ಇಂದು ಸಿಂಧನೂರು ಪಟ್ಟಣಕ್ಕೆ ಕಿಚ್ಚ ಸುದೀಪ್! ಅಭಿಮಾನಿಗಳಿಗೆ ಹಬ್ಬ, ಏನಿದು, ಎಲ್ಲಿದೆ ಕಾರ್ಯಕ್ರಮ? ಇಲ್ಲಿದೆ ವಿವರ

Published : May 03, 2026, 08:31 AM IST
ichcha Sudeep will attend the massive social program organized by the Basanagouda Foundation in Sindhanur

ಸಾರಾಂಶ

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಬಸನಗೌಡ ಫೌಂಡೇಶನ್ ವತಿಯಿಂದ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಮಾರಂಭದಲ್ಲಿ ಉಚಿತ ಸಾಮೂಹಿಕ ವಿವಾಹ ಮತ್ತು 'ಉಡಿ ತುಂಬುವ' ಕಾರ್ಯಕ್ರಮ ನಡೆಯಲಿದ್ದು, ನಟ ಕಿಚ್ಚ ಸುದೀಪ್, ಸಾಧುಕೋಕಿಲ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ.

ರಾಯಚೂರು (ಮೇ.3): ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣ ಇಂದು ಹಬ್ಬದ ವಾತಾವರಣಕ್ಕೆ ಸಾಕ್ಷಿಯಾಗುತ್ತಿದೆ. ಬಸನಗೌಡ ಫೌಂಡೇಶನ್ ವತಿಯಿಂದ ಆಯೋಜಿಸಲಾದ ಬೃಹತ್ ಸಮಾರಂಭದಲ್ಲಿ ಭಾಗವಹಿಸಲು ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ಹಾಗೂ ಹಾಸ್ಯ ನಟ ಸಾಧುಕೋಕಿಲ ಇಂದು ಆಗಮಿಸುತ್ತಿದ್ದಾರೆ.

ಬೃಹತ್ ಸಾಮಾಜಿಕ ಕಾರ್ಯಕ್ರಮದಲ್ಲಿ ಕಿಚ್ಚ ಭಾಗಿ

ಸಿಂಧನೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಈ ಅದ್ಧೂರಿ ಸಮಾರಂಭ ಆಯೋಜನೆಗೊಂಡಿದೆ. ಕಾರ್ಯಕ್ರಮದಲ್ಲಿ ಉಚಿತ ಸಾಮೂಹಿಕ ವಿವಾಹ ಹಾಗೂ 5001 ಮಹಿಳೆಯರಿಗೆ 'ಉಡಿ ತುಂಬುವ' ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ರಾಜಕೀಯ ನಾಯಕರ ದಂಡು

ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಾಲ್ಗೊಳ್ಳಲಿದ್ದಾರೆ. ಅವರೊಂದಿಗೆ ಸಚಿವರಾದ ಈಶ್ವರ್ ಖಂಡ್ರೆ, ಆರ್.ವಿ. ತಿಮ್ಮಾಪುರ, ಮಧು ಬಂಗಾರಪ್ಪ ಹಾಗೂ ಎನ್.ಎಸ್‌. ಬೋಸರಾಜು ಆಗಮಿಸಲಿದ್ದಾರೆ.

ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಸೇರಿದಂತೆ ಹತ್ತಾರು ಶಾಸಕರು ಸಾಕ್ಷಿಯಾಗಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಸಮಾರಂಭ ಆರಂಭವಾಗಲಿದ್ದು, ನೆಚ್ಚಿನ ನಟ ಹಾಗೂ ನಾಯಕರನ್ನು ನೋಡಲು ಜನರು ಕಾತುರರಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂದು ಸಿಂಧನೂರು ಪಟ್ಟಣಕ್ಕೆ ಡಿಕೆಶಿ ಭೇಟಿ, ಬೃಹತ್ ಸಮಾರಂಭಕ್ಕೆ ಗಣ್ಯರ ದಂಡು, ಕಾರ್ಯಕ್ರಮಕ್ಕೆ ಬರುವ ಜನರಿಗೆ ಭರ್ಜರಿ ಭೋಜನ!
India's energy security strategy: ವಿದೇಶಿ ಹಿಡಿತ ತಪ್ಪಿಸುತ್ತಿದೆ ಭಾರತದ ಇಂಧನ ಭದ್ರತೆ