ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಎನ್. ಜಯರಾಂ ನೇಮಕ

Published : Oct 02, 2023, 12:03 PM ISTUpdated : Oct 02, 2023, 12:14 PM IST
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಎನ್. ಜಯರಾಂ ನೇಮಕ

ಸಾರಾಂಶ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರನ್ನಾಗಿ ಹಿರಿಯ ಐಎಎಸ್‌ ಅಧಿಕಾರಿ ಎನ್. ಜಯರಾಮ್‌ ಅವರನ್ನು ನೇಮಕ ಮಾಡಲಾಗಿದೆ.

ಬೆಂಗಳೂರು (ಅ.02): ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಹಿರಿಯ ಐಎಎಸ್‌ ಅಧಿಕಾರಿ ಎನ್. ಜಯರಾಂ ಅವರನ್ನು ನೇಮಕ ಮಾಡಲಾಗಿದೆ. ಈ ಮೊದಲು ಬೆಂಗಳೂರು ನೀರು ಮತ್ತು ಒಳಚರಂಡಿ ಮಂಡಳಿಯ (ಬಿಡಬ್ಲ್ಯೂಎಸ್‌ಎಸ್‌ಬಿ) ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಜಯರಾಂ ಅವರನ್ನು ಬಿಡಿಎ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಆದರೆ, ಬಿಡಬ್ಲ್ಯೂಎಸ್‌ಎಸ್‌ಬಿ ಅಧ್ಯಕ್ಷರನ್ನಾಗಿ ಯಾರನ್ನೂ ಆಯ್ಕೆ ಮಾಡಲಾಗಿಲ್ಲ. 

ಇನ್ನು ಕಳೆದ ಮೇ ತಿಂಗಳಲ್ಲಿ ಹಿರಿಯ ಐಎಎಸ್‌ ಅಧಿಕಾರಿ ಎನ್‌.ಜಯರಾಂ ಅವರನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿತ್ತು. ಈ ವೇಳೆ ಅವರು ಬೆಂಗಳೂರು ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧ್ಯಕ್ಷರಾಗಿಯೂ ಮುಂದುವರೆದಿದ್ದರು. ಈವರೆಗೂ ಮುಖ್ಯಮಂತ್ರಿ ಕಾರ್ಯದರ್ಶಿಯಾಗಿದ್ದ ಎಂ.ಎಸ್‌.ಶ್ರೀಕರ್‌ ಅವರು ಹೆಚ್ಚುವರಿ ಕಾರ್ಯಭಾರ ಹೊಂದಿದ್ದರು. ಮತ್ತೊಬ್ಬ ಹಿರಿಯ ಐಎಎಸ್‌ ಅಧಿಕಾರಿ, ಮೂಲಸೌಕರ್ಯ ಇಲಾಖೆ ಅಪರಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತ ಅವರನ್ನು ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. 

ಶಿವಮೊಗ್ಗದಲ್ಲಿ ಇದೆಲ್ಲ ಏನ್ ಹೊಸದಾಗಿ ಮಾಡ್ತಾರಾ? ಗೃಹ ಸಚಿವ ಪರಮೇಶ್ವರ ಉಡಾಫೆ ಉತ್ತರ!

ಪ್ರಭಾವಿ ವ್ಯಕ್ತಿಯ ಸಂಬಂಧಿ ಜಯರಾಂ: 2004ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಜಯರಾಮ್‌ ಅವರು ಈಗ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಅವರು ಈ ಹಿಂದೆ ಮೈಸೂರಿನಲ್ಲಿ ಮುಡಾ ಆಯುಕ್ತರಾಗಿ, ಬೆಳಗಾವಿ ಜಿಲ್ಲಾಧಿಕಾರಿಯಾಗಿ, ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿ ಮತ್ತು ಇತರ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಅವರು ಮೈಸೂರು ಮೂಲದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಎಂಎಲ್ಸಿ ಸಂದೇಶ್ ನಾಗರಾಜ್ ಅವರ ಅಳಿಯ ಆಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: BBK 12 - ಸ್ಪಂದನಾ ಸೋಮಣ್ಣ ಮುಂದೆ ರಜತ್‌ ಅಸಭ್ಯ ವರ್ತನೆ ಮಾಡಿದ್ರು - ಧ್ರುವಂತ್‌ ವಿರುದ್ಧ ರಜತ್‌ ಆರೋಪ