Latest Videos

ಪೋಕ್ಸೋ ಕೇಸ್‌ ವಿಚಾರಣೆಗೆ ನಾಳೆ ಹೋಗುತ್ತೇನೆ: ಯಡಿಯೂರಪ್ಪ

By Kannadaprabha NewsFirst Published Jun 16, 2024, 6:14 AM IST
Highlights

ಅನಾವಶ್ಯಕವಾಗಿ ಗೊಂದಲ ಉಂಟು ಮಾಡುವ ಕೆಲಸ ಮಾಡಲಾಗಿದೆ. ನಾನು ಯಾರ ಮೇಲೂ ದೂರುವುದಿಲ್ಲ. ಕಾಲವೇ ಎಲ್ಲ ತೀರ್ಮಾನ ಮಾಡಲಿದೆ, ವಾಸ್ತವ ಏನೆಂಬುದು ಜನರಿಗೆ ಗೊತ್ತಿದೆ. ಯಾರು ಕುತಂತ್ರ ಮಾಡುತ್ತಿದ್ದಾರೋ, ಜನ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ನ್ಯಾಯಾಂಗದ ಮೇಲೆ ನಂಬಿಕೆ ಇದ್ದು, ನ್ಯಾಯ ಸಿಗುವ ವಿಶ್ವಾಸ ಇದೆ: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ 

ಬೆಂಗಳೂರು(ಜೂ.16): ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. 

ಶನಿವಾರ ದೆಹಲಿಯಿಂದ ನಗರಕ್ಕೆ ಆಗಮಿಸಿದ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು. ನಿಗದಿತ ಕಾರ್ಯಕ್ರಮ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದೆ. ಸೋಮವಾರ ವಿಚಾರಣೆಗೆ ಬರುವುದಾಗಿ ಮೊದಲೇ ತಿಳಿಸಿದ್ದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹೋಗುತ್ತೇನೆ ಎಂದರು.

ರಾಜಕೀಯವಾಗಿ ಮಣಿಸಲು ನಮ್ಮಪ್ಪನ ಮೇಲೆ ಪೋಕ್ಸೋ ಕೇಸ್ ಆರೋಪ ಹೊರಿಸಿದ್ದಾರೆ; ಬಿ.ವೈ. ರಾಘವೇಂದ್ರ

ಅನಾವಶ್ಯಕವಾಗಿ ಗೊಂದಲ ಉಂಟು ಮಾಡುವ ಕೆಲಸ ಮಾಡಲಾಗಿದೆ. ನಾನು ಯಾರ ಮೇಲೂ ದೂರುವುದಿಲ್ಲ. ಕಾಲವೇ ಎಲ್ಲ ತೀರ್ಮಾನ ಮಾಡಲಿದೆ, ವಾಸ್ತವ ಏನೆಂಬುದು ಜನರಿಗೆ ಗೊತ್ತಿದೆ. ಯಾರು ಕುತಂತ್ರ ಮಾಡುತ್ತಿದ್ದಾರೋ, ಜನ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ನ್ಯಾಯಾಂಗದ ಮೇಲೆ ನಂಬಿಕೆ ಇದ್ದು, ನ್ಯಾಯ ಸಿಗುವ ವಿಶ್ವಾಸ ಇದೆ ಎಂದು ತಿಳಿಸಿದರು.

click me!