ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನನ್ನ ವಿರುದ್ಧ ಮಾಡಿರುವ ಆರೋಪವನ್ನು ಸಾಬೀತುಪಡಿಸಿದರೆ ನಾನು ಈ ದೇಶವನ್ನೇ ತೊರೆದು ಹೋಗುತ್ತೇನೆ. ಒಂದು ವೇಳೆ, ಅವರು ತಮ್ಮ ಆರೋಪವನ್ನು ಸಾಬೀತು ಮಾಡಲು ವಿಫಲವಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾಕಿಸ್ತಾನಕ್ಕೆ ಹೋಗಬೇಕು ಎಂದು ಜಮಾತ್ ಎ ಅಹಲೆ ಸುನ್ನತ್ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಹಾಗೂ ವಿಜಯಪುರದ ಹಜರತ್ ಹಾಶಿಂಪೀರ ದರ್ಗಾದ ತನ್ವೀರ್ ಹಾಶ್ಮಿ ಸವಾಲು ಹಾಕಿದ್ದಾರೆ.
ವಿಜಯಪುರ (ಡಿ.7) : ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನನ್ನ ವಿರುದ್ಧ ಮಾಡಿರುವ ಆರೋಪವನ್ನು ಸಾಬೀತುಪಡಿಸಿದರೆ ನಾನು ಈ ದೇಶವನ್ನೇ ತೊರೆದು ಹೋಗುತ್ತೇನೆ. ಒಂದು ವೇಳೆ, ಅವರು ತಮ್ಮ ಆರೋಪವನ್ನು ಸಾಬೀತು ಮಾಡಲು ವಿಫಲವಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾಕಿಸ್ತಾನಕ್ಕೆ ಹೋಗಬೇಕು ಎಂದು ಜಮಾತ್ ಎ ಅಹಲೆ ಸುನ್ನತ್ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಹಾಗೂ ವಿಜಯಪುರದ ಹಜರತ್ ಹಾಶಿಂಪೀರ ದರ್ಗಾದ ಧರ್ಮಾಧಿಕಾರಿ ಸೈಯದ್ ಮೊಹಮ್ಮದ್ ತನ್ವೀರ್ ಹಾಶ್ಮಿ ಸವಾಲು ಹಾಕಿದ್ದಾರೆ.
ಯತ್ನಾಳ ಆರೋಪಕ್ಕೆ ಅವರು ಪ್ರತಿಕ್ರಿಯೆ ನೀಡಿ ಪತ್ರಿಕಾ ಪ್ರಕಟಣೆ ನೀಡಿದ್ದು, ಐಸಿಸ್ ಜೊತೆ ನಂಟಿದೆ ಎಂದು ಯತ್ನಾಳ ಅವರು ಬಿಡುಗಡೆ ಮಾಡಿರುವ ಚಿತ್ರಗಳು ನನ್ನ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ನಾನೇ ಅಪ್‌ಲೋಡ್ ಮಾಡಿರುವ ಚಿತ್ರಗಳಾಗಿವೆ. ಸುಮಾರು 12 ವರ್ಷಗಳ ಹಿಂದೆ ನಾನು ಇರಾಖ್ ನ ಬಾಗ್ದಾದ್ ನಗರದ ಅಂತಾರಾಷ್ಟ್ರೀಯ ಪ್ರಸಿದ್ಧ ಸೂಫಿ ಮಹೆಬೂಬ್ ಎಸುಭಾನಿ ಗೌಸ್ ಎ ಆಜಂ ಅವರ ದರ್ಶನಕ್ಕೆ ಹೋದಾಗ ಅಲ್ಲಿನ ದರ್ಗಾದ ಪೀಠಾಧಿಪತಿ ಖಲೀದ್ ಜಿಲಾನಿ ಅವರ ಆಶೀರ್ವಾದ ಪಡೆಯುವ ಸಂದರ್ಭದಲ್ಲಿ ತೆಗೆದಂತಹ ಚಿತ್ರಗಳಾಗಿವೆ. ಮತ್ತೊಂದು ಚಿತ್ರ, ಅವರ ಅಂಗರಕ್ಷಕ ನನ್ನನ್ನು ಪೀಠಕ್ಕೆ ಕರೆದುಕೊಂಡು ಹೋಗುವ ಸಮಯದಲ್ಲಿ ತೆಗೆದ ಚಿತ್ರವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
Breaking: ಐಸಿಸ್ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡ ಸಿಎಂ, ದಾಖಲೆ ಬಿಡುಗಡೆ ಮಾಡಿದ ಯತ್ನಾಳ್!
ಐಸಿಸ್‌ನಂಥ ಭಯೋತ್ಪಾದಕ ಸಂಘಟನೆ ಜೊತೆ ನನಗೆ ನಂಟಿದೆ ಎಂಬುದರ ಬಗ್ಗೆ ಶಾಸಕರು ಒಂದು ವಾರದೊಳಗೆ ದಾಖಲೆ ಬಿಡುಗಡೆ ಮಾಡಬೇಕು. ಇಲ್ಲವಾದರೆ ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಿಎಂ ಜೊತೆ ವೇದಿಕೆ ಹಂಚಿಕೊಂಡ ಮೌಲ್ವಿಗೆ ಐಸಿಸ್ ನಂಟು, ತನಿಖೆ ನಡೆಸುವಂತೆ ಅಮಿತ್ ಶಾಗೆ ಯತ್ನಾಳ್ ಪತ್ರ
ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಯೋತ್ಪಾದನೆ ಖಂಡಿಸುವ ಅನೇಕ ಸಮ್ಮೇಳನ, ಕಾರ್ಯಕ್ರಮಗಳಲ್ಲಿ ನಾನು ಹಲವು ಬಾರಿ ಭಾರತವನ್ನು ಪ್ರತಿನಿಧಿಸುತ್ತಾ ಬಂದಿದ್ದೇನೆ. ರಾಷ್ಟ್ರ, ರಾಜ್ಯದ ಹಲವು ಕೋಮು ಸೌಹಾರ್ದ ಸಮ್ಮೇಳನಗಳಲ್ಲಿ ಪಾಲ್ಗೊಂಡಿದ್ದೇನೆ. ವಿವಿಧ ಧರ್ಮಗುರುಗಳು, ಪೀಠಾಧಿಪತಿಗಳು, ಮಠಾಧೀಶರ ಜೊತೆಯಲ್ಲಿ ಪಾಲ್ಗೊಂಡಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.