಅದರ ಪರಿಣಾಮ ಹಾಗೆಯೇ ಇತ್ತು. 2000ನೇ ಇಸವಿಯಲ್ಲಿ ಹೃದಯಕ್ಕೆ ಆ್ಯಂಜಿಯೋ ಪ್ಲಾಸ್ಟಿ ಮಾಡಿಸಿಕೊಳ್ಳುವಂತಾಯಿತು. ಹೀಗಾಗಿ ನಮ್ಮ ಆಹಾರ ಪದ್ಧತಿ, ಜೀವನಶೈಲಿ ಬಹಳ ಮುಖ್ಯ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Video: ಚಲಿಸುವ BMTC ಬಸ್ಸಲ್ಲಿ ಸ್ಟೇರಿಂಗ್ ಹಿಡಿದು ಡ್ರೈವರ್‌ಗಳ ಕಿತ್ತಾಟ; ಪ್ರಯಾಣಿಕರಿಗೆ ಪ್ರಾಣ ಸಂಕಟ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!