ಕಾಂಗ್ರೆಸ್ ಆಂತರಿಕ ಬೆಳವಣಿಗೆ ಬಗ್ಗೆ ನಾನು ಮಾತನಾಡುವುದಿಲ್ಲ: ಶಾಸಕ ಎಚ್.ಎಂ.ಗಣೇಶ್ ಪ್ರಸಾದ್

Published : Jun 27, 2025, 05:34 AM IST
HM Ganesh Prasad

ಸಾರಾಂಶ

ಆಡಳಿತರೂಢ ಕಾಂಗ್ರೆಸ್ ಪಕ್ಷದ ಆಂತರೀಕ ಬೆಳವಣಿಗೆ ಬಗ್ಗೆ ಕೆಲ ಹಿರಿಯ ಶಾಸಕರು ಮಾತನಾಡಿದ್ದಾರೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ತಿಳಿಸಿದರು.

ಮೈಸೂರು : ಆಡಳಿತರೂಢ ಕಾಂಗ್ರೆಸ್ ಪಕ್ಷದ ಆಂತರೀಕ ಬೆಳವಣಿಗೆ ಬಗ್ಗೆ ಕೆಲ ಹಿರಿಯ ಶಾಸಕರು ಮಾತನಾಡಿದ್ದಾರೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ತಿಳಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕ್ಷೇತ್ರದಲ್ಲಿ ಬಡವರ ಮನೆ ಹಂಚಿಕೆ ಕಾರ್ಯ ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿದೆ. ಮನೆಗಳ ಹಂಚಿಕೆಯಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆದಿಲ್ಲ. ಗುಂಡ್ಲುಪೇಟೆ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಸಾಕಷ್ಟು ಅನುದಾನ ನೀಡಿದೆ ಎಂದರು.

ಇತ್ತೀಚೆಗೆ ಮಲೆ ಮಹದೇಶ್ವರಬೆಟ್ಟದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 110 ಕೆರೆಗಳನ್ನು ತುಂಬಿಸಲು 475 ಕೋಟಿ ಅನುದಾನ ನೀಡಲು ಒಪ್ಪಿಗೆ ದೊರೆತಿದೆ. ಸಿಸಿ ರಸ್ತೆ ಕಾಮಗಾರಿಗೆ ಸಿಎಂ ಪರಿಹಾರ ನಿಧಿಯಿಂದ 25 ಕೋಟಿ ಅನುದಾನ ಬಂದಿದೆ. ಇದೇ ರೀತಿ ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಮಂಜೂರಾಗಿದೆ ಎಂದು ಅವರು ಹೇಳಿದರು.

ಕಾಡಂಚಿನ ಗ್ರಾಮಗಳಲ್ಲಿ ವನ್ಯಜೀವಿಗಳ ಹಾವಳಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಆನೆಗಳ ಹಾವಳಿ ತಡೆಗೆ ರೈಲ್ವೆ ಕಂಬಿ ತಡೆಬೇಲಿ ಜೊತೆಗೆ ಟ್ರೆಂಚ್ ತೋಡಲಾಗುತ್ತದೆ. ಕಾಡಂಚಿನ ಜನರು ತಮ್ಮ ಲಿಮಿಟ್ ಕ್ರಾಸ್ ಮಾಡಬಾರದು.

ಅರಣ್ಯಕ್ಕೆ ಅತಿಕ್ರಮ ಪ್ರವೇಶ ಮಾಡಬಾರದು, ಎಚ್ಚರಿಕೆ ವಹಿಸಬೇಕು ಎಂದರು.

ನನಗೆ ಇನ್ನೂ ಹೆಚ್ಚಿನ ಮತಗಳು ಬರಬೇಕಾಗಿತ್ತು. ನಂಬಿದವರೇ ಮೋಸ ಮಾಡಿದರು 

ಮೈಸೂರು : ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್‌ ನ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೈಸೂರು ತಾಲೂಕಿನಿಂದ ಮೂಗನಹುಂಡಿಯ ಎಂ. ಕೆಂಚಪ್ಪ 13 ಮತಗಳನ್ನು ಪಡೆದು ಜಯಗಳಿಸಿದರು.

ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 26 ಪ್ರತಿನಿಧಿಗಳು ಕೂಡ ಮತ ಚಲಾಯಿಸಿದ್ದು, ಅದರಲ್ಲಿ ಎಂ. ಕೆಂಚಪ್ಪ ಅವರು 13 ಮತಗಳನ್ನು ಪಡೆದು ಆಯ್ಕೆಯಾದರೆ ಪ್ರತಿಸ್ಪರ್ಧಿ ಸಿದ್ದರಾಜು 12 ಮತಗಳನ್ನು ಪಡೆದು ಪರಾಭವಗೊಂಡರು.

1 ಮತ ಕುಲಗೆಟ್ಟ ಮತವಾಗಿತ್ತು.

ನೂತನವಾಗಿ ಆಯ್ಕೆಯಾದ ಎಂ. ಕೆಂಚಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಶೀರ್ವಾದದಿಂದ ಸಹಕಾರ ಸಂಘದ ಸದಸ್ಯರ ಸಹಕಾರದಿಂದ ಒಂದು ಮತದಿಂದ ಜಯಗಳಿಸಿದ್ದೇನೆ. ಆದರೆ ನನಗೆ ಇನ್ನೂ ಹೆಚ್ಚಿನ ಮತಗಳು ಬರಬೇಕಾಗಿತ್ತು. ನಂಬಿದವರೇ ಮೋಸ ಮಾಡಿದರು ಎಂದು ಬೇಸರ ವ್ಯಕ್ತಪಡಿಸಿದರು.

ಈ ಬಾರಿ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೇ ಗೆದ್ದಿದ್ದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗುತ್ತಾರೆ. ನನ್ನ ಆಯ್ಕೆಗೆ ಸಹಕರಿಸಿದ ಎಲ್ಲಾ ಸದಸಸ್ಯರಿಗೆ, ಮುಖ್ಯಮಮಂತ್ರಿ ಸಿದ್ದರಾಮಯ್ಯ ಅವರಿಗೆ, ಡಾ. ಯತೀಂದ್ರ ಸಿದ್ಧರಾಮಯ್ಯ ಅವರಿಗೆ ಧನ್ಯವಾದ ಸಲ್ಲಿಸಿದರು.

ಈ ವೇಳೆ ಜಿಪಂ ಮಾಜಿ ಅಧ್ಯಕ್ಷ ಕೆ. ಮರೀಗೌಡ, ಕೂರ್ಗಳ್ಳಿ ಮಹದೇವ, ಜಿಪಂ ಮಾಜಿ ಸದಸ್ಯ ರಾಕೇಶ್ ಪಾಪಣ್ಣ, ಬೀರಿಹುಂಡಿ ಬಸವಣ್ಣ, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಬಸವರಾಜು, ಮೈದನಹಳ್ಳಿ ಶಿವಣ್ಣ, ತಾಪಂ ಮಾಜಿ ಸದಸ್ಯ ಸಿ.ಎಂ. ಸಿದ್ಧರಾಮೇಗೌಡ, ಜಿ.ಕೆ. ಬಸವಣ್ಣ, ಎಂ.ಟಿ. ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಬಿ. ಗುರುಸ್ವಾಮಿ, ನಾಗವಾಲ ನರೇಂದ್ರ, ಉದ್ಬೂರು ಕೃಷ್ಣ, ಗಡ್ಡಬಸಪ್ಪ, ಚಂದ್ರು, ಕನಕೇಗೌಡ, ಸುರೇಶ್, ಮಹೇಶ್, ಮಾದಪ್ಪ, ಬಸವರಾಜು, ಸಿದ್ದರಾಮು, ವರುಣ ಮಹೆಶ್ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌