
ಬೆಂಗಳೂರು (ನ.14): ಶಾಸಕ ಬಸನಗೌಡ ಯತ್ನಾಳ್, ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ಪಕ್ಷದ ಎಲ್ಲ ಹಿರಿಯ ನಾಯಕರನ್ನು ವೈಯಕ್ತಿಕವಾಗಿ ಭೇಟಿ ಮಾಡಲಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಈ ಮೂಲಕ ಮುನಿದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸುಳಿವು ನೀಡಿದ್ದಾರೆ.
ಮಾಜಿ ಸಚಿವ ಆರ್.ಅಶೋಕ್ ಅವರನ್ನು ಪದ್ಮನಾಭನಗರದ ಅವರ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವೆ. ಮಂಗಳವಾರ ಕುರುಡುಮಲೆ ದೇವಸ್ಥಾನಕ್ಕೆ ಭೇಟಿ ಕೊಡಲಿದ್ದೇನೆ. ಬೂತ್ ಅಧ್ಯಕ್ಷರು ಮತ್ತು ಕೆಲವು ಪ್ರಮುಖರನ್ನು ಭೇಟಿ ಮಾಡಿ ಹಿಂದಿರುಗುವೆ ಎಂದು ತಿಳಿಸಿದರು.
ಮುದ್ದಹನುಮೇಗೌಡ, ಗೌರಿಶಂಕರ್,ಸೋಮಣ್ಣ ಕಾಂಗ್ರೆಸ್ಸಿಗೆ: ಸಚಿವ ರಾಜಣ್ಣ ಸುಳಿವು!
ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನ ಗೆಲ್ಲುವುದು, ರಾಜ್ಯದಲ್ಲಿ ವರ್ಗಾವಣೆ ದಂಧೆ, ದುರಾಡಳಿತ, ಅಭಿವೃದ್ಧಿ ಕಾರ್ಯ ಸ್ಥಗಿತಕ್ಕೆ ಕಾರಣವಾದ ಸರ್ಕಾರದ ವಿರುದ್ಧವಾಗಿ ಅದರ ಚಳಿ ಜ್ವರ ಎರಡನ್ನೂ ಬಿಡಿಸಲು ದೊಡ್ಡ ಹೋರಾಟ ನಡೆಸಬೇಕಿದೆ. ಹೀಗಾಗಿ ವಿಜಯೇಂದ್ರ ಮುಂದೆ ದೊಡ್ಡ ಸವಾಲಿದೆ.
- ಆರ್.ಅಶೋಕ್ ಮಾಜಿ ಸಚಿವ
ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ: ಪರಣ್ಣ ಮುನವಳ್ಳಿ ಸಂತಸ
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಕ್ಕೆ ಮಾಜಿ ಶಾಸಕ ಪರಣ್ಣ ಮುನವಳ್ಳಿ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಿ.ವೈ. ವಿಜಯೇಂದ್ರ ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡುವಲ್ಲಿ ಮುಂಚೂಣಿ ನಾಯಕರು. ಎಲ್ಲ ಸಮುದಾಯಗಳ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಕಳೆದ ಐದಾರು ವರ್ಷಗಳಲ್ಲಿ ರಾಜ್ಯಾದ್ಯಂತ ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಸಂಚರಿಸಿ ಯುವಕರ ಆಶಾಕಿರಣರಾಗಿದ್ದಾರೆ. ಮುಂದಿನ ನಾಯಕರಾಗಿದ್ದಾರೆ. ಅವರ ಅಧ್ಯಕ್ಷತೆಯಲ್ಲಿ ಮುಂದೆ ಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಸುಮಾರು 25ಕ್ಕೂ ಹೆಚ್ಚು ಸಂಸದರು ಆಯ್ಕೆಯಾಗಿ ಮೊತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ