IAS vs IPS: ರೋಹಿಣಿ ಸಿಂಧೂರಿಗೆ ರಿಲೀಫ್‌ ಕೊಡದ ಕೋರ್ಟ್: ಡಿ. ರೂಪಾ ಸೇರಿ 66 ಮಂದಿಗೆ ಸಮನ್ಸ್ ಜಾರಿ

By Sathish Kumar KHFirst Published Feb 23, 2023, 4:01 PM IST
Highlights

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ವಿರುದ್ಧ ಮಾನಹಾನಿಕರ ಪೋಸ್ಟ್‌ ಹಾಗೂ ಬರಹಗಳನ್ನು ಹಂಚಿಕೊಳ್ಳದಂತೆ ಮಾಧ್ಯಮಗಳು ಹಾಗೂ ಐಪಿಎಸ್‌ ಅಧಿಕಾರಿ ರೂಪಾ ಅವರಿಗೆ ತಡೆಯಾಜ್ಞೆ ತರುವಲ್ಲಿ ಯಶಸ್ವಿ ಆಗಿದ್ದಾರೆ

ಬೆಂಗಳೂರು (ಫೆ.23): ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ಗೊಂದಲ ಎಬ್ಬಿಸಿರುವ ಐಪಿಎಸ್‌ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಜಟಾಪಟಿ ನಿನ್ನೆ ಕೋರ್ಟ್‌ ಮೆಟ್ಟಿಲೇರಿತ್ತು. ರೂಪಾ ಹಾಗೂ ಮಧ್ಯಮಗಳ ವಿರುದ್ಧ ತಮ್ಮ ಬಗ್ಗೆ ಯಾವುದೇ ವಿಚಾರಗಳನ್ನು ಹಂಚಿಕೊಳ್ಳದಂತೆ ತಡೆಯಾಜ್ಞೆ ತರಲು ರೋಹಿಣಿ ಸಿಂಧೂರಿ ಮನವಿ ಮಾಡಿದ್ದಕ್ಕೆ ಜಯ ಸಿಕ್ಕಿದೆ. ಇನ್ನು ಮಾಧ್ಯಮಗಳು ಹಾಗೂ ರೂಪಾ ಸೇರಿದಂತೆ 66 ಮಂದಿಗೆ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದೆ. 

ತಮ್ಮ ವಿರುದ್ಧ ಡಿ. ರೂಪಾ ಅವರು ಆರೋಪ ಮಾಡುತ್ತಿದ್ದ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಪೊಲೀಸ್‌ ಇಲಾಖೆಗೆ ದೂರು ನೀಡಿದ್ದ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರು ನಿನ್ನೆ ಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ, ಈ ವೇಳೆ ಡಿ. ರೂಪಾ ಅವರು ಸೇರಿದಂತೆ ತಮ್ಮ ವೈಯಕ್ತಿಕ ವಿಚಾರಗಳನ್ನು ಹಂಚಿಕೊಂಡಿದ್ದ ಮಾಧ್ಯಮಗಳು ಸೇರಿ 66 ಜನರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು. ಈ ವೇಳೆ ಇನ್ನು ಮುಂದೆ ಡಿ. ರೂಪಾ ಸೇರಿದಂತೆ ಎಲ್ಲ ಮಾಧ್ಯಮಗಳು ತಮ್ಮ ವಿಚಾರವನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಹೊರಡಿಸುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು. ಈ ಕುರಿತು ವಿಚಾರಣೆ ನಡೆಸಿದ್ದ ನ್ಯಾಯಾಲಯ ಆದೇಶವನ್ನು ಕೋರ್ಟ್‌ ಕಾಯ್ದಿರಿಸಿತ್ತು. 

Latest Videos

IAS vs IPS: ಡಿ ರೂಪಾ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ ರೋಹಿಣಿ ಸಿಂಧೂರಿ: ನಿರ್ಬಂಧಕಾಜ್ಞೆಗೆ ಮನವಿ

ಮಾ.7ಕ್ಕೆ ವಿಚಾರಣೆ ಮುಂದೂಡಿಕೆ:  ಇಂದು ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಪರ ವಕೀಲರ ವಾದವನ್ನು ಆಲಿಸಿದ ಕೋರ್ಟ್‌, ತಡೆಯಾಜ್ಞೆಯನ್ನು ಕೊಡುವ ಮೊದಲು, ಐಪಿಎಸ್‌ ಅಧಿಕಾರಿ ಡಿ.ರೂಪಾ‌ ಅವರು ಕೂಡ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ. ಈ ಅರ್ಜಿ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯವು ಮಾರ್ಚ್ 7ಕ್ಕೆ ಮುಂದೂಡಿದೆ. ಈ ಅವಧಿಯಲ್ಲಿ ಡಿ. ರೂಪಾ ಪರ ವಕೀಲರು ಕೂಡ ತಮ್ಮ ಆಕ್ಷೇಪಣೆಗಳನ್ನು ಕೋರ್ಟ್‌ಗೆ ಸಲ್ಲಿಕೆ ಮಾಡಬಹುದು. ನಂತರ, ಇಬ್ಬರ ವಾದಗಳನ್ನು ಪರಿಶೀಲಿಸಿ ಆದೇಶ ನೀಡಬಹುದು.

ಮಾನಹಾನಿಕರ ಬರಹಕ್ಕೆ ನಿರ್ಬಂಧ: ಐಎಎಸ್‌ ಅಧಿಕಾರಿ ರೋಹಿಣಿ ಸೀಂಧೂರಿ ಅವರ ವಿರುದ್ಧ ಪದೇ ಪದೆ ಮಾನಹಾನಿಕರ ಪೋಸ್ಟ್‌ಗಳನ್ನು ಮಾಡುತ್ತಿದ್ದ ಡಿ.ರೂಪಾ ಹಾಗೂ ಅಂತಹ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದ ಮಾಧ್ಯಮಗಳಿಗೆ ನ್ಯಾಯಾಲಯ ತಡೆಯಾಜ್ಞೆಯನ್ನು ಹೊರಡಿಸಿದೆ. ಈ ಮೂಲಕ ಸರ್ಕಾರದ ಆದೇಶಕ್ಕೂ ಕ್ಯಾರೇ ಎನ್ನದೇ ಸಾಮಾಜಿಕ ಜಾಲತಾಣದಲ್ಲಿ ರೋಹಿಣಿ ಸಿಂಧೂರಿ ವಿರುದ್ಧ ಮಾನಹಾನಿಕರ ಪೋಸ್ಟ್‌ಗಳನ್ನು ಮಾಡುತ್ತಿದ್ದ ಡಿ. ರೂಪಾ ಅವರ ಬಾಯಿಯನ್ನು ಮುಚ್ಚಿಸುವಲ್ಲಿ ನ್ಯಾಯಾಲಯ ಯಶಸ್ವಿಯಾಗಿದೆ. ಈ ಮೂಲಕ ಮೀಡಿಯಾ ಹಾಗೂ ಸೋಷಿಯಲ್ ಮೀಡಿಯದಲ್ಲಿ ಮಾನಹಾನಿಕರ‌ ಹೇಳಿಕೆ ಅಥವಾ ಬರಹಕ್ಕೆ ನಿರ್ಬಂಧ ವಿಧಿಸಲಾಗಿದೆ.

IAS vs IPS: ರೋಹಿಣಿ ಸಿಂಧೂರಿಯಿಂದ ಇಬ್ಬರು ಅಧಿಕಾರಿಗಳ ಸಾವು: ಕುಟುಂಬ ಉಳಿಸಿಕೊಳ್ಳಲು ಪರದಾಟ- ಡಿ. ರೂಪಾ

ರೂಪಾ ಸೇರಿ 66 ಪ್ರತಿವಾದಿಗಳಿಗೆ ಸಮನ್ಸ್‌ ಜಾರಿ: ರೋಹಿಣಿ ಸಿಂಧೂರಿ ಅವರು ತಮ್ಮ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್‌ಗಳನ್ನು ಹಾಕಿದ್ದ ಐಪಿಎಸ್‌ ಅಧಿಕಾರಿ ಡಿ. ರೂಪಾ ಹಾಗೂ ಅವುಗಳನ್ನು ಹಂಚಿಕೊಂಡಿದ್ದ ಮಾಧ್ಯಮಗಳು ಸೇರಿ ಒಟ್ಟು 66 ಜನರನ್ನು ಪ್ರತಿವಾದಿಗಳನ್ನಾಗಿ ಮಾಡಿ ಕೋರ್ಟ್‌ ಮೆಟ್ಟಿಲೇರಿದ್ದರು. ಈ ಪ್ರಕರಣದಲ್ಲಿ ರೂಪಾ ಸೇರದಂತೆ ಎಲ್ಲಾ ಪ್ರತಿವಾದಿಗಳಿಗೂ ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಿಲಾಗಿದೆ.

click me!