4 ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಗುರುತಿಸಿ

By Kannadaprabha NewsFirst Published Sep 12, 2021, 7:40 AM IST
Highlights
  • ವಿವಿಧ ವಸತಿ ಯೋಜನೆಯಡಿ ನಾಲ್ಕು ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ
  • ತಕ್ಷಣ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

ಬೆಂಗಳೂರು (ಸೆ.12): ವಿವಿಧ ವಸತಿ ಯೋಜನೆಯಡಿ ನಾಲ್ಕು ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ತಕ್ಷಣ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. 

ಈ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಕೇಂದ್ರ ಸರ್ಕಾರದಿಂದ ನಾಲ್ಕು ಲಕ್ಷ ಹೊಸ ಮನೆಗಳ ಗುರಿಗೆ ಅನುಮೋದನೆ ದೊರೆಯದಿದ್ದಲ್ಲಿ ಅಥವಾ ಅದಕ್ಕಿಂತ ಕಡಿಮೆ ಮನೆಗಳಿಗೆ ಅನುಮೋದನೆ ದೊರೆತರೆ ಉಳಿದ ಮನೆಗಳನ್ನು ರಾಜ್ಯದ ವಸತಿ ಯೋಜನೆಯಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿತ್ತು.

ರಾಜ್ಯದ ಯೋಜನೆಗಳಿಗೆ ಕೇಂದ್ರದ ಬಂಪರ್‌ ನೆರವು

 ಅದರಂತೆ ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದ ವಸತಿ ರಹಿತರಿಗಾಗಿ ವಸತಿ ಯೋಜನೆಯಡಿ ನಾಲ್ಕು ಲಕ್ಷ ಹೊಸ ಮನೆಗಳಿಗೆ ಎದುರಾಗಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಮುಖ್ಯಮಂತ್ರಿಯವರು ಆದೇಶಿಸಿದ್ದಾರೆ.

click me!